ಬೆಂಗಳೂರು, (ಸೆ.04); ರೂಪಾಂತರಿ ಚಿಕುನ್ ಗುನ್ಯಾದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದು, ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅಪೋಲೋ ಆಸ್ಪತ್ರೆ ಯಿಂದ ವಾಪಸಾದ ಬಳಿಕ ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ನಾನು ಆರೋಗ್ಯ ವಾಗಿದ್ದೇನೆ. ಯಾರೂ ಅಂತಕ ಪಡಬೇಡಿ. ವೈದ್ಯರ ಸಲಹೆ ಮೇರೆಗೆ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ. ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….