ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೆಂ.ಗ್ರಾ.ಜಿಲ್ಲೆಯಲ್ಲಿ 77 ಕಿ.ಮೀ ಮಾನವ ಸರಪಳಿ ರಚನೆ.. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಡಿಸಿ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 14): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 77 ಕಿ.ಮೀ ಮಾನವ ಸರಪಳಿ ರಚನೆಯಾಗಲಿದ್ದು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಾನವ ಸರಪಳಿಗೆ ಕೈ ಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಕೋರಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಮಾನವ ಸರಪಳಿ ರಚನೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ  ಚರ್ಚಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಮಾನವ ಸರಪಳಿ ರಚನೆಯಾಗಲಿದೆ. ಮೊದಲ ಭಾಗದಲ್ಲಿ ನೆಲಮಂಗಲ ತಾಲ್ಲೂಕಿನ ಹಳೆ ನಿಜಗಲ್ ನಿಂದ ಮಾನವ ಸರಪಳಿ ಪ್ರಾರಂಭವಾಗಿ ಡಾಬಸ್ ಪೇಟೆಯ ಮುಖಾಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಕ್ರಾಸ್ (ನಂದಿ ಬೆಟ್ಟದ ಹತ್ತಿರ) ವರೆಗೆ ಒಟ್ಟು 54 ಕಿಲೋ ಮೀಟರ್ ಮಾನವ ಸರಪಳಿ ರಚನೆಯಾಗಲಿದೆ. 2ನೇ ಭಾಗವಾಗಿ ಹೊಸಕೋಟೆ ತಾಲ್ಲೂಕಿನ ವೆಂಕಟಪುರ ದಿಂದ ಪ್ರಾರಂಭವಾಗಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡಮಾನಿಕೆರೆಯವರೆಗೆ ಒಟ್ಟು 23 ಕಿಲೋಮೀಟರ್ ಸೇರಿದಂತೆ ಒಟ್ಟು 77 ಕಿಲೋಮೀಟರ್ ವರೆಗೆ ಜಿಲ್ಲೆಯಲ್ಲಿ ಮಾನವ ಸರಪಳಿ ರಚನೆಯಾಗಲಿದೆ.

      ಸೆಪ್ಟೆಂಬರ್ 15 ರಂದು ಬೆಳಗ್ಗೆ 9:30 ಗಂಟೆಗೆ ಮಾನವ ಸರಪಳಿ ರಚನೆ ಪ್ರಕ್ರಿಯೆ ನಡೆಯಲಿದ್ದು, ಬೆಳಗ್ಗೆ 10 ಕ್ಕೆ ಮಾನವ ಸರಪಳಿ ಬಿಡುವ ಮುನ್ನ ಸಂವಿಧಾನ ಪೀಠಿಕೆ ವಾಚನ ನಡೆಯಲಿದೆ, ಬೆಳಗ್ಗೆ 10 ರಿಂದ 10:30 ರವರೆಗೆ ಸಸಿಗಳನ್ನು ನೆಡುವ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಲಿದೆ.

    ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳಿಂದ ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.

    ಮಾನವ ಸರಪಳಿಯಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ವಿನೂತನ ದಾಖಲೆ ನಿರ್ಮಾಣದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೋರಿದರು.

ವೇದಿಕೆ ಕಾರ್ಯಕ್ರಮದ ಸ್ಥಳ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ತಾಲ್ಲೂಕು ಮಟ್ಟದ ವೇದಿಕೆ ಕಾರ್ಯಕ್ರಮವು ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯಲ್ಲಿ ನಡೆಯಲಿದೆ, ಹೊಸಕೋಟೆ ತಾಲ್ಲೂಕು ವೇದಿಕೆ ಕಾರ್ಯಕ್ರಮವು ತಾವರೆಕೆರೆ ಗ್ರಾಮ ಪಂಚಾಯಿತಿಯ ಬಳಿ ನಡೆಯಲಿದೆ, ದೊಡ್ಡಬಳ್ಳಾಪುರ ತಾಲೂಕಿನ ವೇದಿಕೆ ಕಾರ್ಯಕ್ರಮವು ಐ.ಬಿ ಸರ್ಕಲ್ ಬಳಿ ನಡೆಯಲಿದೆ. ದೇವನಹಳ್ಳಿ ಹಾಗೂ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವು ಹೆಗ್ಗಡೆ ಹಳ್ಳಿ ಗ್ರಾಮ ಪಂಚಾಯಿತಿ ಬಳಿ ನಡೆಯಲಿದೆ.

ಜಿಲ್ಲೆಯ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸ್ವಸಹಾಯ ಗುಂಪುಗಳ ಸದಸ್ಯರು ಭಾಗವಹಿಸಲು ವ್ಯಾಪಕ ಪ್ರಚಾರ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ಹಾಗೂ ಸ್ವಚ್ಚತೆಗೆ ಆದ್ಯತೆ ನೀಡಲು ಕ್ರಮ ವಹಿಸಲಾಗಿದೆ: ಡಾ.ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಮಾನವ ಸರಪಳಿ ನಡೆಯುವ ರಸ್ತೆ ಮಾರ್ಗದಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ರಸ್ತೆ ಸುರಕ್ಷತೆಗಾಗಿ 500 ಪೋಲಿಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಗತ್ಯ ಪೋಲಿಸ್ ಬಂದೋಬಸ್ತ್ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ; ಸಿ.ಕೆ ಬಾಬಾ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾನವ ಸರಪಳಿ ರಚನೆಯ ಹಿನ್ನೋಟ: ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ‍್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸಾರುವ ಉದ್ದೇಶದಿಂದ ಕರ್ನಾಟಕ ಸರ್ಕಾರವು, ಸೆಪ್ಟಂಬರ್ 15 ರ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಅಂದು ರಾಜ್ಯದ ಜನ ಸಾಮಾನ್ಯರೊಂದಿಗೆ ಸೇರಿ ಜಗತ್ತಿನ ಅತಿ ಉದ್ದದ ಮಾನವ ಸರಪಳಿಯು ರಚಿಸುವ ಮಹತ್ವದ ಕಾರ್ಯಕ್ರಮ ರೂಪಿಸಿದೆ.

ರಾಜ್ಯದಲ್ಲಿ ಈ ಮಾನವ ಸರಪಳಿಯು ಸುಮಾರು 2500 ಕಿಲೋಮೀಟರ್ ಉದ್ದ ಇರಲಿದ್ದು ಜಗತ್ತಿನ ಅತಿ ಉದ್ದದ ಮಾನವ ಸರಪಳಿ ಆಗಲಿದೆ. ಇದರಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಪ್ರತಿ ಕಿಲೋಮೀಟರ್‌ಗೆ 1000 ಜನರು ಇರಲಿದ್ದಾರೆ. ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜನರ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸಂದೇಶವನ್ನು ಬಿತ್ತರಿಸುವುದು ಮಾತ್ರವಲ್ಲದೇ, ಸರ್ಕಾರದ ಬಗೆಗಿನ ಜನರ ಭಾವನೆಯನ್ನು ಸಂಗ್ರಹಿಸಿ ಬಿತ್ತರಿಸಲಾಗುತ್ತದೆ.

ಈ ಮಾನವ ಸರಪಳಿಯಲ್ಲಿ ಸ್ವಾತಂತ್ರ‍್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ‍್ಯದ ಪರಿಕಲ್ಪನೆಯನ್ನು ಒತ್ತಿಹೇಳುವ ಪ್ರಜಾಪ್ರಭುತ್ವದ ಬ್ಯಾನರ್ ಮತ್ತು ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಜೊತೆಗೆ ಈ ಸಂದರ್ಭದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಂದ ರಾಜ್ಯಾದ್ಯಂತ 10 ಲಕ್ಷ ಸಸಿಗಳನ್ನು ನೆಡಲು ಆಯೋಜಿಸಲಾಗಿದೆ. ಆ ಮೂಲಕ ನಮ್ಮ ಪರಿಸರವನ್ನು ರಕ್ಷಿಸುವಂತಹ ಕಾಳಜಿಯನ್ನೂ ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]