ಮೂಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; HDK

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ದೂರಿದ್ದಾರೆ.

ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ ಎಂದು ಆರೋಪಿಸಿದರು.

ಚುನಾವಣೆಗೆ ಮೊದಲೇ ವರದಿ ಕೊಟ್ಟಿದ್ದರು!!

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ (HDK) ಅವರು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಖಾರವಾಗಿ ತೀಕ್ಷ್ಣವಾಗಿ ಕೇಳಿದರು.

ಮೂಡಾ ಅಕ್ರಮದಿಂದ ರಕ್ಷಣೆ ಪಡೆಯಲು ಯತ್ನ

ಈಗ ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದರು.

ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜಾತಿ ಗಣತಿ ವರದಿ ಇಟ್ಟುಕೊಂಡು ಚುನಾವಣೆಗೆ ಹೋಗಿ

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಕುಮಾರಸ್ವಾಮಿ ಅವರು; ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಲಿ ಎಂದರು.

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ. ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬಹುದಲ್ಲವೆ? ಎಂದು HDK ಸವಾಲು ಹಾಕಿದರು.

ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಇಟ್ಟುಕೊಂಡು ನಾವು ಅನುಷ್ಠಾನ ಮಾಡುತ್ತೇವೆ, ನಮಗೆ ಇನ್ನೊಂದು ಅವಕಾಶ ಕೊಡಿ ಅಂತ ಜನರ ಮುಂದೆ ಹೋಗಬಹುದು.

ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಇದೆಲ್ಲವನ್ನು ಜನರ ಮನಸಿನಿಂದ ಡೈವರ್ಟ್ ಮಾಡೋದಕ್ಕೆ ಈ ಡ್ರಾಮಾಗಳು ಪ್ರಾರಂಭ ಮಾಡಿದ್ದಾರೆ ಎಂದು ಅವರು ದೂರಿದರು.

ರಾಜಕೀಯ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಜಿಎಸ್‍ಟಿ, ಕೇಂದ್ರಕ್ಕೆ ಹೋಗುತ್ತದೆ ಎಂಬುದು ಎಷ್ಟು ಸತ್ಯವೋ, ದೇಶದ ಯಾವುದೇ ರಾಜ್ಯದಲ್ಲಿ ಇಂಥ ಬೆಳವಣಿಗೆ ಆಗಿಲ್ಲ. B.Y. Vijayendra

[ccc_my_favorite_select_button post_id="111365"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!