ADGP ಪತ್ರ, ದಳಪತಿಗಳು ತತ್ತರ.. ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಂಗಳೂರು; ನಿನ್ನೆ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪದ ಬೆನ್ನಲ್ಲೇ, ಸಂಜೆ ಎಡಿಜಿಪಿ ಎಂ.ಚಂದ್ರಶೇಖರ್‌ ರಾವ್‌ ಅವರು ಸಿಬ್ಬಂದಿಗಳಿಗೆ ಬರೆದಿರುವ ಪತ್ರ ದಳಪತಿಗಳನ್ನು ಮುಜುಗರಕ್ಕೀಡುಮಾಡಿದ್ದು, ತನಿಖೆಯ ವೇಳೆ ಕೇಂದ್ರ ಸಚಿವರಿಗೆ ಇದು ಬೇಕಿತ್ತಾ.? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ. ಎಡಿಜಿಪಿ ಎಂ.ಚಂದ್ರಶೇಖರ್‌ ರಾವ್‌ ಬರೆದಿರುವ ಪತ್ರದ ಹಿಂದೆ ಸಾಕಷ್ಟು ಕೈವಾಡವಿದೆ. ಅವರ ಬೆನ್ನಿಂದೆ ನಿಂತು ಈ ರೀತಿ ಪತ್ರ ಬರೆಯುವುದಕ್ಕೆ ಪ್ರೇರಣೆಕೊಟ್ಟಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಅಧಿಕಾರಿಗಳು ಸರ್ಕಾರದ ಕೈಗೊಂಬೆ: ರಾಜ್ಯ ಸರ್ಕಾರ ಇವತ್ತು ಯಾವ ರೀತಿ ನಡೆಯುತ್ತಿದೆ. ಅಧಿಕಾರಿಗಳು ಸರ್ಕಾರದ ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ. ಭವಿಷ್ಯ ಹಿಂದಿನ ಸಾಕಷ್ಟು ಸರ್ಕಾರಗಳು ರಾಜ್ಯದಲ್ಲಿ ಆಡಳಿತ ಮಾಡಿದ್ದವು, ಆದರೆ ಈ ರೀತಿಯಾಗಿ ಅಧಿಕಾರಿಗಳನ್ನ ದುರುಪಯೋಗ ಪಡೆಸಿಕೊಂಡು ಈ ರೀತಿ ಆಡಳಿತ ಮಾಡುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಆಗಾಗಿ ಇದ್ಯಾವುದಕ್ಕೂ ಭಯಪಡುವ ಅಗತ್ಯ ಇಲ್ಲ. ಅವರ ಈ ಇಂತಹ ನೂರು ಪತ್ರಗಳನ್ನ ಬರೆಯಲಿ, ಅಧಿಕಾರ ಶಾಶ್ವತ ಅಲ್ಲ, ಇವರು ತೋರಿಸಿಕೊಟ್ಟಿರುವ ದಾರಿ ದ್ವೇಷದ ರಾಜಕಾರಣ ಮುಂದುವರೆಸಬೇಕಾ ? ಅಧಿಕಾರದಲ್ಲಿದ್ದಾಗ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಣ್ಣ ಅವರು ಈ ರೀತಿ ಮಾಡಿದರಾ.? ಎಂದು ಕಿಡಿಕಾರಿದರು.

ನಿನ್ನೆ ಬರೆದಿರುವ ಪತ್ರದಲ್ಲಿ ಆ ಪತ್ರದಲ್ಲಿ ಏನೇನು ಉಲ್ಲೇಖಿಸಿದ್ದರೆ ಇವೆಲ್ಲವನ್ನು ನೋಡಿದಾಗ ಅದರ ಹಿಂದೆ ಯಾವ್ಯಾವ ವ್ಯಕ್ತಿಗಳು ಅವರಿಗೆ ಪ್ರೇರೆಪಣೆ ಕೊಟ್ಟಿದ್ದಾರೆ ಅನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ಎಡಿಜಿಪಿ ಪತ್ರದಲ್ಲೇನಿದೆ; ಎಸ್‌ಐಟಿ ತನಿಖೆಯ ಆರೋಪಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ತಮ್ಮ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಹಾಗೂ ಬೆದರಿಕೆ ಹಾಕಿದ್ದಾರೆ ಎಂದು ಲೋಕಾಯುಕ್ತ ವಿಶೇಷ ತನಿಖಾ ದಳದ ADGP ಎಂ.ಚಂದ್ರಶೇಖ‌ರ್ ಅವರು ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರ ಆರೋಪಗಳಿಗೆ ಬೆದರಿಕೆಗಳಿಗೆ ಬಗ್ಗಲ್ಲ. ಅವರು ಎಷ್ಟೇ ಶಕ್ತಿ ಶಾಲಿ, ಉನ್ನತ ಸ್ಥಾನದಲ್ಲಿದ್ದರೂ ಜಾಮೀನಿನ ಮೇಲಿರುವ ಆರೋಪಿ ಅಷ್ಟೇ ಎಂದಿದ್ದಾರೆ..

ನನ್ನ ವಿರುದ್ಧ ವಾಗ್ದಾಳಿ ಮಾಡುವ ಮೂಲಕ ಎಸ್‌ಐಟಿ ಅಧಿಕಾರಿಗಳ ಮನಸ್ಸಿನಲ್ಲಿ ಭಯ ಮೂಡಿಸುವುದು, ಅವರ ಕರ್ತವ್ಯವನ್ನು ಕುಗ್ಗಿಸುವ ಉದ್ದೇಶವಾಗಿದೆ ಎಂದು ಚಂದ್ರಶೇಖರ್ ಗುಡುಗಿದ್ದಾರೆ.

ಅಲ್ಲದೆ “ಹಂದಿಗಳೊಂದಿಗೆ ಎಂದಿಗೂ ಕುಸ್ತಿಯಾಡಬೇಡಿ. ನೀವಿಬ್ಬರೂ ಕೊಳಕಾಗುತ್ತೀರಿ ಮತ್ತು ಹಂದಿಯು ಅದನ್ನೇ ಬಯಸುತ್ತದೆ” ಎಂಬ ಜಾರ್ಜ್ ಬರ್ನಾರ್ಡ್ ಷಾ ಅವರ ಪ್ರಸಿದ್ದ ಇಂಗ್ಲಿಷ್ ಸಾಲನ್ನೂ ಉಲ್ಲೇಖಿಸುವ ಮೂಲಕ ಕುಮಾರಸ್ವಾಮಿಗೆ ಖಾರವಾಗಿ ಟಾಂಗ್ ನೀಡಿದ್ದಾರೆ. ಮುಂದುವರಿದು ಅಧಿಕಾರಿಗಳು ತನಿಖೆಯ ಭರವಸೆ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಆರೋಪ: ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಇಂತಹ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ತನಿಖೆ ಮಾಡಿಸುತ್ತಿದೆ.

ಈ ವ್ಯಕ್ತಿ ಸರಣಿ ಅಪರಾಧಗಳನ್ನು ಮಾಡಿದ್ದಾನೆ ಎಂದು ಕುಮಾರಸ್ವಾಮಿ ಅವರು ಲೋಕಾಯುಕ್ತ ವಿಶೇಷ ತನಿಖಾ ದಳದ (SIT) ಐಜಿಪಿ ಎಂ.ಚಂದ್ರಶೇಖ‌ರ್ ಅವರನ್ನು ಗುರಿಯಾಗಿಸಿ ಇಂದು ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!