Vijay tata ವಿರುದ್ಧ ತನಿಖೆಗೆ SIT ರಚಿಸಿ; ರಮೇಶ್ ಗೌಡ ಆಗ್ರಹ

ಬೆಂಗಳೂರು: ವಿಜಯ್ ತಾತಾನಿಂದ (Vijay tata) ಅನೇಕರಿಗೆ ಮೋಸವಾಗಿದ್ದು, ಮೋಸ ಹೋದವರಿಗೆ ನ್ಯಾಯ ಕೊಡಿಸಲು ವಿಶೇಷ ತನಿಖಾ ತಂಡ (SIT) ರಚನೆ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ (RameshGowda) ಆರೋಪ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿಗೌಡ ಸೇರಿ ಪಕ್ಷದ ವಿವಿಧ ಮುಖಂಡರ ಜತೆ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಅನೇಕರಿಗೆ ವಿಜಯ್ ತಾತಾ ಮೋಸ ಮಾಡಿದ್ದಾನೆ. ಆತನ ವಿರುದ್ಧ ನೂರಾರು ಪ್ರಕರಣಗಳು ದಾಖಲಾಗಿವೆ. ವಂಚನೆಯೇ ಆತನ ಪ್ರವೃತ್ತಿ ಆಗಿದ್ದು, ವಿಶೇಷ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ರಾಜ್ಯದ ಆಂತರಿಕ ಭದ್ರತಾ ವಿಭಾಗದಿಂದ ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ. ಪೊಲೀಸ್ ಆಯುಕ್ತರಿಗೆ ನಾನು ದೂರು ನೀಡುತ್ತೇನೆ. ಈ ಬಗ್ಗೆಯೂ ತನಿಖೆ ನಡೆಯಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಪೊಲೀಸರ ಮೇಲೆ ಅನುಮಾನ

ಪೊಲೀಸ್ ಠಾಣೆಯಲ್ಲಿ ಸ್ವತಃ ವಿಜಯ್ ತಾತಾನೇ ನನಗೆ ಹೇಳಿದ್ದಾರೆ. ಕುಮಾರಸ್ವಾಮಿ ಮತ್ತು ನಿಮ್ಮ ಮೇಲೆ ಕೇಸು ದಾಖಲಿಸಲು ನನ್ನ ಮೇಲೆ‌ ಸಿಎಂ‌‌ ಕಚೇರಿ ಹಾಗೂ ಕೆಲ ಸಚಿವರ ಒತ್ತಡ ಇದೆ ಎಂದು ಹೇಳಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಲಿ ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ; ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು..!

ಕುಮಾರಸ್ವಾಮಿ ಅವರು ಹಾಗೂ ನನ್ನ ಮೇಲೆ ವಿಜಯ್ ತಾತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದಾದ ಮೇಲೆ ನಾನು ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ಕೊಡಲು ಹೋದಾಗ ವಿಜಯ್ ತಾತಾ ಆ ಠಾಣೆಯಲ್ಲಿಯೇ ಇದ್ದರು. ನಾನು ಆಗ ಇನ್ಸ್ಪೆಕ್ಟರ್ ಮುಂದೆಯೇ ಕೇಳಿದೆ, ಯಾಕೆ ಸುಳ್ಳು ದೂರು ಕೊಡುತ್ತೀಯಾ? ಇದು ಸರೀನಾ? ಎಂದು ಕೇಳಿದೆ. ಅದಕ್ಕೆ ವಿಜಯ್ ತಾತಾ, “ನನ್ನ ಮೇಲೆ ಒತ್ತಡ ಇದೆ” ಎಂದು ಹೇಳಿದ ಎಂದು ರಮೇಶ್ ಗೌಡ ಹೇಳಿದರು.

ವಿಜಯ್ ತಾತಾ (Vijay tata) ಮೇಲೆ ಕರ್ನಾಟಕದಲ್ಲಿ ಮಾತ್ರವಲ್ಲ, ನಾಗಪುರ, ಪುಣೆ ಮುಂಬಯಿಯಲ್ಲೂ ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ನನ್ನ ಬಳಿ ಇವೆ. ನೂರಾರು ಎಫ್ಐಆರ್ ಗಳು ಆಗಿವೆ.

ಸಿಸಿ ಟಿವಿ ತೋರಿಸಲಿ

ನಾನು ಮನೆಗೆ ಹೋಗಿ ದೂರವಾಣಿ ಕರೆ ಮಾಡಿಕೊಟ್ಡಿದ್ದರೆ ಸಿಸಿ ಟಿವಿ ಇದೆಯಲ್ಲ ಅದನ್ನು ತೋರಿಸಲಿ ಎಂದು ಸವಾಲು ಹಾಕಿದ ರಮೇಶ್ ಗೌಡ (Ramesh Gowda), ದೂರವಾಣಿಯ ವಾಯ್ಸ್ ರೆಕಾರ್ಡ್ ತೆಗಿಸಲಿ. ವಿಜಯ್ ತಾತಾ ಹಲವು ಬಾರಿ ನನಗೆ ಕರೆ ಮಾಡಿದ್ದ, ಮೆಸೆಜ್ ಕಳಿಸಿದ್ದ ಎಂದು ಅವರು ಹೇಳಿದರು.

ವಿಜಯ್ ತಾತಾ (Vijay tata) ವಂಚನೆ ಮಾಡುತ್ತಲೇ ಬಂದ ವ್ಯಕ್ತಿ. 2006-07 ಹಾಗೂ 2008ರಲ್ಲಿ ಯೂರೋಪಿಯನ್ ಟೌನ್ ಶಿಪ್ ಮಾಡಿ ಲೇಔಟ್ ಮಾಡುತ್ತೇನೆ ಅಂತಾ ಹೇಳಿದ್ದರು. ಎರಡು ಹೆಲಿಕಾಪ್ಟರ್ ತರಿಸಿ ಪೂಜೆ ಮಾಡುತ್ತಾನೆ.

ಮೂವರಿಗೆ ಮಾರಾಟ

ಯಾವುದೇ ಲೇಔಟ್ ಗೆ ಜಮೀನು ಇಲ್ಲ ಎಂದು ಹೇಳುವ ಮೂಲಕ ಬಿಡಿಎ ಇವನ ಬಣ್ಣ ಬಯಲು ಮಾಡಿತ್ತು. ದೇವನಹಳ್ಳಿ ಬಳಿ ಅಪಾರ್ಟ್ಮ ಮೆಂಟ್ ಕಟ್ಟುತ್ತೇನೆ, ಮನೆ ತೆಗೆದುಕೊಂಡರೆ ಬೆನ್ಜ್ ಕಾರು ಕೊಡುತ್ತೇನೆ ಎಂದು ಜಾಹೀರಾತು ನೀಡಿದ್ದ. ಒಂದು ಜಮೀನನ್ನು ಮೂವರಿಗೆ ಮಾರಾಟ ಮಾಡಿದ್ದಾನೆ. ಸೋಫಾ ಶೋರೂಮ್ ತೆಗೆದು ಹಲವು ಜನರಿಗೆ ಮೋಸ ಮಾಡಿದ್ದಾನೆ ಎಂದು ಅವರು ಆರೋಪ ಮಾಡಿದರು.

ನಾನು ದೂರು ಕೊಟ್ಟರೆ ಎಫ್ಐಆರ್ ಆಗಲ್ಲ. ಆತ ದೂರು ಕೊಟ್ಟರೆ ಆಗುತ್ತದೆ. ಪೊಲೀಸ್ ಠಾಣೆ ಮುಂದೆ ಧರಣಿ ಕೂರುತ್ತೇನೆ. ನಾಳೆಯಿಂದ ಎಲ್ಲಾ ಸಚಿವರ ಮೇಲೆ ದೂರು ಕೊಟ್ಟರೆ ಎಫ್ಐಆರ್ ಸಚಿವರುಗಳ ಹಾಕುತ್ತಾರಾ? ಧರ್ಮಸ್ಥಳದ ಮಂಜುನಾಥ ಸ್ವಾಮಿ, ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡುತ್ತೇನೆ.

ನಾನು ವಿಜಯ್ ತಾತಾ (Vijay tata) ಬಳಿ ಯಾವುದೇ ಹಣ ಕೇಳಿಲ್ಲ. ನವರಾತ್ರಿ ನಡೆಯುತ್ತಿದೆ, ಪ್ರಮಾಣ ಮಾಡುತ್ತೇನೆ. ಯಾವುದೇ ಮನೆ ಹಾಳು ಕೆಲಸ ಮಾಡಿಲ್ಲ. ಇದೇ ವಿಜಯ್ ತಾತಾ ಹಲವು ಬಾರಿ ನನಗೆ ಕರೆ ಮಾಡಿದ್ದಾನೆ. ನನ್ನ ಪೋನ್, ಆತನ ಅವರ ಪೋನ್ ಸೀಜ್ ಮಾಡಲಿ ಎಂದು ಅವರು ಸವಾಲು ಹಾಕಿದರು.

ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ

ವಿಜಯ್ ತಾತಾ ವಿರುದ್ಧ ನಾನು ದೂರು ಕೊಟ್ಟಿದ್ದರೂ ಎಫ್ಐಆರ್ ಮಾಡದಿರುವ ಪೊಲೀಸರ ಕ್ರಮ ಖಂಡಿಸಿ ರಮೇಶ್ ಗೌಡ (Ramesh Gowda) ಮತ್ತಿತರೆ ಮುಖಂಡರು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ ನಡೆಸಿದರು.

ಪೊಲೀಸ್ ಇಲಾಖೆ ಸಹಜ ನ್ಯಾಯ ಪಾಲನೆ ಮಾಡುತ್ತಿಲ್ಲ. ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!