ಸಿಎಂ ಸಿದ್ದರಾಮಯ್ಯ ಪತ್ನಿ ಭಾವನಾತ್ಮಕ ಪತ್ರಕ್ಕೆ ಬಿಜೆಪಿ ಪ್ಲಾನೇ ಉಲ್ಟಾ..!!

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲಾದ 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದು, ತಮಗೆ ನೀಡಲಾದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಭಾವನಾತ್ಮಕವಾಗಿ ಪತ್ರ ಬರೆದಿರುವ ಅವರು, ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವ ಕುರಿತು.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಅದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.

ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ದಾಂತವಾಗುತ್ತದೆ ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಅಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ.

ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.

ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ.

ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]