Friend commits suicide due to the mistake of lending to a friend..!

ಕನ್ನಡ ಸೀರಿಯಲ್ ನಟಿ ಕಿರುಕುಳಕ್ಕೆ ಯುವಕ ಬಲಿ..!

ಬೆಂಗಳೂರು: ಮದುವೆಯಾಗುವಂತೆ ಸೀರಿಯಲ್ ನಟಿ ಪೀಡಿಸುತ್ತಿದ್ದಳೆಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪಿಳ್ಳಹಾನಹಳ್ಳಿ ನಿವಾಸಿ ಮದನ್ (25) ದುರ್ದೈವಿ.

ಸೀರಿಯಲ್ ನಟಿ ವೀಣಾ ಎಂಬಾಕೆ ಜತೆಗೆ ಮದನ್ ಲಿವಿಂಗ್ ರಿಲೇಶನ್ ಶಿಪ್ (ಸಹ ಜೀವನ)ದಲ್ಲಿದ್ದ. ಮಂಗಳವಾರ ರಾತ್ರಿ ಇಬ್ಬರೂ ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಮದನ್ ಜತೆಗೆ ವೀಣಾ ಮದುವೆ ವಿಷಯ ಪ್ರಸ್ತಾಪಿಸಿದ್ದಳು.

ಮದನ್ ಇವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಡೆಕೋರೇಟ್ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಸೀರಿಯಲ್ ಸೆಟ್‌ಲ್ಲಿ ಕಾಣಿಸಿಕೊಂಡಿದ್ದ ವೀಣಾಳನ್ನು ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ. ಸಲುಗೆ ಬೆಳೆಸಿಕೊಂಡು ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು. ವೀಣಾ ಕನ್ನಡತಿ ಸೀರಿಯಲ್ ಹಾಗೂ ಕೆಲವು ಜಾಹೀರಾತುಗಳಲ್ಲಿ ನಟಿಸುತ್ತಿದ್ದಳು.

ಯುವಕನ ಮೇಲೆ ಒತ್ತಡ ಹೆಚ್ಚಿಸಿದ್ದ ನಟಿ: ಬೆಂಗಳೂ ರಿನ ಸಿ.ಕೆ.ಪಾಳ್ಯ ರಸ್ತೆಯಲ್ಲಿರುವ ಸಾಯಿ ಸಮೃದ್ಧಿ ಲೇಔಟ್‌ನಲ್ಲಿರುವ ಮನೆಯಲ್ಲಿ ವೀಣಾ ಒಂಟಿಯಾಗಿ ವಾಸವಿದ್ದಳು. ಹೀಗಿದ್ದವಳಿಗೆ ಒಂದು ವರ್ಷದ ಹಿಂದೆ ಅದ್ದೇಗೊ ಈ ಮದನ್ ಪರಿಚಯವಾಗಿದೆ. ಅದೇ ಪರಿಚಯ ಸ್ನೇಹವಾಗಿ ಬೆಳೆದಿದ್ದು, ವೀಣಾ, ಮದನ್ ನನ್ನು ಪ್ರೀತಿಸುವಂತೆ ಕಿರುಕುಳ ಕೊಟ್ಟು ಆಗಾಗ ಮನೆಗೆ ಬರುವಂತೆ ಒತ್ತಾಯ ಮಾಡುತ್ತಿದ್ದಳು. ವೀಣಾ ಎಷ್ಟೇ ಒತ್ತಾಯಿಸಿದರೂ ಮದನ್ ಇಷ್ಟವಿಲ್ಲ ಎಂದು ಹೇಳಿದ್ದ. ಹಾಗಾಗಿ ಮಾನ ಹರಾಜು ಹಾಕುವೆ ಎಂದು ವೀಣಾ ಬೆದರಿಕೆ ಹಾಕುತ್ತಿದ್ದಳು. ಮನೆ ಬಳಿ ಬಂದು ರಂಪಾಟ ಮಾಡುತ್ತಿದ್ದಳು. ಜತೆಗೆ ಬ್ರೇಡ್‌ನಿಂದ ಕೈ ಕೊಯ್ದುಕೊಳ್ಳುತ್ತಿದ್ದಳು.

ಮಂಗಳವಾರ ಸಂಜೆ ನಾಲ್ಕು ಗಂಟೆಗೆ ವೀಣಾ, ಮದನ್‌ನನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಈ ಸಂದರ್ಭದಲ್ಲಿ ಕುಡಿದು ಮಾನಸಿಕವಾಗಿ ಕಿರುಕುಳ ನೀಡಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಅದೇ ಕಿರುಕುಳಕ್ಕೆ ಬೇಸತ್ತ ಮದನ್ ರೂಮ್‌ನಲ್ಲಿರುವ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಮಗನ ಸಾವಿಗೆ ವೀಣಾ ಕಾರಣ. ಅವನಿಗೆ ಇಷ್ಟವಿಲ್ಲದಿದ್ದರೂ ಮದುವೆ ಯಾಗುವಂತೆ ಒತ್ತಾಯಿಸುತ್ತಿದ್ದುದರಿಂದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ. ಹುಳಿಮಾವು ಠಾಣೆಯಲ್ಲಿ ನಟಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

ಅಲ್ಲದೆ, ಯುವತಿ ಹಲವು ಯುವಕರಿಗೆ ಮದುವೆ ಆಗುವುದಾಗಿ ವಂಚಿಸಿದ್ದಾಳೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.

ಅನುಮಾನ ಸೃಷ್ಟಿಸಿದ ಸಾವು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹುಳಿಮಾವು ಠಾಣೆ ಪೊಲೀಸರು ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದು, ಬಿಳೇಕಹಳ್ಳಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸದ್ಯ ಮದನ್ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ತನಿಖೆ ಬಳಿಕ ಮದನ್ ಸಾವಿನ ಅಸಲಿ ಕಾರಣ ಗೊತ್ತಾಗಲಿದೆ. ಮದನ್ ತಾಯಿ ದೂರಿನ ಮೇಲೆ ಎಫ್‌ಐಆರ್ ದಾಖಲಾಗಿದ್ದರೆ, ಜತೆಗೆ ವೀಣಾ ಮೇಲೆ ಜಾತಿನಿಂದನೆ ಪ್ರಕರಣ ಕೂಡ ದಾಖಲಾಗಿದೆ.

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!