ADGP ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್; HD ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು.

ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದು ಅವರು ಹೇಳಿದರು.

ಅಧಿಕಾರಿ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರದ ಬಗ್ಗೆ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.

ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು, ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಸಚಿವರು ಹೇಳಿದರು.

ನನ್ನ ಪ್ರಶ್ನೆಗಳಿಗೆ ಅಧಿಕಾರಿ ಉತ್ತರಿಸಲಿ; ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಮಾಧ್ಯಮಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದ ಎನ್ನುವುದು ಗೊತ್ತಿದೆ. ಅವರ ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ರೆಡಿ ಮಾಡಿಕೊಟ್ಟರು, ಅವರೊಂದಿಗೆ ಇನ್ನೊಬ್ಬರು ಯಾರಿದ್ದರು ಎನ್ನುವುದು ನನಗೆ ಗೊತ್ತಿದೆ ಎಂದು ಸಚಿವರು ಹೇಳಿದರು.

ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೇನೆ. ಈತ ಆಂಧ್ರ ಪ್ರದೇಶ ಮೂಲದವನು, ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರು ಯಾರನ್ನು ಹಿಡಿದು ಇಲ್ಲಿಗೆ ಬಂದಿದ್ದೀರಿ? ಆತ ಬಳಕೆ ಮಾಡಿರುವ ಭಾಷೆ ಆತನ ಸಂಸ್ಕೃತಿಯನ್ನು ತೋರಿಸುತ್ತದೆ.

ಯಾರು ಯಾರ ಜತೆ ಈತನ ಕ್ರಿಮಿನಲ್ ನಂಟಿದೆ ಎನ್ನುವುದನ್ನು ಶನಿವಾರವೇ ದಾಖಲೆ ಸಮೇತ ಹೇಳಿದ್ದೇನೆ. ಒಬ್ಬ ಕೇಂದ್ರ ಮಂತ್ರಿ ಬಗ್ಗೆ ಯಾವ ಭಾಷೆ ಬಳಸಿದ್ದಾನೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಸಚಿವರು ಹೇಳಿದರು.

ನಾನು ದೂರು ಕೊಟ್ಟಿದ್ದೀನಾ?; ಪತ್ರದಲ್ಲಿ ಸತ್ಯಮೆಯ ಜಯತೆ ಎಂದು ಆತ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರುವುದು ಕೂಡ ಅದೇ ಉದ್ದೇಶಕ್ಕೆ. ಶನಿವಾರ ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಕೂಡ ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೀನಾ? ಅವರ ಕೈಕೆಳಗೆ ಕೆಲಸ ಮಾಡುವ ಇನ್ಸ್ಪೆಕ್ಟರ್ ಗೆ ರೂ.20 ಕೋಟಿ ಡಿಮ್ಯಾಂಡ್ ಇಟ್ಟು ಸಿಕ್ಕಿಬಿದ್ದಿದ್ದಾನೆ. ಆ ಇನ್ಸ್ಪೆಕ್ಟರ್ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ ₹2 ಕೋಟಿ ತಂದು ಕೊಡಬೇಕು ಎಂದು ಬ್ಲಾಕ್ ಮೇಲ್ ಮಾಡಿದ್ದು ಈತನೇ ಅಲ್ಲವೇ? FIR ಹಾಕಿದ ನಂತರ ಕೇಸ್ ಕೋರ್ಟ್ ಮುಂದೆ ಇದೆಯಲ್ಲ.. ಇದೇನಾ ಆತನ ಸತ್ಯಮೇವ ಜಯತೆ? ಎಂದು ಸಚಿವರು ಕಿಡಿಕಾರಿದರು.

ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪಟಾಲಂಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮೆಚ್ಚಿಸಲು ನಾನು ರಾಜೀನಾಮೆ ಕೊಡಬೇಕಾ? ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಿಲ್ಲ ಅಂದ್ಮೇಲೆ ರಾಜೀನಾಮೆ ಯಾಕೆ ಕೊಡಲಿ? ಸುಳ್ಳು ಹೇಳ್ತಿರೋದು ನಾನಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!