ದೊಡ್ಡಬಳ್ಳಾಪುರ, (ಸೆ.11); ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವುನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಯಲಹಂಕ – ದೊಡ್ಡಬಳ್ಳಾಪುರ ನಡುವಿನ ಹೊಸಹುಡ್ಯಾ ಗೇಟ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಪ್ರದೀಪ್ (40 ವರ್ಷ) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಮಾರಸಂದ್ರದಲ್ಲಿ ಜಿಮ್ ಟ್ರೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ 28 ವರ್ಷದ ರೋಹಿತ್ ಠಾಕೂರ್ ಎಂದು ಗುರುತಿಸಲಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….