ಆನೇಕಲ್, (ಸೆ.11); ಇತ್ತೀಚಿನ ದಿನಗಳಲ್ಲಿ ಹಿಂದಿ ಭಾಷಿಕರು ಕನ್ನಡಿಗರ ಮೇಲೆ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂಬ ಸಾರ್ವಜನಿಕ ವಲಯದಲ್ಲಿನ ಆರೋಪದ ಬೆನ್ನಲ್ಲೇ, ಹಿಂದಿಯಲ್ಲಿ ಮಾತನಾಡಲಿಲ್ಲವೆಂಬ ಕಾರಣಕ್ಕೆ ಕನ್ನಡಿಗ ಕಾರ್ಮಿಕನ ಮೇಲೆ ಹಲ್ಲೆ ಮಾಡಿರುವ ಘಟನೆ ಆನೆಕಲ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ಆನೇಕಲ್ ನ ಕಾರ್ಖಾನೆಯೊಂದರಲ್ಲಿ ಉತ್ತರ ಪ್ರದೇಶದ ಕಾರ್ಮಿಕರಿಂದ ಕನ್ನಡಿಗ ಶಿವಲಿಂಗ ಎಂಬುವರ ಮೇಲೆ ಹಲ್ಲೆ ನಡೆದಿದ್ದು ಶಿವಲಿಂಗ ಕುತ್ತಿಗೆ ಕಿವಿ ಹಾಗೂ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗಳಾಗಿವೆ ಎಂದು ವರದಿಯಾಗಿದೆ.
ಕಳೆದೊಂದು ವರ್ಷದಿಂದ ಉತ್ತರಪ್ರದೇಶದ ಕಾರ್ಮಿಕರು ಆನೇಕಲ್ನ ಮಗ್ಗವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸದಾಗಿ ಕೆಲಸಕ್ಕೆ ಸೇರಿದ್ದ ಶಿವಲಿಂಗ ಹಾಗೂ ಹಿಂದಿ ಭಾಷಿಕ ಕಾರ್ಮಿಕರ ನಡುವೆ ಇಂದು ಬೆಳಿಗ್ಗೆ ಭಾಷೆಯ ವಿಚಾರಕ್ಕೆ ಗಲಾಟೆ ನಡೆದಿದೆ.
ಯು.ಪಿ ಕಾರ್ಮಿಕರು ಹಿಂದಿಯಲ್ಲಿ ಮಾತನಾಡುವಂತೆ ಶಿವಲಿಂಗರವರಿಗೆ ತಾಕೀತು ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿವಲಿಂಗ್ ಇದು ನಮ್ಮ ಊರು ನೀವೇ ಕನ್ನಡದಲ್ಲಿ ಮಾತನಾಡಿ ಎಂದು ವಾದಿಸಿದ್ದಾರೆ. ಇಷ್ಟಕ್ಕೇ ಸಿಟ್ಟಿಗೆದ್ದ ಹಿಂದಿ ಭಾಷಿಕ ಕಾರ್ಮಿಕರು ಶಿವಲಿಂಗ ಮೇಲೆ ಹಲ್ಲೆ ನಡೆಸಿದ್ದಾರಂತೆ.
ಈ ಘಟನೆಯಲ್ಲಿ ಗಾಯಗೊಂಡ ಶಿವಲಿಂಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….