ಶಾಸಕ ಮುನಿರತ್ನ ಅವರ ವಿವರಣೆ ಕೂಡ ಕೇಳದೆ ತಕ್ಷಣ ಬಂಧಿಸಿದ್ದಾರೆ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು, (ಸೆಪ್ಟೆಂಬರ್‌ 16): ನಾಗಮಂಗಲದ ಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್‌ ಬಾಂಬ್‌ ಎಲ್ಲಿಂದ ತಂದಿದ್ದಾರೆ, ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲ ಪ್ರಕರಣಗಳನ್ನು ಎನ್‌ಐಎ ಗೆ ವಹಿಸಬೇಕು ಎಂದರು.

ನಾಗಮಂಗಲದ ಗಲಭೆ ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಇದು ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದರು. 

ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್‌, ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇವರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ.‌ ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ತಕ್ಷಣ ಬಂಧನ ಏಕೆ?: ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್‌ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೆ ಎಲ್ಲ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೆ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು.

ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು. 

ಅರವಿಂದ ಕೇಜ್ರಿವಾಲ್‌ ನಾಟಕದ ಕಂಪನಿ ನಡೆಸುತ್ತಿದ್ದಾರೆ. ಇವರು ಅಪರಾಧಿ ಎಂದು ಸಾಬೀತಾಗುವ ಮೊದಲೇ ರಾಜೀನಾಮೆ ಕೊಡುವ ನಾಟಕವಾಡುತ್ತಿದ್ದಾರೆ. ಅಧಿಕಾರದ ದುರಾಸೆಗಾಗಿ ಅವರು ರಾಜಕೀಯಕ್ಕೆ ಬಂದಿದ್ದಾರೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!