ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ

ಮೈಸೂರು; ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಇಂದು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು.

ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಇಂದು ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು.

ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ.

ಅದೇ ದಿನ ಸಂಜೆ 6ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಪ್ರಧಾನ ಉದ್ಘಾಟನಾ ಸಮಾರಂಭದ ನಂತರ ಚಲನಚಿತ್ರೋತ್ಸವ, ಆಹಾರಮೇಳ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.

ಅ.12ರಂದು ವಿಜಯದಶಮಿ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ನಡೆಯಲಿದೆ. ಹಾಗೆಯೇ ಸಂಜೆ 7ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಅ.3 ರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ವ್ಯಾಪಕ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಟ್ಕ‌ರ್ ಅವರು ತಿಳಿಸಿದ್ದಾರೆ. ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ಬಾರಿ 5000ಕ್ಕೂ ಹೆಚ್ಚು ಪೊಲೀಸರನ್ನು ದಸರಾ ವಿಶೇಷ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

13,670 ಸಿಸಿ ಕ್ಯಾಮೆರಾ ಕಣ್ಣಾವಲನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದ್ದು, ಪೊಲೀಸ್ ಸಹಾಯ ಕೇಂದ್ರಗಳನ್ನು ಪ್ರಮುಖ ಸ್ಥಳಗಳಲ್ಲಿ ತೆರೆಯಲಾಗಿದೆ. ಹಾಗೆಯೇ ಪ್ರಮುಖ ಸ್ಥಳಗಳಲ್ಲಿ ವಾಚ್ ಟವರ್‌ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಮಹಿಳೆಯರ ರಕ್ಷಣೆಗಾಗಿಯೇ ಚಾಮುಂಡಿ ಕಾರ್ಯ ಪಡೆಯನ್ನು ಸಹ ದಸರಾ ಸಂದರ್ಭದಲ್ಲಿ ಆಯೋಜಿಸಲಾಗಿದೆ ಎಂದರು. ದಸರಾ ಮಹೋತ್ಸವದ 2 ಅಂಗವಾಗಿ ಅ. 3ರಿಂದ 12ರವರೆಗೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅರಮನೆಯಲ್ಲಿ ನವರಾತ್ರಿ ವೇಳೆಯಲ್ಲಿ ಯದು ವಂಶಸ್ಥರಾದ ಯದುವೀರ್ ಅವರು ಖಾಸಗಿ ದರ್ಬಾರನ್ನು ನಡೆಸಲಿದ್ದಾರೆ. ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ್ ಅವರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಖಾಸಗಿ ದರ್ಬಾರನ್ನು ನಡೆಸುತ್ತಿದ್ದಾರೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]