ಸುಳ್ಳು ಪ್ರಕರಣ: ಪಿಎಸ್‌ಐ ಸೇರಿ ನಾಲ್ವರು ಸಿಬ್ಬಂದಿ ಅಮಾನತು

ಬೆಂಗಳೂರು, (ಸೆ.16): ಬಾತ್ಮೀದಾರನ ಮಾತು ನಂಬಿ ಮಾದಕ ವಸ್ತುಗಳ ಮಾರಾಟ ಪ್ರಕರಣದಲ್ಲಿ ಇಬ್ಬರು ಅಮಾಯಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಮೂಲಕ ಕರ್ತವ್ಯ ಲೋಪವೆಸಗಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಬನಶಂಕರಿ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಧರ್ ಗುಗ್ರಿ, ಎಎಸ್‌ಐ ಎಸ್.ಕೆ.ರಾಜು, ಪೇದೆಗಳಾದ ಸತೀಶ್ ಬಗಲಿ ಹಾಗೂ ತಿಮ್ಮಣ್ಣ ಪೂಜಾರ ಅವರನ್ನು ಅಮಾನತುಗೊಳಿಸಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಭರಮಪ್ಪ ಜಗಲಾಸರ್‌ ಆದೇಶಿಸಿದ್ದಾರೆ.

ಆಗಸ್ಟ್ 9ರಂದು ಕದಿರೇನಹಳ್ಳಿಯ ಸಿಮೆಂಟ್ ರಸ್ತೆಯಲ್ಲಿ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ವ್ಯಕ್ತಿಗಳನ್ನು ಬನಶಂಕರಿ ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿತರು ದ್ವಿಚಕ್ರ ವಾಹನದಲ್ಲಿ ಬಚ್ಚಿಡಲಾಗಿದ್ದ 400ಕ್ಕೂ ಅಧಿಕ ಗ್ರಾಂ ತೂಕದ ಮಾದಕ ಪದಾರ್ಥಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು.

ಪೊಲೀಸ್‌ ಆಯುಕ್ತರಿಗೆ ದೂರು: ಆರೋಪಿಗಳ ಬಂಧನದಿಂದ ಕಂಗಾಲಾದ ಕುಟುಂಬಸ್ಥರು ಬಂಧಿತರಿಬ್ಬರೂ ನಿರಪರಾಧಿಗಳು, ಪ್ರಕರಣದಲ್ಲಿ ಪೊಲೀಸ್ ಬಾತ್ಮೀದಾರನಾಗಿದ್ದ ರಾಜನ್ ಎಂಬಾತನ ಕೈವಾಡವಿದೆ ಎಂದು ಅನುಮಾನ ವ್ಯಕ್ತಪಡಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಪ್ರಕರಣದ ಕೂಲಂಕಷ ತನಿಖೆ ನಡೆಸಿ ವರದಿ ನೀಡುವಂತೆ ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ಗಿರೀಶ್ ಅವರಿಗೆ ದಕ್ಷಿಣ ವಿಭಾಗದ ಡಿಸಿಪಿಯವರು ಆದೇಶಿಸಿದರು.

ಸಿಬ್ಬಂದಿ ಅಮಾನತು: ತನಿಖೆ ನಡೆಸಿದ್ದ ಎಸಿಪಿ ಗಿರೀಶ್, ಪ್ರಕರಣದಲ್ಲಿ ಬಾತ್ಮೀದಾರನ ಸುಳ್ಳು ಮಾಹಿತಿ ಹಾಗೂ ಪೊಲೀಸ್ ಸಿಬ್ಬಂದಿಯ ಕರ್ತವ್ಯಲೋಪ ಇರುವುದರ ಕುರಿತು ಸೆಪ್ಟೆಂಬರ್ 12ರಂದು ಡಿಸಿಪಿಯವರಿಗೆ ವರದಿ ನೀಡಿದ್ದರು.

ಅದರನ್ವಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಹಲವು ವರ್ಷಗಳಿಂದ ಪೊಲೀಸ್ ಬಾತ್ಮೀದಾರ ರಾಜನ್, ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ವ್ಯಕ್ತಿಗಳೊಂದಿಗೆ ವೈಯಕ್ತಿಕ ದ್ವೇಷ ಹೊಂದಿದ್ದ.

ಇಬ್ಬರನ್ನೂ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿ ತನ್ನ ಸ್ನೇಹಿತೆಯ ಮೂಲಕ ಅವರ ದ್ವಿಚಕ್ರ ವಾಹನದಲ್ಲಿ ಮಾದಕ ಪದಾರ್ಥ ಇರಿಸಿದ್ದ. ನಂತರ ಪೊಲೀಸರಿಗೆ ಮಾಹಿತಿ ನೀಡಿ ದಾಳಿ ಮಾಡಿಸಿದ್ದ. ಬಾತ್ಮೀದಾರ ರಾಜನ್ ಮಾಹಿತಿಯನ್ನು ಪರಿಶೀಲಿಸದೇ ಪೊಲೀಸರು ಇಬ್ಬರೂ ಅಮಾಯಕರನ್ನು ಬಂಧಿಸಿದ್ದರು. 

ಸದ್ಯ ಸುಳ್ಳು ಮಾಹಿತಿ ನೀಡಿದ್ದ ರಾಜನ್ ಹಾಗೂ ಚೈತ್ರಾ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಸಿಬ್ಬಂದಿ ಲಾಭ ಪಡೆದಿರುವ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ಬೆಂ.ಗ್ರಾ ಜಿಲ್ಲೆಯ ಸಾಂಪ್ರದಾಯಿಕ ಅರ್ಹ ಕುಶಲಕರ್ಮಿಗಳು, ಎಲ್ಲ ಅರ್ಹ ಕುಶಲಕರ್ಮಿಗಳು, ಆಸಕ್ತ ಯುವಕ ಯುವತಿಯರು ಪ್ರಧಾನಿ ಮಂತ್ರಿ ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಂಸದರಾದ ಡಾ.ಕೆ ಸುಧಾಕರ್

[ccc_my_favorite_select_button post_id="115398"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!