ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ: ಆರ್.ಅಶೋಕ ವಾರ್ನಿಂಗ್

ಬೆಂಗಳೂರು, (ಸೆಪ್ಟೆಂಬರ್‌ 13): ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸರಣಿ ಟ್ವೀಟ್‌ ಮಾಡಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು *ಆಕಸ್ಮಿಕ ಘಟನೆ,* ಸಣ್ಣ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುವ ಮಾತಾಡುತ್ತಿದೆ. ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಪ್ರಶ್ನೆಗಳಿಗೆ ಉತ್ತರಿಸಿ: ನೆಲಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ ಎಂದಿರುವ ಆರ್‌.ಅಶೋಕ, ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

1.) ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಿಲ್ಲವೇಕೆ?

2.) ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ನಿರ್ಲಕ್ಷ್ಯ ಮಾಡಲಾಯಿತೇ?

3.)ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಭದ್ರತೆ ಯಾಕೆ ನೀಡಲಿಲ್ಲ?

4) ಪಟ್ಟಣದಲ್ಲಿದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?

5) ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿದ್ದ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?

6) ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ ನಲ್ಲಿ ಎ1 ಮಾಡಿರುವುದೇಕೆ?

7) ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?

8) ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?

9) ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?

10) ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, 25 ಕೋಟಿ ರೂ. ಮೊತ್ತದ ಆಸ್ತಿ ನಷ್ಟವಾದರೂ, ಗೃಹ ಸಚಿವರಿಗೆ ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣವೇನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?

11) ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇನ್ನೂ ಭೇಟಿ ನೀಡಿಲ್ಲವೇಕೆ?

ತಪ್ಪು ಎಫ್‌ಐಆರ್‌, ಉಗ್ರ ಹೋರಾಟದ ಎಚ್ಚರಿಕೆ: ಈ ರೀತಿ ಹಿಂದೂಗಳ ವಿರುದ್ಧವೇ ತಪ್ಪು ಎಫ್ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈ ಬಿಡದಿದ್ದರೆ ನಾಗಮಂಗಲದಲ್ಲಿ ಬಿಜೆಪಿಯಿಂದ *ಉಗ್ರ ಹೋರಾಟ* ಮಾಡಬೇಕಾಗುತ್ತದೆ ಎಂದು ಆರ್‌.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ: ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟು, ಸರಕು-ಸರಂಜಾಮು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಪೂರ್ವ ನಿಯೋಜಿತ ಕೋಮು ಗಲಭೆಯನ್ನು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ? ಎಂದು ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ ಎಂದು ಅವರು ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!