ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗಾಗಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 05): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ (ಪ್ರವರ್ಗ-1, 2ಎ, 3ಎ ಮತ್ತು 3ಬಿ) ಕಾನೂನು ಪಧವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಈ ಕಛೇರಿಯಲ್ಲಿ ನಿಗದಿತ ಅವಧಿಯೊಳಗೆ ಕಛೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಲಾದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿಗೆ  ಅಕ್ಟೋಬರ್ 04 ರೊಳಗೆ ಸಲ್ಲಿಸಬೇಕು ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಬಂಧನೆಗಳು:

1. ಅಭ್ಯರ್ಥಿಯು ಕಾನೂನು ಪದವೀಧರರಾಗಿದ್ದು ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿಯನ್ನು ಮುಗಿಸಿ 2 (ಎರಡು) ವರ್ಷಗಳು ಮೀರಿರಬಾರದು.

2. ಅಭ್ಯರ್ಥಿಗಳು ಸರ್ಕಾರದ ಆದೇಶ ಸಂಖ್ಯೆ: ಎಸ್.ಡಬ್ಲ್ಯೂ.ಡಿ 225, ಬಿ.ಸಿ.ಎ 2000, ದಿನಾಂಕ, 30.03.2002 ರ ಆದೇಶದ ಅನುಸಾರ ಹಿಂದುಳಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗೀಕರಣಕ್ಕೆ ಒಳಪಟ್ಟಿರಬೇಕು ಹಾಗೂ ಮೇಲ್ಕಂಡ ವರ್ಗಗಳಿಗೆ ನಿಗದಿಪಡಿಸಲಾದ ಜಾತಿ ಆದಾಯ  ಪ್ರಮಾಣ ಪತ್ರಗಳೊಂದಿಗೆ ವಿವರಗಳನ್ನು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಲಗತ್ತಿಸಿ  ಸಲ್ಲಿಸಬೇಕು.

3. ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ. 3.50ಲಕ್ಷ ಹಾಗೂ ಪ್ರವರ್ಗ 2 (ಎ), 3 (ಎ) ಅಥವಾ 3 (ಬಿ) ಅಭ್ಯರ್ಥಿಗಳಿಗೆ ರೂ. 2.50 ಲಕ್ಷಗಳ ಮಿತಿ ಇರಬೇಕು.

4. ಭರ್ತಿ ಮಾಡಲಾದ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು ಪ್ರವರ್ಗ-1ಕ್ಕೆ 40 ವರ್ಷ ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ 38 ವರ್ಷಗಳನ್ನು ಮೀರಿರಬಾರದು.

5. ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ತರಬೇತಿ ಅವಧಿ ಇದ್ದು, ಈ ಅವಧಿಯೊಳಗೆ ತರಬೇತಿಯನ್ನು ಬಿಡಲು ಅವಕಾಶವಿರುವುದಿಲ್ಲ ಹಾಗೂ ಅಭ್ಯರ್ಥಿಯು ಸುಳ್ಳು ಮಾಹಿತಿ ನೀಡಿದಲ್ಲಿ ಅಥವಾ ತರಬೇತಿ ಅವಧಿಯ ಮಧ್ಯದಲ್ಲಿ ತರಬೇತಿಯಿಂದ ಬಿಟ್ಟು ಹೋದಲ್ಲಿ ಸರ್ಕಾರ ಅವರಿಗಾಗಿ ಖರ್ಚು ಮಾಡಿದ ಹಣವನ್ನು ವರ್ಷಕ್ಕೆ ಶೇ.10 ರ ಬಡ್ಡಿಯೊಂದಿಗೆ ಭೂ ಕಂದಾಯದ ಬಾಕಿ ಎಂದು ಪರಿಗಣಿಸಿ ವಸೂಲು ಮಾಡಲಾಗುವುದು. ಆದರೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ.

6. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ. 4,000/- ಗಳ ತರಬೇತಿ ಭತ್ಯೆಯನ್ನು ದಿನಚರಿ ಆಧಾರದ ಮೇರೆಗೆ ನೀಡಲಾಗುವುದು. 

7. ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ /ಸರ್ಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ವರ್ಷಗಳು ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಕೀಲರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನು ತರಬೇತಿ ಪಡೆಯುವ ಸಲುವಾಗಿ ತರಬೇತಿಗೆ ನಿಯೋಜಿಸಲಾಗುವುದು.

8. ಆಯ್ಕೆಯಾದ ಅಭ್ಯರ್ಥಿಯು ಈ ಇಲಾಖೆಯ ನಿಬಂಧನೆಗಳು ಹಾಗೂ ಕಾಲಕಾಲಕ್ಕೆ ಹೊಂದಿರುವ ಸರ್ಕಾರದ ಆದೇಶಗಳಿಗೆ ಬದ್ಧನಾಗಿರುತ್ತೇನೆಂದು ಮುಚ್ಚಳಿಕೆಯನ್ನು ಬರೆದು ಕೊಡಬೇಕು. 

9. ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು, ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇವರ ಕಛೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದು.

10. ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯ ಸಂದರ್ಶನದ ದಿನಾಂಕ ಹಾಗೂ ಸ್ಥಳವನ್ನು ತಿಳಿಸಿದಾಗ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

11. ಅಭ್ಯರ್ಥಿಗಳು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳ ದೃಢೀಕರಣ ಪ್ರತಿ ಹಾಗೂ ಜನ್ಮ ದಿನಾಂಕದ ಆಧಾರಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಟಿ.ಸಿ ದೃಢೀಕೃತ ಪ್ರತಿಯನ್ನು ಲಗತ್ತಿಸಬೇಕು. 

12. ಅರ್ಜಿಗಳನ್ನು ಸ್ವೀಕರಿಸಲು ಅಕ್ಟೊಬರ್ 04 ಕೊನೆದಿನವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!