ವಿರೋಧಿಗಳಿಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೇ ಉತ್ತರ ನೀಡಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು ಸೆ 28: ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.

ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡ್ತಿದ್ರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡ್ತಿದ್ರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದನ್ನು ವಿವರಿಸಿದರು.

ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರ ವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

ನಮ್ಮ ಭಾಗ್ಯಗಳನ್ನು, ಗ್ಯಾರಂಟಿಗಳನ್ನು ವಿರೋಧಿಗಳು ಆಡಿಕೊಂಡರು. ಈಗಲೂ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಹೋದಲ್ಲಿ ಬಂದಲ್ಲಿ ಗ್ಯಾರಂಟಿಗಳ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಧನ್ಯತೆ ಅರ್ಪಿಸುತ್ತಿದ್ದಾರೆ ಎನ್ನುತ್ತಾ ಉಚಿತ ಯೋಜನೆಗಳ ಫಲಾನುಭವಿಗಳು ಗೃಹಲಕ್ಷ್ಮಿ ಹಣದಲ್ಲಿ ಮಾಡಿದ ಸಾಧನೆಗಳನ್ನು ವಿವರಿಸಿದರು.

ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು ಎಂದರು.

ಅನ್ನಭಾಗ್ಯದ ಮೇಲೆ “ಅನ್ನ” ಅಂತಲೇ ಸಿನಿಮಾ ಬಂದಿದೆ. ನಾನೂ ಸಿನಿಮಾ ನೋಡಿದೆ ಎಂದರು.

ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ. ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು. ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ: ಕೆ.ವೈ.ನಾರಾಯಣಸ್ವಾಮಿ, ನಾಟಕಕಾರರು, ಪ್ರಾಧ್ಯಾಪಕರು.

ಉಚಿತ ಯೋಜನೆಗಳನ್ನು ಜಾರಿ ತಂದ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಮೊದಲ ಸ್ಥಾನಗಳಲ್ಲಿ ಇದ್ದು ಜಿಡಿಪಿ ಬೆಳವಣಿಗೆ ಉತ್ತಮವಾಗಿವೆ. ಉಚಿತ ಯೋಜನೆಗಳನ್ನು ಜಾರಿ ಮಾಡದ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅತ್ಯಂತ ಕುಸಿದು, ಜಿಡಿಪಿ ಕೂಡ ಕುಸಿದಿದೆ: ಪ್ರೊ.ಎಂ.ಚಂದ್ರ ಪೂಜಾರಿ, ನಿರ್ದೇಶಕರು, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ, ಧಾರವಾಡ.

2017 ರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಾ, ಕೊರೋನಾ ಕಾಲದಲ್ಲಿ ಇನ್ನಷ್ಟು ನೆಲಕಚ್ಚಿತು. ನಿರುದ್ಯೋಗ, ಬಡತನ ಇಮ್ಮಡಿಯಾಗಿ ಜಿಡಿಪಿ ಕುಸಿದಿತ್ತು. ಇಂಥಾ ಭಯಾನಕ ಆರ್ಥಿಕ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿದೆ. ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರವಾಯಿತು. ಇದನ್ನು ನಾವೆಲ್ಲಾ ಧೈರ್ಯದಿಂದ ಹೇಳಬೇಕು. ದೇಶಕ್ಕೆ ಮಾದರಿಯಾದ ಈ ಯೋಜನೆಗಳು ಜನಕಲ್ಯಾಣಕ್ಕೆ ಹೇಗೆ ಸಹಕರಿಸಿತು ಎಂಬುದನ್ನು ಹೇಳಬೇಕು: ಪುರುಷೋತ್ತಮ ಬಿಳಿಮಲೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು.

ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ನಾಟಕಕಾರರಾದ ಕೆ.ವೈ.ನಾರಾಯಣಸ್ವಾಮಿ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾದ ಪ್ರೊ.ಎಂ.ಚಂದ್ರ ಪೂಜಾರಿ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]