ಬೆಂಗಳೂರು, (ಸೆ.13): ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬದ್ರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ಉಂಟಾದ ಗಲಭೆ ಕುರಿತಂತೆ ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿ ಸತ್ಯ ಶೋಧನ ತಂಡವನ್ನು ರಚಿಸಿದೆ.
ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಡಾ.ಸಿ.ಎನ್.ಅಶ್ವಥ ನಾರಾಯಣ, ಮಾಜಿ ಸಚಿವರಾದ ಭೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ಅವರು ಸತ್ಯ ಶೋಧನ ತಂಡದಲ್ಲಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ತಂಡವನ್ನು ರಚಿಸಿದ್ದು, ತಂಡದಲ್ಲಿರುವ ಸದಸ್ಯರು ಮಂಡ್ಯ ಜಿಲ್ಲೆ ನಾಗಮಂಗಲದ – ಬದ್ರಿಕೊಪ್ಪಲಿಗೆ ಭೇಟಿ ನೀಡಿ ಘಟನೆ ಕುರಿತಂತೆ ವರದಿ ನೀಡಬೇಕೆಂದು ಸೂಚಿಸಿದ್ದಾರೆ.
ಮಂಗಳವಾರದಂದು ಗಣಪತಿ ವಿಸರ್ಜನೆ ವೇಳೆ ಎರಡು ಕೋಮುಗಳ ನಡುವೆ ಗಲಭೆ ಉಂಟಾಗಿ ನಾಗಮಂಗಲದಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು. ಹಲವಾರು ಅಂಗಡಿಗಳು, ದ್ವಿಚಕ್ರ ವಾಹನಗಳಿಗೆ ಈ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು.
ಈ ಘಟನೆ ಭಾರೀ ವಿವಾದ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಮಾತಿನ ಸಮರ ಏರ್ಪಟ್ಟಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….