ದೊಡ್ಡಬಳ್ಳಾಪುರ ಬಳಿ ಕ್ವಿನ್ ಸಿಟಿ: ಹೇಗಿರುತ್ತೆ ಗೊತ್ತಾ..? ವಿಡಿಯೋಗಳನ್ನು ನೋಡಿ

ಬೆಂಗಳೂರು: ಜ್ಞಾನ, ಆರೋಗ್ಯ ಮತ್ತು ಸಂಶೋಧನೆಯನ್ನು ಸಮಗ್ರವಾಗಿ ಸಂಯೋಜಿಸಲಿರುವ, ರಾಜ್ಯದ ಅರ್ಥ ವ್ಯವಸ್ಥೆ ಮರುವ್ಯಾಖ್ಯಾನಿಸಲಿರುವ ಹಾಗೂ ಕರ್ನಾಟಕದ ವಿಶಿಷ್ಟ ಹೆಗ್ಗುರುತೂ ಆಗಲಿರುವ ಹೊಸ ʼಕ್ವಿನ್‌ ಸಿಟಿʼ ಅಂದ್ರೆ ಏನು? ಅಲ್ಲಿ ಏನಿರುತ್ತೆ?

ಬನ್ನಿ ಈ ಬಗ್ಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಪೂರ್ಣ ವಿವರಣೆ ನೀಡಿದ್ದಾರೆ.

ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್‌ ಸಿಟಿ-ಯು (Knowledge, Wellbeing, and Innovation City- KWIN City ) ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್‌ ಲಿವಿಂಗ್‌ʼ ಪರಿಕಲ್ಪನೆ ಕಾರ್ಯರೂಪಕ್ಕೆ ತರಲು ದೊಡ್ಡಬಳ್ಳಾಪುರ ಮತ್ತು ದಾಬಸ್‌ಪೇಟೆ ಮಧ್ಯೆ ಅಸ್ತಿತ್ವಕ್ಕೆ ಬರಲಿದೆ.

ಕ್ವಿನ್‌ ಸಿಟಿ ಅಂದರೆ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆ. ಇವುಗಳ ನಡುವಣ ಸಮನ್ವಯತೆಯು ಆರ್ಥಿಕ ಬೆಳವಣಿಗೆ ಉತ್ತೇಜಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಮುನ್ನಡೆಸಲಿದೆ. ಯೋಜಿತ ನಗರವಾಗಿ  ಕ್ವಿನ್‌ ಸಿಟಿಯು ಅತ್ಯಾಧುನಿಕ ತಂತ್ರಜ್ಞಾನ ಸಂಯೋಜಿಸುವ ಮೂಲಕ ಪರಿಸರ ಸ್ನೇಹಿ ಮೂಲಸೌಲಭ್ಯಗಳ ನೆರವಿನಿಂದ ಹೊಸ-ಯುಗದ, ಸುಸ್ಥಿರ ಜೀವನಶೈಲಿ ಒದಗಿಸಲಿದೆ. ಸ್ವಾವಲಂಬನೆಯ ನೀರು ಮತ್ತು ವಿದ್ಯುತ್ ಸೌಲಭ್ಯಗಳೊಂದಿಗೆ ಭವಿಷ್ಯದ ಸ್ಮಾರ್ಟ್ ನಗರಗಳಿಗೆ ಆದರ್ಶ ಉದಾಹರಣೆಯಾಗಿರಲಿದೆ ಎಂದು ಪಾಟೀಲ ವಿವರಿಸಿದರು.

ʼಕ್ವಿನ್‌ ಸಿಟಿʼಯ ದೂರದೃಷ್ಟಿ ಸಾಕಾರಗೊಳಿಸಲಿರುವ ಪ್ರಮುಖ ಜಿಲ್ಲೆಗಳು:

ಜ್ಞಾನ ಜಿಲ್ಲೆ:  ಪ್ರತ್ಯೇಕ ಜ್ಞಾನ ಕೇಂದ್ರದೊಂದಿಗೆ, ಕ್ವಿನ್‌ ಸಿಟಿ-ಯು ಆಧುನಿಕ ಪಠ್ಯಕ್ರಮ ಮತ್ತು ಉನ್ನತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳನ್ನು ಒಳಗೊಂಡ ಪ್ರಧಾನ ಶಿಕ್ಷಣ ಕೇಂದ್ರ  ಸ್ಥಾಪಿಸಲು ಬಯಸುತ್ತದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಾವಳಿಗಳನ್ನು  ಆಧರಿಸಿ   ಕ್ಯಾಂಪಸ್‌ಗಳನ್ನು ನಿರ್ವಹಿಸಲು 500 ಉನ್ನತ ವಿದೇಶಿ ಶಿಕ್ಷಣ ಸಂಸ್ಥೆಗಳನ್ನು ಆಕರ್ಷಿಸುವ ಗುರಿಯನ್ನು ನಗರವು  ಹೊಂದಿದೆ. ಇದು ಕರ್ನಾಟಕವನ್ನು ಜಾಗತಿಕ ಶಿಕ್ಷಣದ ಕ್ಷೇತ್ರದ ಮುಂಚೂಣಿಗೆ ಕೊಂಡೊಯ್ಯುವ ಶೈಕ್ಷಣಿಕ ವಲಯ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಉತ್ತೇಜಿಸಲಿದೆ.

ಆರೋಗ್ಯ ಜಿಲ್ಲೆ: ಜೀವ ವಿಜ್ಞಾನ (ಲೈಫ್ ಸೈನ್ಸಸ್) ಪಾರ್ಕ್  ಒಳಗೊಂಡಿರುವ  ಕ್ವಿನ್‌ ಸಿಟಿಯು ಏಷ್ಯಾದ ಪ್ರಮುಖ ಶೈಕ್ಷಣಿಕ ವೈದ್ಯಕೀಯ ಕೇಂದ್ರವಾಗಿ ಬೆಳೆಯಲಿದೆ.   ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಆಸ್ಪತ್ರೆಗಳನ್ನು ಆಕರ್ಷಿಸುವ ಮೂಲಕ ಆರೋಗ್ಯ ರಕ್ಷಣೆಯ ಭವಿಷ್ಯವನ್ನು ರೂಪಿಸಲಿದೆ. ಈ ಉಪಕ್ರಮವು ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕದ ಸ್ಥಾನಮಾನವನ್ನು ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಮಟ್ಟಕ್ಕೆ ಏರಿಸಲಿದೆ. ಇದು ಆರೋಗ್ಯದ ಶ್ರೇಷ್ಠತೆಗೆ ದಾರಿದೀಪವಾಗಿರಲಿದೆ.

ನಾವೀನ್ಯತಾ ಜಿಲ್ಲೆ: ಕ್ವಿನ್‌ ಸಿಟಿಯು ಜೀವ ವಿಜ್ಞಾನ, ಭವಿಷ್ಯದ ಸಂಚಾರ, ಸೆಮಿಕಂಡಕ್ಟರ್‌, ಸುಧಾರಿತ ಪರಿಕರ, ಆಧುನಿಕ ತಯಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣೆ ಹಾಗೂ ಬಾಹ್ಯಾಕಾಶ ತಂತ್ರಜ್ಞಾನದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ಉದ್ಯಮ ವಲಯಗಳ ಅಗತ್ಯಗಳನ್ನು ಪೂರೈಸಲಿದೆ. ಜಾಗತಿಕ ಬದಲಾವಣೆಗಳು ಮತ್ತು ಮಾರುಕಟ್ಟೆ ಬೇಡಿಕೆಗಳಿಗೆ ಹೊಂದಿಕೊಳ್ಳುವ ಮೂಲಕ, ಕ್ವಿನ್‌ ಸಿಟಿಯು ವಿಶಾಲವಾದ ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕದ ಪಾತ್ರವನ್ನು ಹೆಚ್ಚಿಸುವ ಗುರಿ  ಹೊಂದಿದೆ, ನಿರಂತರವಾದ ನಾವೀನ್ಯತೆಯ ವಾತಾವರಣ  ಉತ್ತೇಜಿಸಲಿದೆ.

ಸಂಶೋಧನಾ ಜಿಲ್ಲೆ: ಜೈವಿಕ ಔಷಧ ಮತ್ತು ವೈಜ್ಞಾನಿಕ ಸಂಶೋಧನೆ ಹೆಚ್ಚಿಸಲು ಮೀಸಲಾಗಿರುವ  ಕ್ವಿನ್‌ ಸಿಟಿಯು ಕ್ಲಿನಿಕಲ್ ಪ್ರಯೋಗ ಕೇಂದ್ರಗಳು ಮತ್ತು ಸಂಶೋಧನಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಿದೆ. ಇದು ಜಾಗತಿಕ ಜ್ಞಾನ ಆಧಾರಿತ ಆರ್ಥಿಕತೆಗೆ ಗಣನೀಯವಾಗಿ ಕೊಡುಗೆ ನೀಡುವ, ಪ್ರಕಾಶನ, ಸೆಮಿನಾರ್‌ ಮತ್ತು ಸಾರ್ವಜನಿಕ ಉಪನ್ಯಾಸಗಳ ಮೂಲಕ   ಸಂಶೋಧನೆಗಳ ಪ್ರಸಾರವನ್ನು ಉತ್ತೇಜಿಸಲಿದೆ.

ಕ್ವಿನ್‌ ಸಿಟಿ-ಯು ಅಭಿವೃದ್ಧಿಗಿಂತ ಹೆಚ್ಚಿನದಾಗಿದೆ. ಇದು ಭವಿಷ್ಯದ ಕಡೆಗಿನ ಒಂದು ದಿಟ್ಟ ಹೆಜ್ಜೆಯಾಗಿದೆ. ಶಿಕ್ಷಣ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಾಗಿ ವಿಶ್ವ ದರ್ಜೆಯ ಕೇಂದ್ರವನ್ನು ನಿರ್ಮಿಸಲಿದೆ.

ಮಾಹಿತಿಗೆ  kwincity.com ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!