ನಾಗಮಂಗಲ ಗಲಾಟೆ 52 ಜನರ ಬಂಧನ: ಗೃಹ ಸಚಿವ ಪರಮೇಶ್ವರ

ಬೆಂಗಳೂರು, (ಸೆ.12): ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ಆಗಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಘಟನೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತಂದಿದ್ದಾರೆ. ದೊಡ್ಡ ಗಲಾಟೆಎಂದರು.

ಮೆರವಣಿಗೆ ವೇಳೆ ಕಲ್ಲು ತೂರಾಟವಾದಾಗ ಒಬ್ಬರಿಗೊಬ್ಬರಿಗೆ ಘರ್ಷಣೆ ಮಾಡಿಕೊಂಡಿದ್ದಾರೆ. ಆನಂತರ ಎಲ್ಲವೂ ಸರಿ ಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಹತೋಟಿಗೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ. ಘರ್ಷಣೆ ಮಾಡಿಕೊಂಡಿದ್ದಾರೆ, ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗುವುದಿಲ್ಲ. ಇದನ್ನು ಹೆಚ್ಚು ಬೆಳೆಯಲು ಬಿಡುವುದಿಲ್ಲ, ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದು ಬೇಡ ಎಂದು ಮನವಿ ಮಾಡಿದರು.

ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ. ಗಲಭೆಗೆ ಸಂಬಂಧಿಸಿದಂತೆ ಎರಡು ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅದನ್ನು ಆಧರಿಸಿ ಯಾರೆಲ್ಲ ಕಲ್ಲು ತೂರಿದ್ದಾರೆ, ಬೆಂಕಿ ಹಾಕಿದ್ದಾರೆ ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗು ಕಲ್ಲು ಏಟು ಬಿದ್ದಿದ್ದು, ಓರ್ವ ಏಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ರೀತಿ ಕಾಣುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಘಟನೆಗೆ ಅತಿಯಾದ ಓಲೈಕೆಯೇ ಕಾರಣ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಅವರು ಈ ಹಿಂದೆ ಯಾವ ರೀತಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ ಎಂದರು.

ಇದರಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸರಿಗೆ ಬಿಟ್ಟರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಸಲಹೆ ಕೊಡುವುದಾದರೆ ಸ್ವಾಗತ ಮಾಡುತ್ತೇನೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಕುರಿತು ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ಪಿಎಸ್ಐ ಪರೀಕ್ಷೆ ಸೆ.28ಕ್ಕೆ: ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು.

ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ  ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು.

ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]