HMT ಕಾರ್ಖಾನೆ ಪುನರುದ್ಧಾರಕ್ಕೆ ಪ್ರಯತ್ನಗಳು ನಡೆದಿವೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮೈಸೂರು ಅರಸರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯಿಂದ HMT ಕಾರ್ಖಾನೆ ಸ್ಥಾಪನೆಯಾಗಿದೆ. ಒಂದು ಕಾಲದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ಅನನ್ಯ ಕೊಡುಗೆ ನೀಡಿದ್ದ ಈ ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಕೆಲ ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಇಲ್ಲಿನ ಜಾಲಹಳ್ಳಿಯಲ್ಲಿರುವ HMT ಕಾರ್ಖಾನೆಯ ಟೂಲ್ಸ್ ಮತ್ತು ಮಶೀನ್ ವಿಭಾಗಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು.

ದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಈ ಕಾರ್ಖಾನೆಯ ಪುನರುದ್ಧಾರದ ಬಗ್ಗೆ ಅನೇಕ ಸಭೆಗಳು ಆಗಿವೆ. ಎಲ್ಲಾ ಸಾಧಕ ಭಾದಕಗಳ ಬಗ್ಗೆ ಸಮಾಲೋಚನೆ ನಡೆದಿದೆ. ಕಾರ್ಖಾನೆ ಉಳಿಸುವ ವಿಚಾರದಲ್ಲಿ ನಾನು ರಾಜಿ ಆಗಲ್ಲ, ಅದಕ್ಕೆ ಅಗತ್ಯ ಸಲಹೆ ಪಡೆಯಲು ಒಂದು ಸಲಹಾ ಸಂಸ್ಥೆಯನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ. ನೀತಿ ಆಯೋಗದ ಜತೆಯೂ ಸಮಾಲೋಚನೆ ನಡೆಸುತ್ತಿದ್ದೇನೆ. ಒಳ್ಳೆಯ ದಿನ ಬರಬಹುದು. ಆಶವಾದಿಗಳಾಗಿ ಇರಿ ಎಂದು ಕಾರ್ಮಿಕರಿಗೆ ಭರವಸೆ ಕೊಟ್ಟರು ಸಚಿವರು.

ಮೂರು ನಾಲ್ಕು ತಿಂಗಳು ಅವಕಾಶ ಕೊಡಿ. ಎಲ್ಲಾ ಹಂತಗಳಲ್ಲಿಯೂ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ನನ್ನ ಪ್ರಯತ್ನಗಳು ಯಶಸ್ವಿ ಆಗಬಹುದು, ಪ್ರಧಾನ ಮಂತ್ರಿಗಳು ಕೈಗಾರಿಕೆಗಳ ಅಭಿವೃದ್ಧಿ ಬಗ್ಗೆ ಸ್ಪಷ್ಟ ದೂರದೃಷ್ಟಿ ಹೊಂದಿದ್ದಾರೆ. ದಯಮಾಡಿ ಕಾಯಿರಿ ಎಂದು ಅವರು ಹೇಳಿದರು.

ಭಾವುಕರಾದ ಸಚಿವರು:

ಸಚಿವರಿಗೆ ಮನವಿ ಸಲ್ಲಿಸಿದ ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷ ಹರೀಶ್ ಅವರು; ಈ ಕಾರ್ಖಾನೆಯನ್ನು ನಾವು ತಾಯಿಯಂತೆ ಭಾವಿಸುತ್ತಿದ್ದೇವೆ. ನಮ್ಮ ತಾಯಿ ಈಗ ಕಾಯಿಲೆಪೀಡಿತ ಆಗಿದ್ದಾಳೆ. ದಯಮಾಡಿ ಉಳಿಸಿಕೊಡಿ ಎಂದು ಮನವಿ ಮಾಡಿದಾಗ ಸಚಿವರು ಭಾವೋದ್ವೇಗಕ್ಕೆ ಒಳಗಾದರು.

ನಾನು ರಾಜಕೀಯ ಬಂದಿದ್ದೇ ಆಕಸ್ಮಿಕ. ಎಂದೂ ಬರಬೇಕು ಎಂದು ಭಾವಿಸಿದವನಲ್ಲ, ನಾನು ಮೊದಲ ಬಾರಿಗೆ ಸಂಸದ ಆಗಿದ್ದು ಆಕಸ್ಮಿಕ, ಎರಡು ಬಾರಿ ಸಿಎಂ ಆಗಿದ್ದು ಆಕಸ್ಮಿಕ. ಕೇಂದ್ರ ಸಚಿವನಾಗಿರುವುದು ಕೂಡ ಆಕಸ್ಮಿಕ. ನರೇಂದ್ರ ಮೋದಿ ಅವರು ನನಗೆ ಈ ಅವಕಾಶ ನೀಡಿದ್ದಾರೆ. ಜನರ ಸೇವೆ ಮಾಡುವ ಅವಕಾಶ ಕೊಡುವುದಕ್ಕೆ ಇಷ್ಟೆಲ್ಲಾ ಆಕಸ್ಮಿಕಗಳು ನಡೆದಿವೆ. ನನ್ನ ಪ್ರಯತ್ನ ನಾನು ಮಾಡುತ್ತೇನೆ ಎಂದು ಸಚಿವರು ಹೇಳಿದರು.


ಜಾಲಹಳ್ಳಿಯ HMT ಟೂಲ್ಸ್ ಮತ್ತು ಮಶೀನ್ ಘಟಕಕ್ಕೆ ಆಗಮಿಸಿದ ಸಚಿವ ಕುಮಾರಸ್ವಾಮಿ ಅವರನ್ನು ರೊಬೋಟಿಕ್ ಯಂತ್ರಗಳೇ ಹೂಗುಚ್ಛ ನೀಡಿ ಸ್ವಾಗತಿಸಿದ್ದು ವಿಶೇಷ. ಅಲ್ಲದೆ, ಆ ಯಂತ್ರಗಳೇ ಸಚಿವರ ಮೇಲೆ ಪುಷ್ಪವೃಷ್ಟಿ ಮಾಡಿದವು.

ಕಾರ್ಖಾನೆಯ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಪ್ರಧಾನ ವ್ಯವಸ್ಥಾಪಕ ಜತಿನ್ ಪ್ರಸಾದ್, ಕಾರ್ಮಿಕರ ಸಂಘದ ಅಧ್ಯಕ್ಷ ಹರೀಶ್ ಅವರು ವೇದಿಕೆಯ ಮೇಲಿದ್ದರು.

ಕಾರ್ಖಾನೆಗೆ ಭೇಟಿ ನೀಡಿದ ಸಚಿವರು ಗಿಡ ನೆಟ್ಟು ನೀರೆದರು. ಈ ಸಂದರ್ಭದಲ್ಲಿ ಕಾರ್ಮಿಕರು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!