ಪತ್ರಕರ್ತರ ಕಿವಿಗೆ ಹೂ ಇಟ್ಟ ಸಿದ್ದು ಸರ್ಕಾರ: ಬಂಗ್ಲೆ ಮಲ್ಲಿಕಾರ್ಜುನ ಖಂಡನೆ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ರಾಜ್ಯ ಸರ್ಕಾರದಿಂದ ( State Government ) ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು ರಾಜ್ಯದ ಪತ್ರಕರ್ತರಿಗೆ ಅಪಮಾನಿಸಿದಂತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾಯಂ ಪತ್ರಕರ್ತರೆಂದು ನೇಮಕಾತಿ ಆದೇಶ ಕೊಟ್ಟಿಲ್ಲ. ಆದರೆ ಸರ್ಕಾರ ಈ ಆದೇಶ ಪ್ರತಿ ಕೇಳಿರುವುದು ಹಾಸ್ಯಾಸ್ಪದ ಸಂಗತಿಯಾಗಿದ್ದು ಈ ಬಗ್ಗೆ ಆದೇಶ ಮರು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಬಸ್‌ಗಳಲ್ಲಿ ಸಂಚರಿಸಲು 1800 ಕೋಟಿ ರೂ.ವೆಚ್ಚವನ್ನು ನೀಡಿರುವ ಸರ್ಕಾರ ಯಾವುದೇ ಮಾನದಂಡಗಳನ್ನು ಕೇಳಿಲ್ಲ. ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಸರ್ಕಾರದ ಯೋಜನೆಗಳ ಬಗ್ಗೆ ಸಮಾಜದಲ್ಲಿ ಜನರ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ವಿಷಯದಲ್ಲಿ ಮಾತ್ರ ಇಂತಹ ಧೋರಣೆ ತಳೆದಿರುವುದು ಸರಿಯಾದ ಕ್ರಮವಲ್ಲ ಎಂದು ಹರಿಹಾಯ್ದಿದ್ದಾರೆ.

ರಾಜ್ಯದ 200 ತಾಲ್ಲೂಕುಗಳಲ್ಲಿ ಕೆಲಸ ಮಾಡುವ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಕಾಯಂ ನೇಮಕಾತಿ ಆದೇಶ ಪತ್ರ ಕೊಟ್ಟಿರುವುದಿಲ್ಲ. ಸರ್ಕಾರ ಹೊರಡಿಸಿರುವ ಆದೇಶದಂತೆ ರಾಜ್ಯಾದ್ಯಂತ 100 ಅರ್ಜಿ ಸಲ್ಲಿಕೆ ಆದರೆ ಹೆಚ್ಚು ಎಂದಿರುವ ಬಂಗ್ಲೆ ಮಲ್ಲಿಕಾರ್ಜುನ, 5222 ಪತ್ರಕರ್ತರಲ್ಲಿ ಕಾಯಂ ನೇಮಕಾತಿ ಪತ್ರ ಎಷ್ಟು ಜನರ ಬಳಿ ಇದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ.

ಕೂಡಲೇ ಈ ಆದೇಶವನ್ನು ಮಾರ್ಪಡಿಸಿ ಗ್ರಾಮೀಣ ಪತ್ರಕರ್ತರಿಗೆ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು ಹಾಗೆಯೇ ಇದರ ವಿರುದ್ಧ ಹೋರಾಟವನ್ನು ಸಂಘಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಆದೇಶ ನಾಯಿ.. ಜೇನು ಇದ್ದಂತೆ ಅದು ಪೂಜೆಗೂ ಬರುವುದಿಲ್ಲ. ತಿನ್ನುವುದಕ್ಕೆ ಬರುವುದಿಲ್ಲ. ಆದರೆ ಸರ್ಕಾರ ಪತ್ರಕರ್ತರಿಗೆ ಬಸ್ ಪಾಸ್ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳಲಿದೆ. ಪತ್ರಕರ್ತ ಕಿವಿ ಮೇಲೆ ಹೂ ಇಟ್ಟಂತಾಗಿದೆ ಎಂದು ಟೀಕಿಸಿದ್ದಾರೆ.

ರಾಜಕೀಯ

ಟ್ರಂಪ್ ತೆರಿಗೆ ಬರೆ.‌. ಭಾರತದ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ತಲ್ಲಣ..!

ಟ್ರಂಪ್ ತೆರಿಗೆ ಬರೆ.‌. ಭಾರತದ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ತಲ್ಲಣ..!

ರಷ್ಯಾದಿಂದ ಕಡಿಮೆ ದರದಲ್ಲಿ ಭಾರತ ತೈಲ ಖರೀದಿಸುತ್ತಿದೆ ಎಂದು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತದ ಮೇಲೆ ತೆರೆಗೆ ಬರೆ ಎಳೆದಿದ್ದಾರೆ.

[ccc_my_favorite_select_button post_id="113091"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿ.. ಶವವಾಗಿ ಕೆರೆಯಲ್ಲಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿ.. ಶವವಾಗಿ ಕೆರೆಯಲ್ಲಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿಯೋರ್ವನ ಶವ (Person's dead body) ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113088"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!