ಮೊದಲ ಹಂತದ 100 ನೂತನ BMTC ಬಸ್ ಗಳ ಲೋಕಾರ್ಪಣೆ: ಒಟ್ಟು 840 ನೂತನ‌ ಬಸ್ ಗಳು BMTC ಸೇರಲಿವೆ ಎಂದ ಸಿಎಂ

ಬೆಂಗಳೂರು, (ಸೆ 12): ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.  

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. 

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು. 

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದರು.

ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.‌

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು. 

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]