ವೈದ್ಯರ ಮೇಲೆ ಚಪ್ಪಲಿಯಿಂದ ಹಲ್ಲೆ: ಮಹಿಳೆಯ ಬಂಧನ| ವಿಡಿಯೋ

ಚಿಕ್ಕಮಗಳೂರು, (ಸೆ.11); ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರಿಗೆ ಮಹಿಳೆಯೋರ್ವರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ನಡೆದಿದ್ದು, ಈ ಸಂಬಂಧ ಹಲ್ಲೆ ನಡೆಸಿರುವ ಮಹಿಳೆ ಹಾಗೂ ಅವರ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

ಇರ್ಫಾನ್ ಎಂಬುವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸಹೋದರಿ ತಸ್ಲಿಂ ಅವರೊಂದಿಗೆ ಮಂಗಳವಾರ ಆಸ್ಪತ್ರೆಗೆ ಆಗಮಿಸಿದ್ದರು. ತುರ್ತು ಘಟಕದಲ್ಲಿ ಕರ್ತವ್ಯದಲ್ಲಿದ್ದ ವೈದ್ಯ ಡಾ.ವೆಂಕಟೇಶ್ ಅವರು ಇರ್ಫಾನ್ ಅವರಿಗೆ ಚಿಕಿತ್ಸೆ ನೀಡಿ, ಬಳಿಕ ಅದೇ ಸ್ಥಳದಲ್ಲಿರುವ ಕೊಠಡಿಯಲ್ಲಿ ಬೇರೆ ರೋಗಿಗಳಿಗೆ ಚಿಕಿತ್ಸೆ ನೀಡಲು ಸಮಾಲೋಚನೆ ನಡೆಸಿರುವ ವೇಳೆ ತಸ್ಲಿಂ ಅವರು ದಿಢೀರನೇ ಹಲ್ಲೆ ನಡೆಸಿ ಚಪ್ಪಲಿಯಿಂದ ಹೊಡೆದಿದ್ದಾರೆ.

ಈ ವಿಷಯ ಆಸ್ಪತ್ರೆಯ ಸಿಬ್ಬಂದಿಗೆ ತಿಳಿಯುತ್ತಿದ್ದಂತೆ ಕರ್ತವ್ಯ ಮೊಟಕುಗೊಳಿಸಿ ಆಸ್ಪತ್ರೆಯ ಮುಂಭಾಗದಲ್ಲಿ ಜಮಾಯಿಸಿದರು. ನಂತರ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಮೋಹನ್‌ಕುಮಾರ್‌ ವೈದ್ಯರೊಂದಿಗೆ ಎಸ್‌ಪಿ ಕಚೇರಿಗೆ ತೆರಳಿ ಎಎಸ್‌ಪಿ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿ ವೈದ್ಯರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಆಸ್ಪತ್ರೆಗೆ ಆಗಮಿಸಿದ ಎಎಸ್‌ಪಿ ಕೃಷ್ಣಮೂರ್ತಿ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ವೈದ್ಯರ ಹಾಗೂ ಸಿಬ್ಬಂದಿ ರಕ್ಷಣೆಗೆ ನಾವಿದ್ದೇವೆ. ಆಸ್ಪತ್ರೆಯಲ್ಲಿ ಈಗಾಗಲೇ ಪೊಲೀಸರು ಕರ್ತವ್ಯ ನಿರ್ವಹಿಸುತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ರೋಗಿಗಳ ಹಿತದೃಷ್ಟಿಯಿಂದ ಪ್ರತಿಭಟನೆಯನ್ನು ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು.

ಆದರೆ ಪ್ರತಿಭಟನಾಕಾರರು ಹಲ್ಲೆ ನಡೆಸಿರುವ ಮಹಿಳೆಯನ್ನು ಬಂಧಿಸುವವರೆಗೂ ಪ್ರತಿಭಟನೆ ಯಿಂದ ಹಿಂದೆ ಸರಿಯಲ್ಲ ಎಂದು ಪಟ್ಟುಹಿಡಿದರು. ಬಳಿಕ ಆಸ್ಪತ್ರೆಯಿಂದ ಮೆರವಣಿಗೆ ಹೊರಟ ವೈದ್ಯರು ಹಾಗೂ ಸಿಬ್ಬಂದಿ ನಗರ ಪೊಲೀಸ್ ಠಾಣೆಯ ಎದುರು ಧರಣಿ ಕುಳಿತರು. ಇವರಿಗೆ ಕನ್ನಡ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದರು.

ಡಾ.ವೆಂಕಟೇಶ್ ನೀಡಿರುವ ದೂರಿನನ್ವಯ ಮಹಿಳೆ ಹಾಗೂ ಆತನ ಸಹೋದರನನ್ನು ಬಂಧಿಸಿರುವ ವಿಷಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನಾ ನಿರತರಿಗೆ ತಿಳಿಸುತ್ತಿದ್ದಂತೆ ವೈದ್ಯರು ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾದರು.

ಪ್ರತಿ ದೂರು: ತಮ್ಮ ಸಹೋದರ ಇರ್ಫಾನ್‌ಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ.ವೆಂಕಟೇಶ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಸ್ಲಿಂ ಅವರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….<!–

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]