ದೊಡ್ಡಬಳ್ಳಾಪುರ, (ಸೆ.17); ಸರ್ಕಾರ ಸಾರಿಗೆ ಬಸ್ಸಿಗೆ ಖಾಸಗಿ ಶಾಲೆಯ ಬಸ್ ಡಿಕ್ಕಿ ಹೊಡೆದಿರುವ ಘಟನೆ ಕೊಡಿಗೇಹಳ್ಳಿ ಬಳಿ ಇಂದು ಸಂಜೆ ಸಂಭವಿಸಿದೆ.
ಕೊಡಿಗೇಹಳ್ಳಿ ಗ್ರಾಮದ ಸಮೀಪ ರಸ್ತೆಯಲ್ಲಿ ಅಳವಡಿಸಿರುವ ವೇಗ ನಿಯಂತ್ರಕದ ಬಳಿ ಕೆಎಸ್ಆರ್ಟಿಸಿ ಬಸ್ ಸ್ಲೋ ಮಾಡಿದ್ದು, ಈ ವೇಳೆ ಹಿಂದಿನಿಂದ ಬಂದ ಖಾಸಗಿ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಸ್ಕೂಲ್ ಬಸ್ಸಿನಲ್ಲಿದ್ದ ಓರ್ವ ಮಗುವಿಗೆ ಪೆಟ್ಟಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….