ದೊಡ್ಡಬಳ್ಳಾಪುರಕ್ಕೆ ಬಂದಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ..!

ದೊಡ್ಡಬಳ್ಳಾಪುರ: ನಾಳೆ ಅಕ್ಟೋಬರ್ 2. ಭಾರತದ ಪಾಲಿನ ಮಹತ್ವದ ದಿನ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮ ದಿನವಿದು. ಮಹಾತ್ಮ ಗಾಂಧೀಜಿ ಎನ್ನುವುದು ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಹೆಸರು.

ಇವರೊಂದು ಶಕ್ತಿ, ಬದುಕಿನ ಆದರ್ಶ. ಗಾಂಧೀಜಿ ತನ್ನ ಸತ್ಯ, ಅಹಿಂಸೆಯ ಸಿದ್ಧಾಂತದಿಂದಲೇ ಜಗವನ್ನು ಗೆದ್ದ ಚೇತನ. ಹೀಗಾಗಿ ವಿಶ್ವದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಗಾಂಧೀಜಿ ಅವರ ಶಾಂತಿ ಮತ್ತು ಅಹಿಂಸಾ ತತ್ವವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿಯೂ ಆಚರಣೆ ಮಾಡಲಾಗುತ್ತದೆ.

ಜಗತ್ತಿನ ಮೇರು ವ್ಯಕ್ತಿಗಳಲ್ಲಿ ಒಬ್ಬರಾದ ಮಹಾತ್ಮಗಾಂಧೀಜಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು ಎಂದು ಹೇಳಿಕೊಳ್ಳುವುದೇ ಹೆಮ್ಮೆಯ ವಿಷಯ. ಅದೆಷ್ಟೋ ದೇಶ ಪ್ರೇಮಿಗಳಿಗೆ ಪ್ರೇರಣೆಯಾಗಿ ರುವ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಗಾಂಧೀಜಿ ದೊಡ್ಡಬಳ್ಳಾಪುರ ಹಾಗೂ ತಾಲೂಕಿನ ಸಮೀಪದ ನಂದಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭಗಳ ಕುರಿತು ಒಂದು ಮೆಲುಕು.

ದೊಡ್ಡಬಳ್ಳಾಪುರದಲ್ಲಿ ಗಾಂಧಿ: 1934ರ ಜನವರಿ 4 ರಂದು ದೊಡ್ಡ ಬಳ್ಳಾಪುರಕ್ಕೆ ಭೇಟಿ ನೀಡಿದ್ದ ಗಾಂಧಿಯನ್ನು ಕಂಡ ಹಿರಿಯರಿಗೆ ಏನೋ ಧನ್ಯತಾಭಾವ. ದೊಡ್ಡಬಳ್ಳಾಪುರಕ್ಕೆ ಗಾಂಧೀಜಿ ಭೇಟಿ ನೀಡಿದ್ದ ವೇಳೆ ಇಲ್ಲಿನ ಜನತೆಗೆ ದೇಶ ಪ್ರೇಮದ ಭಾಷಣ ಮಾಡಿದ್ದರು ಮಹಾತ್ಮ ಗಾಂಧಿ ಆಗ ದೊಡ್ಡಬಳ್ಳಾಪುದ ಜನಸಂಖ್ಯೆ ಬರೀ 25 ಸಾವಿರ. ಸಿದ್ದಲಿಂಗಯ್ಯ, ರುಮಾಲೆ ಭದ್ರಣ್ಣ, ಮುಗುವಾಳಪ್ಪ ಮೊದಲಾದವರು ಸ್ವಾತಂತ್ರ್ಯ ಹೋರಾಟಗಾರರಾಗಿ ರೂಪಗೊಳ್ಳಲು ಗಾಂಧೀಜಿ ಪ್ರೇರಣೆ.

ಗಾಂಧೀಜಿ ದೊಡ್ಡಬಳ್ಳಾಪುರಕ್ಕೆ ಬಂದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಸಿದ್ದಲಿಂಗಯ್ಯ, ರುಮಾಲೆ ಚನ್ನಬಸವಯ್ಯ, ರುಮಾಲೆ ಭದ್ರಣ್ಣ, ಎಚ್‌.ಮುಗುವಾಳಪ್ಪ, ನಾ.ನಂಜುಂಡಯ್ಯ ಮುಂತಾದವರೊಂದಿಗೆ ಊರಿನ ಜನ ಹೂ ಮಾಲೆ ಹಾಕಿ ಆತ್ಮೀಯ ಸ್ವಾಗತಕೋರಿದ್ದರು.

ಪುರಸಭೆ ವತಿಯಿಂದ ಗಾಂಧೀಜಿಗೆ ಭಿನ್ನವತ್ತಳೆ ನೀಡಿ ಸನ್ಮಾನಿಸಿ, ಹರಿಜನ ನಿಧಿಗಾಗಿ ಅಂದಿನ ಕಾಲದಲ್ಲಿಯೇ 500ರೂ. ಸಂಗ್ರಹಿಸಿ ನೀಡಲಾಗಿತ್ತು. ಅದನ್ನು ಸ್ವೀಕರಿಸಿದ ಗಾಂಧೀಜಿ ಸ್ಥಳೀಯರು ತೋರಿದ ಅಭಿಮಾನಕ್ಕೆ ವಂದಿಸಿದ್ದರು.

ಅಂದು ಗಾಂಧೀಜಿ ಉಪನ್ಯಾಸ ನೀಡಿದ ಸ್ಮರಣಾರ್ಥವಾಗಿ ಆ ಸ್ಥಳಕ್ಕೆ ಗಾಂಧಿನಗರ ಎಂದು ನಾಮಕರಣ ಮಾಡಲಾಗಿತ್ತು. ಅದೇ ಇಂದಿಗೂ ಹಳೇ ಬಸ್‌ ನಿಲ್ದಾಣ ಸಮೀಪದ ಪೇಟೆಗೆ ಗಾಂಧಿನಗರ ಅಂತಾ ಹೆಸರಿದೆ.

ಗಾಂಧೀಜಿ ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ್ದಾಗ ರುಮಾಲೆ ಭದ್ರಣ್ಣ ಮತ್ತು ಸಂಗಡಿಗರು ರುಮಾಲೆ ಛತ್ರದಲ್ಲಿ ಖಾದಿ ಬಟ್ಟೆಗಳ ಪ್ರದರ್ಶನ ಏರ್ಪಡಿಸಿದ್ದರು. ಅಂದು ಸಾವಿರಾರು ಗಾಂಧಿ ಟೋಪಿಗಳು ಮಾರಾಟವಾಗಿದ್ದವು ಎನ್ನುವುದು ಗಮನಾರ್ಹ ಸಂಗತಿ.

1924ರಲ್ಲಿ ಬೆಳಗಾವಿಯಲ್ಲಿ ನಡೆದ 39ನೇ ಅಖೀಲ ಭಾರತ ಕಾಂಗ್ರೆಸ್‌ ಅಧಿವೇಶನಕ್ಕೆ ದೊಡ್ಡಬಳ್ಳಾಪುರದಿಂದಲೂ ಪ್ರತಿನಿಧಿಗಳು ಭಾಗವಹಿಸಿದ್ದರು.1930ರಲ್ಲಿ ನಡೆದದಂಡಿಉಪ್ಪಿನ ಸತ್ಯಾಗ್ರಹದಲ್ಲೂ ದೊಡ್ಡಬಳ್ಳಾಪುರದಿಂದ ರುಮಾಲೆ ಚನ್ನಬಸವಯ್ಯ, ಎಚ್‌.ಮುಗು ವಾಳಪ್ಪ ಭಾಗವಹಿಸಿದ್ದರು. ಇಲ್ಲಿಯೂ ದೇಶಿ ಉಪ್ಪನ್ನು ಮಾರಾಟ ಮಾಡಲಾಯಿತಲ್ಲದೆ, ವರ್ತಕರು ವಿದೇಶಿ ವಸ್ತುಗಳನ್ನು ಮಾರಾಟ ಮಾಡುವುದಿಲ್ಲವೆಂದು ಸಂಕಲ್ಪ ಮಾಡಿದ್ದರು.

ಇದನ್ನೂ ಓದಿ: ಮೈಸೂರು ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರ ಅಥ್ಲೆಟಿಕ್ ಆಟಗಾರರು..!

ದೊಡ್ಡಬಳ್ಳಾಪುರ ತಾಲೂಕಿನ ಸಮೀಪವೇ ಇರುವ ನಂದಿ ಬೆಟ್ಟಕ್ಕೆ1927ರಲ್ಲಿ45 ದಿನ ಹಾಗೂ 1936ರಲ್ಲಿ3 ವಾರ ಗಾಂಧೀಜಿ ತಂಗಿದ್ದರು. ಗಾಂಧೀಜಿ ಅವರಿಗೆ ಅಪೊಪ್ಲಿಕ್ಸ್‌ (ಲಕ್ವಾ)ಗೆ ಸಂಬಂಧಿಸಿದ ಕಾಯಿಲೆ ಸಂಬಂಧ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಕುಟುಂಬ ವೈದರ ಸಲಹೆ ಮೇರೆಗೆ ನಂದಿ ಗಿರಿಧಾಮವೇ ಪ್ರಶಸ್ತ ಸ್ಥಳವೆಂದು ತೀರ್ಮಾನಿಸಿ ಇಲ್ಲಿಗೆ ಬಂದಿದ್ದರು.

ಗಿರಿಧಾಮದಲ್ಲಿ ಜನಸಂದಣಿ ಹೆಚ್ಚಾಗಿ ಗಾಂಧೀಜಿ ಅವರ ಆರೋಗ್ಯ ಕೈಕೊಟ್ಟಿದ್ದೂ ಉಂಟು. ಆದರೆ ವೈದ್ಯರ ಕಟ್ಟುನಿಟ್ಟಿನ ನಿಗಾದಿಂದ ಅವರು ಬಹುಬೇಗ ಚೇತರಿಸಿಕೊಂಡರು. 1936ರಲ್ಲಿ ಹಠಾತ್ತನೆ ರಕ್ತದೊತ್ತಡ ಅಧಿಕವಾಗಿ ನಂದಿಗಿರಿಧಾಮವೇ ಪ್ರಶಸ್ತ ಸ್ಥಳವೆಂದು ಮತ್ತೂಮ್ಮೆ ಇಲ್ಲಿಗೆ ಆಗಮಿಸಿದ್ದರು.

ಇದೇ ವೇಳೆ ಖ್ಯಾತ ವಿಜ್ಞಾನಿ ಭಾರತರತ್ನ ಸರ್‌ ಸಿ.ವಿ.ರಾಮನ್‌ಕೂಡ ಬೆಟ್ಟಕ್ಕೆ ಬಂದು ಮಹಾತ್ಮರೊಡನೆ ಕೆಲ ದಿನ ತಂಗಿದ್ದರು.

ಅಕ್ಟೋಬರ್ 2 ಎಂಬುದು ಬಾಪು ಅವರ ಚಿಂತನೆ, ಆದರ್ಶ, ಜೀವನ ಮೌಲ್ಯಗಳನ್ನು ಸ್ಮರಿಸುವ ಹಾಗೂ ಅದರಂತೆ ನಾವು ಕೂಡಾ ನಡೆಯುವ ಪಣ ತೊಡುವ ದಿನವಾಗಿದೆ.

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಸಂಡೂರು ಉತ್ತರ ಮತ್ತು ದಕ್ಷಿಣ ವಲಯದ ಅರಣ್ಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

[ccc_my_favorite_select_button post_id="119542"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!