ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವೆ ಕ್ವಿನ್ ಸಿಟಿ’: ಮಹತ್ತ್ವಾಕಾಂಕ್ಷಿ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಸಮೀಪದ ದೊಡ್ಡಬಳ್ಳಾಪುರ ಮತ್ತು ದಾಬಸ್‌ಪೇಟೆ ನಡುವೆ, ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಯ ಆಸುಪಾಸಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಮೊದಲನೆಯ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇದರ ಅಂಗವಾಗಿ ಸಮಾರಂಭ ಏರ್ಪಡಿಸಲಾಗಿತ್ತು. ಇದರಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಸಚಿವ ಸಂಪುಟದ ಹಲವು ಮಂತ್ರಿಗಳು ಮತ್ತು ಹಿರಿಯ ಜನಪ್ರತಿನಿಧಿಗಳು ಹಾಗೂ ಗಣ್ಯ ಉದ್ಯಮಿಗಳು ಉಪಸ್ಥಿತರಿದ್ದರು.

ಯೋಜನೆಗೆ ನಾಂದಿ ಹಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕವು ದೇಶದ ಜ್ಞಾನಾಧಾರಿತ ಆರ್ಥಿಕತೆಯಲ್ಲಿ ಪ್ರಥಮ ಸ್ಥಾನದಲ್ಲಿದೆ.ಕ್ವಿನ್ ಸಿಟಿಯು ಕರ್ನಾಟಕ ಮತ್ತು ಭಾರತದ ಪಾಲಿಗೆ ಹೊಸ ಭಾಷ್ಯ ಬರೆಯಲಿದೆ. ಇಲ್ಲಿ ಜಾಗತಿಕ ಮಟ್ಟದ ಸಹಭಾಗಿತ್ವ ಮತ್ತು ನಾವೀನ್ಯತೆಗಳಿಗೆ ಆದ್ಯತೆ ಇರಲಿದ್ದು,ಸ್ಮಾರ್ಟ್ ಲಿವಿಂಗ್’ ಪರಿಕಲ್ಪನೆಗೆ ಒತ್ತು ಕೊಡಲಾಗುವುದು. ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು, ಸುಸ್ಥಿರ ಬೆಳವಣಿಗೆ ಸಾಧಿಸಲಾಗುವುದು’ ಎಂದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ಬೆಂಗಳೂರಿನ ಕೈಗಾರಿಕಾ ಬೆಳವಣಿಗೆಗೆ ಹೇರಳ ಅವಕಾಶಗಳಿದ್ದು, ಇದನ್ನು ಸಾಧಿಸಲು ಸರಕಾರ ಬದ್ಧವಾಗಿದೆ. ಎರಡು ವಾರಗಳಲ್ಲಿ ಕಾವೇರಿ 5ನೇ ಹಂತದ ಕುಡಿವ ನೀರು ಪೂರೈಕೆ ಆರಂಭವಾಗಲಿದ್ದು, 20 ವರ್ಷಗಳ ಕಾಲ ನೀರಿನ ಕೊರತೆ ಇರುವುದಿಲ್ಲ. ಹಾಗೆಯೇ, ಇಲ್ಲಿ ವಿದ್ಯುತ್ ತೊಂದರೆ ಕೂಡ ಇಲ್ಲ. ಸಂಚಾರ ವ್ಯವಸ್ಥೆಯಲ್ಲಿ ತುಸು ಸಮಸ್ಯೆ ಇರುವುದು ನಿಜ. ಅದನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿರುವಷ್ಟು ಪ್ರತಿಭಾನ್ವಿತ ಮಾನವ ಸಂಪನ್ಮೂಲ ಕೈಗಾರಿಕೆಗಳಿಗೆ ಇನ್ನೆಲ್ಲೂ ಸಿಕ್ಕುವುದಿಲ್ಲ’ ಎಂದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, `ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ ಶೇ 40ರಷ್ಟು ಜಾಗವನ್ನು ಉದ್ಯಾನಗಳಿಗೆ ಮೀಸಲಿಡಲಾಗಿದೆ. ಜೊತೆಗೆ 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ 465 ಎಕರೆ, ವರ್ಷಕ್ಕೆ 7 ಸಾವಿರ ಟನ್ ಹಣ್ಣು-ತರಕಾರಿ ಬೆಳೆಯಲು 200 ಎಕರೆ, ಶೇಕಡ 50ರಿಂದ 70ರಷ್ಟು ಜಲ ಮರುಪೂರಣ ವ್ಯವಸ್ಥೆ ಇರಲಿದೆ’ ಎಂದರು.

ಉದ್ದೇಶಿತ ನಗರದಲ್ಲಿ ಮೊದಲಿಗೆ ಅತ್ಯುತ್ತಮ ಗುಣಮಟ್ಟದ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ ಜಗತ್ತಿನ ಅಗ್ರ 500 ವಿ.ವಿ.ಗಳು ತಮ್ಮ ಕ್ಯಾಂಪಸ್ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಉತ್ಕೃಷ್ಟ ದರ್ಜೆಯ ಆಸ್ಪತ್ರೆಗಳು, ವೈದ್ಯಕೀಯ ಸಂಶೋಧನಾ ಸಂಸ್ಥೆಗಳು ಮತ್ತು ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಒಟ್ಟಿನಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆಯ ಯೋಜನೆಯಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಯೋಜನೆಯ ವೈಶಿಷ್ಟ್ಯಗಳನ್ನು ವಿವರಿಸಿದರು.

ಕ್ವಿನ್ ಸಿಟಿಯು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮತ್ತು ಶ್ರೇಷ್ಠತೆಗೆ ಮಾನದಂಡವಾಗಿ ಹೊರಹೊಮ್ಮಲಿದೆ. ಬೆಂಗಳೂರಿನಲ್ಲಿರುವ ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ನವೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಗಳ ಕಾರ್ಯ ಪರಿಸರವನ್ನು ಇದಕ್ಕೆ ಪೂರಕವಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಳು ನಾಲ್ಕು ಪ್ರಮುಖ ವಲಯಗಳಾಗಿದ್ದು, ಮುಂಬರುವ ದಿನಗಳ ಸ್ಮಾರ್ಟ್ ಸಿಟಿಗಳಿಗೆ ಮೇಲ್ಪಂಕ್ತಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್ ಕೆ ಪಾಟೀಲ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಚೆಲುವರಾಯಸ್ವಾಮಿ, ಡಾ.ಎಂ ಸಿ ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎನ್ ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಮಂಕಾಳ ವೈದ್ಯ, ಬೋಸರಾಜು, ಶಿವಾನಂದ ಪಾಟೀಲ, ಮಧು ಬಂಗಾರಪ್ಪ, ರಹೀಂ ಖಾನ್ ಮತ್ತು ಆರ್ ಬಿ ತಿಮ್ಮಾಪುರ, ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಉದ್ಯಮಿಗಳಾದ ಪ್ರಶಾಂತ್ ಪ್ರಕಾಶ್, ಗೀತಾಂಜಲಿ ಕಿರ್ಲೋಸ್ಕರ್, ರಂಗೇಶ್ ರಾಘವನ್, ವೈದ್ಯ ಡಾ.ವಿವೇಕ ಜವಳಿ ಉಪಸ್ಥಿತಿರಿದ್ದರು.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಯೋಜನೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕೆಐಎಡಿಬಿ ಸಿಇಒ ಡಾ,ಮಹೇಶ್ ಉಪಸ್ಥಿತರಿದ್ದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸ್ವಾಗತಿಸಿದರು. ಕೆಐಎಡಿಬಿ ಸಿಇಒ ಡಾ.ಮಹೇಶ ವಂದಿಸಿದರು.

ರಾಜಕೀಯ

ಟ್ರಂಪ್ ತೆರಿಗೆ ಬರೆ.‌. ಭಾರತದ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ತಲ್ಲಣ..!

ಟ್ರಂಪ್ ತೆರಿಗೆ ಬರೆ.‌. ಭಾರತದ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ತಲ್ಲಣ..!

ರಷ್ಯಾದಿಂದ ಕಡಿಮೆ ದರದಲ್ಲಿ ಭಾರತ ತೈಲ ಖರೀದಿಸುತ್ತಿದೆ ಎಂದು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತದ ಮೇಲೆ ತೆರೆಗೆ ಬರೆ ಎಳೆದಿದ್ದಾರೆ.

[ccc_my_favorite_select_button post_id="113091"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿ.. ಶವವಾಗಿ ಕೆರೆಯಲ್ಲಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿ.. ಶವವಾಗಿ ಕೆರೆಯಲ್ಲಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿಯೋರ್ವನ ಶವ (Person's dead body) ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113088"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!