ಬೆಂ.ಗ್ರಾ.ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ದೊಡ್ಡಬಳ್ಳಾಪುರದಲ್ಲಿ..!: ಸಿದ್ಧತೆ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 11):2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾ ಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸುಮಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2024-25 ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಈ ಕ್ರೀಡಾಕೂಟವು ಸೆಪ್ಟೆಂಬರ್ 27 ಮತ್ತು 28 ಎರಡು ದಿನಗಳ ಕಾಲ ನಡೆಯಲಿದೆ‌‌. ಸಮಾರಂಭದ   ಉದ್ಘಾಟನೆಯನ್ನು ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಿ ಉದ್ಘಾಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ತಾಲ್ಲೂಕು ಮಟ್ಟದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದ್ದು, ಸೆಪ್ಟೆಂಬರ್ 25 ರಂದು ದೇವನಹಳ್ಳಿ (ಟೌನ್ ಕ್ರೀಡಾಂಗಣ), ದೊಡ್ಡಬಳ್ಳಾಪುರ (ಭಗತ್ ಸಿಂಗ್ ಕ್ರೀಡಾಂಗಣ) ಹಾಗೂ ಹೊಸಕೋಟೆ (ಚನ್ನಬೈರೇಗೌಡ ಕ್ರೀಡಾಂಗಣ) ದಲ್ಲಿ ಏಕಕಾಲದಲ್ಲಿ  ಚಾಲನೆಗೊಳ್ಳಲಿದೆ.

ಸೆಪ್ಟೆಂಬರ್ 24 ರಂದು ನೆಲಮಂಗಲ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದೆ‌ ಎಂದು ತಿಳಿಸಿದರು. 

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಂಘಟನೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೈಹಿಕ ಶಿಕ್ಷಕರ ಸೇವೆ ಆಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆ್ಯಂಬುಲೆನ್ಸ್ ಮತ್ತು ವೈದ್ಯರ ವ್ಯವಸ್ಥೆ, ಜಿಲ್ಲಾ, ತಾಲ್ಲೂಕು ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಿ ಸಮಾರಂಭದಲ್ಲಿ ಕುಡಿಯುವ ನೀರು, ಉಟೋಪಹಾರ ಕಲ್ಪಿಸಲು ಸಂಬಂಧಿಸಿದ‌ ಅಧಿಕಾರಿಗಳಿಗೆ‌  ಸೂಚಿಸಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ರಮೇಶ್ ಸೇರಿದಂತೆ ಜಿಲ್ಲಾ‌ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!