ಜನರ ಅಹವಾಲು ಆಲಿಸಿದ ಶಾಸಕ ಪ್ರದೀಪ್ ಈಶ್ವರ್| Pradeep Eshwar

ಚಿಕ್ಕಬಳ್ಳಾಪುರ: ಮತದಾರರಿಗೆ ಆಸೆ, ಆಮಿಷ ಒಡ್ಡಿ ಚುನಾವಣೆಯಲ್ಲಿ ಗೆದ್ದ ಬಳಿಕ ಜನರ ಕಷ್ಟಗಳಿಗೆ ದನಿಯಾಗದೆ ಕೆಲ ಶಾಸಕರು ಕಾಣೆಯಾಗಿದ್ದಾರೆ ಎಂಬ ಆರೋಪದ ನಡುವೆ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸತತ ಟ್ರೋಲ್‌ಗೆ ಒಳಗಾದರೂ ಕೇರ್ ಮಾಡದೆ ‘ನಮ್ಮೂರಿಗೆ ನಮ್ಮ ಶಾಸಕರು’ ಕಾರ್ಯಕ್ರಮದ 2ನೇ ಕಂತಿನಲ್ಲಿ ತಾಲೂಕಿನ ನಂದಿ ಗ್ರಾಮ ಪಂಚಾಯತಿಯ ಐದು ಗ್ರಾಮಗಳಿಗೆ ಸೋಮವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಹವಾಲು ಆಲಿಸಿದರು.

ತಾಪಂ, ಆರೋಗ್ಯ, ಕಂದಾಯ, ಆಹಾರ, ಬೆಸ್ಕಾಂ, ಪೋಲಿಸ್ ಮತ್ತು ಗ್ರಾಪಂ ಅಧಿಕಾರಿ ಗಳೊಟ್ಟಿಗೆ ಸಿಂಗಾಟಿಕದಿರೇನಹಳ್ಳಿ, ಮಡುಕು ಹೊಸ ಹಳ್ಳಿ (ಗಾಂಧಿಪುರ), ಸುಲ್ತಾನ್ ಪೇಟೆ, ಬೈರನಾಯಕನ ಹಳ್ಳಿ ಮತ್ತು ನಂದಿ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಗ್ರಾಮಸ್ಥರು ರಸ್ತೆ, ಚರಂಡಿ, ಕಲ್ಯಾಣಿ ಸ್ವಚ್ಛತೆ, ಸ್ಮಶಾನಕ್ಕೆ ಜಾಗ, ಸ್ಮಶಾನಕ್ಕೆ ರಸ್ತೆ ಒತ್ತುವರಿ, ವಿದ್ಯುತ್, ಜಮೀನು ಖಾತೆ, ಪಿಂಚಣಿ ಸಮಸ್ಯೆ ಗಳನ್ನು ಖುದ್ದಾಗಿ ಶಾಸಕರ ಗಮನಕ್ಕೆ ತಂದರು.

ಈ ವೇಳೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಸುಧಾ ವೆಂಕಟೇಶ್, ಕೆ.ಎಲ್. ಶ್ರೀನಿವಾಸ್, ಡ್ಯಾನ್ಸ್ ಶ್ರೀನಿವಾಸ್, ಕಣಿತಹಳ್ಳಿ ವೆಂಕಟೇಶ್, ನಾಗಭೂಷಣ್, ಖೋಡೇಸ್ ವೆಂಕಟೇಶ್,ನಂದಿ ಮೂರ್ತಿ, ಮುರಳಿ, ರಮೇಶ್, ಮಸೂದ್‌ ಪೆದ್ದಣ್ಣ, ಭಾಗ್ಯಮ್ಮ, ಅಲ್ಲು ಅನಿಲ್, ವಿನಯ್ ಬಂಗಾರಿ, ಕೋಲಾಟ್ಟು ರಾಮಚಂದ್ರ, ವಿವಿಧ ಇಲಾಖಾ ಅಧಿಕಾರಿಗಳು, ಮತ್ತಿತರರು ಇದ್ದರು.

ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ

‘ನಾನು ನನ್ನ ಜನರನ್ನು ಭೇಟಿ ಮಾಡಿ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿದ್ದು ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಂದಿ ಗ್ರಾಮಕ್ಕೆ ಬರಲೇಬೇಕು ಎಂದು ನಿರ್ಧರಿಸಿ ಬಂದಿದ್ದೇನೆ.

ನಮ್ಮ ಊರಿಗೆ ನಮ್ಮ ಶಾಸಕರು ಕಾರ್ಯಕ್ರಮದ ಮೂಲಕ ಪ್ರತಿ ಹಳ್ಳಿಗೂ ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಗ್ರಾಮಸ್ಥರು ಕಷ್ಟ ಸುಖ ಕೇಳಿ ಅಲ್ಲೆ ಬಗೆಹರಿಸುವ ಕೆಲಸಕ್ಕೆ ಪ್ರಾಮಾಣಿಕವಾಗಿ ಕೈಹಾಕಿದ್ದೇನೆ. ಇದನ್ನೆಲ್ಲಾ ಕಾಳಜಿಯಿಂದ ಮಾಡುತ್ತಿದ್ದೇನೆ ವಿನಃ ಕಾಟಾಚಾರಕ್ಕೋ ಪ್ರಚಾರಕ್ಕೋ ಮಾಡುತ್ತಿಲ್ಲ.

ಈಗ ಯಾವುದೇ ಚುನಾವಣೆಗಳೂ ಇಲ್ಲ, ಯಾರನ್ನೋ ಓಲೈಸಲು ಮಾಡುತ್ತಿಲ್ಲ. ನನ್ನ ಆರಿಸಿದ ಜನರ ಋಣ ತೀರಿಸಲು ಮಾಡುತ್ತಿದ್ದೇನೆ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತಿಳಿಸಿದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!