ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? HDK ತಿರುಗೇಟು

ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ತಿರುಗೇಟು ನೀಡಿದ್ದಾರೆ.

ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದರು ಅವರು.

ಜೆಪಿ ನಗರದ ತಮ್ಮ ನಿವಾಸದ ಬಳಿ
ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ (HDK) ಅವರನ್ನು ‌ಹೆದರಿಸೋಕೆ ಯಾರಿಂದಲೂ ಆಗಲ್ಲ. ನಾನು ಯಾರಿಗೂ ಹೆದರಲ್ಲ. ಹೆದರೋದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ‌ ಬೆಳೆಸಿರುವ ನಾಡಿನ‌ ಜನಕ್ಕೆ. ಇಂತಹ ಸಿದ್ದರಾಮಯ್ಯಗೆ ನಾನು ಹೆದರುತ್ತೀನಾ? ಎಂದು ಸಚಿವರು ತಿರುಗೇಟು ನೀಡಿದರು.

ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ‌, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವತಃ ದುಡಿಮೆ ಮೇಲೆ ಬಂದಿದ್ದೇನೆ. ಹಾಗೆ ನೋಡಿದರೆ ಸಿಎಂ ಸಿದ್ದರಾಮಯ್ಯನವರು ನನ್ನ ಪಕ್ಷದ ಕಾರ್ಯಕರ್ತರು ಮತ್ತು ದೇವೇಗೌಡರ ನೆರಳಿನಲ್ಲಿ ಬಂದವರು. ನನ್ನ‌ ಹೆದರಿಸುವುದಕ್ಕೆ ಆಗುತ್ತಾ? ಎಂದು ಕಿಡಿಕಾರಿದರು.

ಇದನ್ನೂ ಓದಿ: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು..!

ಅದು ಯಾವುದೋ ಕೇಸ್ ಹಾಕಿಕೊಂಡು ನನ್ನ ಹೆದರಿಸೋಕೆ ಆಗುತ್ತಾ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿಗೆ ಬಂಧನದ ಭೀತಿ ಹೇಳುತ್ತಿದ್ದಾರೆ. ನನಗೆ ಅಂತಹ ಯಾವುದೇ ಭೀತಿಯೋ ಇಲ್ಲ” ಎಂದರು ಅವರು.

ನನ್ನ ಹತ್ತಿರ ಇವರದ್ದು ಏನು ನಡೆಯಲ್ಲ: HDK

ಐದು ವರ್ಷಗಳ ಕಾಲ ಸಿಎಂ ಆಗಿ‌ ಸಿದ್ದರಾಮಯ್ಯ ಇರುತ್ತಾರೆ ಎಂಬ ಡಿ.ಕೆ.ಸುರೇಶ್ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಅಲ್ಲಿಗೆ ಯಾವ ತರ ರಾಜಕಾರಣ ಇದೆ ನೋಡಿ. ಯಾರು ಯಾರು ಯಾವ ಹೇಳಿಕೆ ಕೊಡ್ತಾರೆ. ಆ ಹೇಳಿಕೆ ಮೇಲೆ ನೀವು ತೀರ್ಮಾನಕ್ಕೆ ಬನ್ನಿ. ಇಲ್ಲಿ ಕುಮಾರಸ್ವಾಮಿ ಹತ್ತಿರ ಇವರದ್ದು, ಯಾರದ್ದು ಏನು ನಡೆಯಲ್ಲ” ಎಂದರು.

ಕಾಲವೇ ಉತ್ತರ ಕೊಡುತ್ತೆ

FIR ಮಾಡಿ ಬೆದರಿಸುವ ತಂತ್ರನಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆದರಿಕೆ ಅಲ್ಲದೆ ಇನ್ನೇನು? ಎನಿದೆ FIR ನಲ್ಲಿ?. ಅದರ ಬಗ್ಗೆ ನಾನು ಚರ್ಚೆ ಮಾಡೋದು ಅನವಶ್ಯಕ. ಕಾಲವೇ ನಿರ್ಧಾರ ಮಾಡುತ್ತದೆ. ಕಾಲ ಕಾಲಕ್ಕೆ ಪ್ರತಿಯೊಂದಕ್ಕೂ ಉತ್ತರ ನೀಡುತ್ತದೆ ಎಂದು ಕಿಡಿಕಾರಿದರು.

ಭಂಡ ಸರ್ಕಾರ ಇದು; HDK

ಮುಡಾ‌ ವಿಚಾರ ಡೈವರ್ಟ್ ಮಾಡಲು FIR ಹಾಕಲಾಗಿದೀಯಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆಸಿದ ಅವರು, ಪ್ರತಿಯೊಂದು ಡೈವರ್ಟ್ ಮಾಡಲಿಕ್ಕೆ ನಡೆಯುತ್ತಿರೋದು. ಈ ಸರ್ಕಾರ ಎಲ್ಲವನ್ನೂ ಬಿಟ್ಟಿರುವ ಸರ್ಕಾರ. ಯಾವ ಭಯ ಭಕ್ತಿಯೂ ಇಲ್ಲ, ಗೌರವವೂ ಇಲ್ಲ. ಭಂಡ ಸರ್ಕಾರ ಇದು. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವುದು ಅರ್ಥ ಇಲ್ಲ. ಅದರಿಂದ ನಾನು ಹೇಳ್ತಾ ಇರೋದು. ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಕಾಲವೇ‌ ಉತ್ತರ‌ ನೀಡುತ್ತದೆ” ಎಂದು ಸಚಿವರು ತಿಳಿಸಿದರು.

ರಾಜಕೀಯ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಜಿಎಸ್‍ಟಿ, ಕೇಂದ್ರಕ್ಕೆ ಹೋಗುತ್ತದೆ ಎಂಬುದು ಎಷ್ಟು ಸತ್ಯವೋ, ದೇಶದ ಯಾವುದೇ ರಾಜ್ಯದಲ್ಲಿ ಇಂಥ ಬೆಳವಣಿಗೆ ಆಗಿಲ್ಲ. B.Y. Vijayendra

[ccc_my_favorite_select_button post_id="111365"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!