ಬಿ.ಸಿ.ರೋಡ್‌ನಲ್ಲಿ ಹಿಂದೂ ಕಾರ್ಯಕರ್ತರ ಲಗ್ಗೆ..; ಪೊಲೀಸರಿಗೆ ಸಂಕಷ್ಟ| ವಿಡಿಯೋ

ಮಂಗಳೂರು, (ಸೆ.16): ಈದ್‌ ಆಚರಣೆಗೆ ಕುರಿತು VHP (ವಿಶ್ವ ಹಿಂದೂ ಪರಿಷತ್) ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ನೀಡಿದ ಹೇಳಿಕೆ ಹಾಗೂ ಅದಕ್ಕೆ ಪ್ರತಿಯಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ನೀಡಿದ ಹೇಳಿಕೆಯಿಂದಾಗಿ ಬಿ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಸಿತ್ತು.

ಸೋಮವಾರ ಬೆಳಿಗ್ಗೆಯಿಂದ ವಿಎಚ್‌ಪಿ ಬಜರಂಗದಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಶರಣ್ ಪಂಪ್ ವೆಲ್ ಅವರಿಗೆ ಸವಾಲು ಹಾಕಿರುವ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ವಿರುದ್ಧ ಬಜರಂಗ ದಳ ಕಾರ್ಯಕರ್ತರು ಘೋಷಣೆ ಕೂಗಿದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ ಖಂಡಿಸಿ ಮಂಗಳೂರಿನಲ್ಲಿ ಈಚೆಗೆ ನಡೆದ ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್, ಹಿಂದೂಗಳು ಮನಸು ಮಾಡಿದರೆ ಈದ್ ಮೆರಣಿಗೆ ಅಸಾಧ್ಯ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಹೇಳಿಕೆ ನೀಡಿದ್ದ ಮಹಮ್ಮದ್ ಶರೀಫ್ ತಾಕತ್ತಿದ್ದರೆ ಬಿ.ಸಿ.ರೋಡ್‌ಗೆ ಬನ್ನಿ ಎಂದು ಸವಾಲೆಸೆದಿದ್ದರು.

ಈ ಕುರಿತು ಫೇಸ್ಟುಟ್ನಲ್ಲಿ ಬರೆದುಕೊಂಡಿದ್ದ ಬಜರಂಗದಳ ಮುಖಂಡ ಪುನೀತ್ ಅತ್ತಾವರ್, ನಾವು ಚಲೋ ಬಿ.ಸಿ.ರೋಡ್’ ಹಮ್ಮಿಕೊಳ್ಳುತ್ತೇವೆ. ತಡೆಯುವವರು ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದರು.

ಇಂದು ಬಿ.ಸಿ.ರೋಡ್‌ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರಣ್ ಪಂಪ್ ವೆಲ್, ಮಹಮ್ಮದ್ ಶರೀಫ್‌ ಅವರ ಸವಾಲು ಸ್ವೀಕರಿಸಿ ಬಿಸಿರೋಡಿಗೆ ಬಂದಿದ್ದೇನೆ. ಇನ್ನೂ ಮುಂದೆಯೂ ಇಂತಹ ಸವಾಲು ಸ್ವೀಕರಿಸಲು ತಯಾರಾಗಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಹಿಂದುತ್ವಕ್ಕೆ ಜಯಸಿಕ್ಕಿದೆ. 

ಇಂತಹ ಸವಾಲುಗಳು ಹಿಂದೂ ಕಾರ್ಯಕರ್ತರಿಗೆ ಇದೇ ಮೊದಲಲ್ಲ. ಸಾಕಷ್ಟು ಕಾರ್ಯಕರ್ತರು ಪ್ರಾಣವನ್ನು ಕೊಟ್ಟಿದ್ದಾರೆ ಜೈಲಿಗೂ ಹೋಗಿದ್ದಾರೆ. ನಾಗಮಂಗಲದ ಗಣೇಶ ಚತುರ್ಥಿಯ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಿಂಸೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಹೇಳಿಕೆಯನ್ನು ಕೊಟ್ಟಿದ್ದೇವೆ. ಆದರೆ, ಆತ ಅದಕ್ಕೆ ಬಿ.ಸಿ.ರೋಡಿಗೆ ಆಗಮಿಸುವಂತೆ ಸವಾಲು ಹಾಕಿದ್ದ. 

ಆತನ ಸವಾಲಿಗೆ ಉತ್ತರವಾಗಿ ನಾವು ಇಂದು ಬಿಸಿರೋಡಿನಲ್ಲಿ ಸೇರಿದ್ದೇವೆ. ಮುಂದೆ ಅವಶ್ಯಕತೆ ಬಿದ್ದರೆ ಆತ ಹೇಳಿದಂತೆ ಮಸೀದಿಗೆ ಹೋಗುವುದಕ್ಕೂ ಸಿದ್ದರಿದ್ದೇವೆ. ಇದು ಶರಣ್ ಒಬ್ಬನಿಗೆ ಹಾಕಿದ ಸವಾಲು ಅಲ್ಲ ಇಡೀ ಹಿಂದೂ ಕಾರ್ಯಕರ್ತರಿಗೆ ಹಾಕಿದ ಸವಾಲುಬಅಲ್ಲ ಇಡೀ ಹಿಂದೂ ಕಾರ್ಯಕರ್ತರಿಗೆ ಹಾಕಿದ ಸವಾಲು ಎಂದು ಅವರು ತಿಳಿಸಿದರು.

ವಿಎಚ್‌ಪಿ, ಬಜರಂಗದಳ ಸಂಘಟನೆಗಳ ಪ್ರಮುಖರಾದ ಪುನೀತ್ ಅತ್ತಾವರ, ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕರ್ ಧರ್ಮಸ್ಥಳ, ನವೀನ್ ನೆರಿಯಾ, ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ ಮಹೇಶ್ ಬೈಲೂರು, ಕೃಷ್ಣಪ್ರಸಾದ್, ಮಿಥುನ್‌ಡ್ಕ, ನವೀನ್ ಮೂಡುಶೆಡ್ಡೆ, ಸಚಿನ್ ಶೆಟ್ಟಿ ಮೆಲ್ಕಾರ್, ಆರ್. ಅರೆಬೆಟ್ಟು, ಎ.ಗೋವಿಂದ ಪ್ರಭು, ಪುರುಷೋತ್ತಮ ಸಾಲಿಯನ್, ರಾಮದಾಸ್ ಬಂಟ್ವಾಳದಿಂದ ಇಬ್ಬರು.

ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರ ಜೊತೆ ಮಾತುಕತೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಸ್ಥಳದಿಂದ ನಿರ್ಗಮಿಸುವಂತೆ ಮನವೊಲಿಸಿದರು.

ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್,ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ ಎನ್.ಉಪವಿಭಾಗಾಧಿಕಾರಿ ಹರ್ಷವರ್ದನ್, ತಹಶಿಲ್ದಾರ್ ಅರ್ಚನಾ ಭಟ್ ಅವರು ಸ್ಥಳಕ್ಕೆ ದಸಾವಿಸಿದ್ದಾರೆ. ಬಿ.ಸಿ.ರೋಡ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಮಸೀದಿಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈ ನಡುವೆ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಮ್ಮದ್ ಶರೀಫ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರಣ್ ಪಂಪೈಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!