ನನ್ನ ವಿರುದ್ಧ ಷಡ್ಯಂತ್ರ್ಯಕ್ಕೆ ಕಾಂಗ್ರೆಸ್ ಸರಕಾರ ಟೂಲ್ ಕಿಟ್ ರೂಪಿಸಿದೆ; ಹೆಚ್.ಡಿ.ಕುಮಾರಸ್ವಾಮಿ

ಮೈಸೂರು, (ಸೆ.20): ನನ್ನ ವಿರುದ್ಧ ಡಿನೋಟಿ ಫಿಕೇಶನ್ ಆರೋಪ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಮೂವರು ಸಚಿವರ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅದೊಂದು ಸ್ಕ್ರಿಪ್ಟೆಡ್ಡ್ ಮಾದ್ಯಮಗೋಷ್ಠಿ ಎಂದು ಲೇವಡಿ ಮಾಡಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾರೂ ಬರೆದುಕೊಟ್ಟ ಸ್ಕ್ರಿಪ್ಟ್ ಅನ್ನು ಮೂವರು ಸಚಿವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲಿ ಅಂದು ಮುಖ್ಯಮಂತ್ರಿ ಆಗಿದ್ದ ನಾನೇನು ಬರೆದಿದ್ದೇನೆ, ನಾನೇನು ಆದೇಶ ಮಾಡಿದ್ದೇನೆ ಎಂಬುದು ಅವರಿಗೆ ಗೊತ್ತಿಲ್ಲವೇ? ಎಂದು ಕುಟುಕಿದರು.

ಈ ಸಂದರ್ಭದಲ್ಲಿ ಸಚಿವರು, ತಮ್ಮ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮಾಡಲು ಸಚಿವರಿಗೆ ಬರೆದುಕೊಡಲಾಗಿದ್ದ ಟೂಲ್ ಕಿಟ್ ಪ್ರತಿಯನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು.

ನಾನು ಕೇಂದ್ರ ಸಚಿವನಾಗಿದ್ದು ಇವರಿಗೆ ತಡೆಯಲು ಆಗುತ್ತಿಲ್ಲ. ಹೇಗಾದರೂ ನನ್ನನ್ನು ಕಟ್ಟಿ ಹಾಕಲು ಇವರು ಹಣಿಸುತ್ತಲೇ ಇದ್ದಾರೆ. ನನ್ನ ವಿರುದ್ಧ ಒಂದು ವ್ಯವಸ್ಥಿತ ಟೂಲ್ ಕಿಟ್ ರೆಡಿ ಮಾಡಿದ್ದಾರೆ. ಅದನ್ನೇ ಸಇವರಿಗಳು ಬಾಯಿಪಾಠ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಸರಿಯಾಗಿ ಸ್ಕ್ರಿಪ್ಟ್ ಬರೆದು ಕೊಟ್ಟಿಲ್ಲ: ಮಾಧ್ಯಮಗೋಷ್ಠಿ ನಡೆಸಿದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರಿಗೆ ಯಾರೋ ಸರಿಯಾಗಿ ಸ್ಕ್ರಿಪ್ಟ್ ಬರೆದು ಕೊಟ್ಟಿಲ್ಲ. ಅವರು ನನ್ನ ವಿರುದ್ಧ ಸುಳ್ಳಿನ ಕಥೆಯನ್ನೇ ಕಟ್ಟಿದ್ದಾರೆ. ನಾನು ಎಲ್ಲೂ ಕದ್ದು ಹೋಗುವ ಪ್ರಶ್ನೆಯೇ ಇಲ್ಲ. ಸುಳ್ಳು ಹೇಳಿಕೊಂಡು ಬೇರೆಯವರ ನೆರಳನ್ನು ತೆಗೆದುಕೊಳ್ಳುವ ಇವರಂತೆ ನಾನಲ್ಲ ಎಂದು ಗುಡುಗಿದರು.

ನಾನು ಕೇಂದ್ರ ಮಾತ್ರಿಯಾಗಿದ್ದೇ ಇವರಿಗೆ ಸಂಕಟ ಶುರುವಾಗಿದೆ. ನನ್ನ ವಿರುದ್ಧ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಸಾಲ ಸಾಲಾಗಿ ಟೀಕೆ ಮಾಡುತ್ತಿದ್ದಾರೆ. ಇಡೀ ಸರ್ಕಾರದ ಟಾರ್ಗೆಟ್ ನಾನೇ ಆಗಿದ್ದೇನೆ ಎಂದು ಅವರು ಕಿಡಿಕಾರಿದರು.

ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಪ್ರಹಾರ ನಡೆಸಿದ ಕುಮಾರಸ್ವಾಮಿ, “ಮಿಸ್ಟರ್ ಕೃಷ್ಣ ಭೈರೇಗೌಡ.. ನನ್ನನ್ನು ಅಲುಗಾಡಿಸಲು ನಿಮ್ಮಿಂದ ಸಾಧ್ಯವಿಲ್ಲ. ನೀವು ಏನೆಲ್ಲ ಷಡ್ಯಂತ್ರ ಮಾಡಿದರೂ ನನ್ನ ಬಗ್ಗೆ ಏನೂ ಸಿಗುವುದಿಲ್ಲ. ಕಂದಾಯ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ, ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ನಿಮ್ಮದೆಲ್ಲಾ ಹೊರಗೆ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ, ಮತ್ತೆ ಯಾರನ್ನೂ ಬಂಧಿಸಬೇಡಿ: ಪೊಲೀಸರಿಗೆ HD ಕುಮಾರಸ್ವಾಮಿ ನಿರ್ದೇಶನ

ನಾನು ಬುದ್ಧಿವಂತ ಎನ್ನುತ್ತೀರಿ. ವಿದೇಶದಲ್ಲಿ ಓದಿಕೊಂಡು ಬಂದಿದ್ದೇನೆ ಎನ್ನುತ್ತೀರಿ. ಮಧ ಕೃಷ್ಣಭೈರೇಗೌಡ ವಿದೇಶದಲ್ಲಿ ಓದಿ, ಮೇಧಾವಿ ಎಂದು ಹೇಳುತ್ತೀರಿ. ಆದರೆ, ನಾನು ಹರದನಹಳ್ಳಿ ಎಂಬ ಹಳ್ಳಿಯಲ್ಲಿ ಓದಿ ಬೆಳೆದವನು. ಕೃಷ್ಣ ಭೈರೇಗೌಡರೇ.. ಮಾಧ್ಯಮಗೋಷ್ಠಿಗೂ ಮೊದಲು ಈ ಪ್ರಕರಣದ ಬಗ್ಗೆ, ದಾಖಲೆಗಳ ಬಗ್ಗೆ ಸರಿಯಾದ ಮಾಹಿತಿ ಪದ್ದುಕೊಳ್ಳಬೇಕಿತ್ತು ಅಲ್ಲವೇ? ಎಂದು ಕಂದಾಯ ಮಂತ್ರಿಗೆ ಟಾಂಗ್ ಕೊಟ್ಟರು.

ನಾನು ಇವರಂತೆ ಹಲ್ಕಾ ಕೆಲಸ ಮಾಡಿಲ್ಲ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಸೇರಿ ಅನೇಕ ಅಕ್ರಮಗಳಲ್ಲಿ ಸರ್ಕಾರ ತೊಡಗಿದೆ. ಪ್ರತಿಪಕ್ಷದಲ್ಲಿ ಇರುವ ನಾನು ಸಹಜವಾಗಿಯೇ ಪ್ರಶ್ನೆ ಮಾಡಿದ್ದೇನೆ. ಅದೇ ಅಪರಾಧ ಆಗಿದೆ ಇವರಿಗೆ. ನಾನು ಸಿದ್ದರಾಮಯ್ಯ ಅವರಂತೆ ಹಲ್ಕಾ ಕೆಲಸ ಮಾಡಿಲ್ಲ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಮೂಡಾ ಹಗರಣದಲ್ಲಿ ಸರ್ಕಾರಿ ಜಮೀನನ್ನು ಹೇಗೆ ಕಬಳಿಸಿದ್ದಾರೆ ಎಂಬುದನ್ನು ದಾಖಲೆಗಳೇ ಜಗಜ್ಜಾಹೀರು ಮಾಡಿವೆ. ಆದರೆ, ಅದನ್ನು ಮುಚ್ಚಿಹಾಕಿಕೊಳ್ಳಲು ಆರೋಪ ಮಾಡಿದವರ ವಿರುದ್ಧವೇ ಪ್ರತ್ಯಾರೋಪ ಮಾಡಲಾಗುತ್ತಿದೆ. ಇದು ಇವರ ಮನಸ್ಥಿತಿ ಎಂದು ಅವರು ಟೀಕಿಸಿದರು.

ಇದನ್ನೂ ಓದಿ; ಒಕ್ಕಲಿಗ ಮಹಿಳೆಯರ ಬಗ್ಗೆ ಬಿಜೆಪಿ ಶಾಸಕನಿಂದ ತುಚ್ಛಮಾತು: ನಿಖಿಲ್ ಕುಮಾರಸ್ವಾಮಿ ಹೇಳಿದ್ ಏನು ನೋಡಿ| ವಿಡಿಯೋ

ನನ್ನ ವಿರುದ್ಧದ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣಕ್ಕೂ ವ್ಯತ್ಯಾಸವಿದೆ. ಅವರಂತೆ ನಾನು ಹಲ್ಕಾ ಕೆಲಸ ಮಾಡಿಲ್ಲ. ನನ್ನ ಪ್ರಕರಣದ ಬಗ್ಗೆ ತನಿಖೆ ಆಗಿದೆ. 2015ರಲ್ಲಿಯೇ ಇದರ ಬಗ್ಗೆ ವಿಸ್ತೃತ ತನಿಖೆ ನಡೆದು ಬಿ ರಿಪೋರ್ಟ್ ಅನ್ನು ಕೂಡ ಹಾಕಲಾಗಿತ್ತು. ಆ ಸಂದರ್ಭದಲ್ಲಿ ಈ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಈಗ ರಾಜಕೀಯ ಸೇಡಿಗಾಗಿ ತೆಗೆದಿದ್ದಾರೆ. ಆಗ ತನಿಖೆ ಮಾಡದೆ ಏನು ಸುಮ್ಮನೆ ಇದ್ದಿದ್ದು ಯಾಕೆ? ಈಗ ನನ್ನನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಕುತಂತ್ರ ಫಲಿಸದು ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಇವರ ಹಾಗೆಯೇ ನಾನು ಯಾರಿಗೂ ಮೋಸ ಮಾಡಿಲ್ಲ. ಕಂಡವರ ಜಾಮೀನು ಹೊಡೆದುಕೊಂಡಿಲ್ಲ. ಇವರಂತೆ ಯಾರಿಗೂ ಟೋಪಿ ಹಾಕಿ ಜಮೀನು ಮಾಡಿಕೊಂಡಿಲ್ಲ. ನನ್ನ ಪತ್ನಿಯ ಸಂಬಂಧಿಕರು ಆ ಜಮೀನು ತೆಗೆದುಕೊಂಡಿದ್ದಾರೆ. ಆ ಜಮೀನು ಡಿನೋಟಿಫಿಕೇಶನ್ ಆಗಿರುವುದು ನಿಜ. ಎಲ್ಲವೂ ಕಾನೂನಾತ್ಮಕವಾಗಿ ಇದೆ. ತಪ್ಪು ಕೆಲಸ ಮಾಡಿಲ್ಲ. ಒಂದು ವೇಳೆ ನಾನು ತಪ್ಪು ಮಾಡಿ ಕೈಕಟ್ಟಿ ನಿಲ್ಲುವ ಸಮಯ ಬಂದರೆ ರಾಜಕಾರಣದಲ್ಲಿ ಐದು ಸೆಕೆಂಡ್ ಕೂಡ ಇರುವುದಿಲ್ಲ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಮೇಯರ್ ರವಿ ಕುಮಾರ್ ಮುಂತಾದವರು ಜತೆಯಲ್ಲಿ ಇದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!