ಜಿಟಿ ದೇವೇಗೌಡರ ಮನವೊಲಿಕೆಗೆ JDS ಶಾಸಕರ ಮನವಿ

ಬೆಂಗಳೂರು: ಮೂಡಾ ಹಗರಣದ ಕುರಿತು ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದ ಕಮಲ-ದಳ ಮೈತ್ರಿ ನಾಯಕರಿಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ (GT Devegowda) ನೀಡಿರುವ ಹೇಳಿಕೆಯಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ಜೆಡಿಎಸ್ (JDS) ವಲಯದಲ್ಲಿ ಇದೀಗ ಜಿಟಿ ದೇವೇಗೌಡರ ಕೋಪ ಶಮನಕ್ಕೆ ಆಗ್ರಹ ಕೇಳಿಬಂದಿದೆ.

ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರವಾಗಿ ಜಿ.ಟಿ.ದೇವೇಗೌಡ (GT Devegowda) ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯೆ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಬೇಕಾಬಿಟ್ಟಿ ಮಾತನಾಡಿದ್ದು, ಜೆಡಿಎಸ್‌ ನಾಯಕರ ತಲೆಬಿಸಿ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡರ ಸಮಾಧಾನ ಪಡಿಸಲು ಅವರನ್ನು ಕರೆಸಿ ಮಾತನಾಡುವಂತೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರಿಗೆ ದುಂಬಾಲು ಬಿದ್ದಿದ್ದಾರೆ.

ಜಿ.ಟಿ.ದೇವೇಗೌಡರ (GT Devegowda) ಹೇಳಿಕೆಯನ್ನೇ ಕಾಂಗ್ರೆಸ್ ನಾಯಕರು ಮುಂದಿನ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗುರಾಣಿಯನ್ನಾಗಿಸಿಕೊಳ್ಳುವ ಅಪಾಯವಿದೆ. ಕಾಂಗ್ರೆಸ್ಸಿಗರು ಸಹ ಜಿಟಿಡಿ ಹೇಳಿಕೆಯನ್ನು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಗೆ ತಡೆಯಾಗಿ, ಸಮಜಾಯಿಷಿಯಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ.

ಹಾಗಾಗಿ ಜಿಟಿ ದೇವೇಗೌಡ (GT Devegowda) ಅವರಿಂದ ಇನ್ನೊಂದಷ್ಟು ವ್ಯತಿರಿಕ್ತ ಹೇಳಿಕೆಗಳು ಹೊರಬರುವ ಮುನ್ನ ಅವರೊಡನೆ ಮಾತುಕತೆ ನಡೆಸಬೇಕೆಂದು ಜೆಡಿಎಸ್ ಶಾಸಕರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಜೆಡಿಎಸ್ ಶಾಸಕರ ಮನವಿಯ ಹಿನ್ನೆಲೆಯಲ್ಲಿ ದೇವೇಗೌಡರು ರಂಗಪ್ರವೇಶ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈಗಾಗಲೇ ಬೆಂಗಳೂರಿಗೆ ಬರುವಂತೆ ಜಿ.ಟಿ.ದೇವೇಗೌಡರಿಗೆ ದೊಡ್ಡಗೌಡರು ಸಂದೇಶ ರವಾನಿಸಿದ್ದು ಒಂದೆರಡು ದಿನಗಳಲ್ಲಿ ಜಿ.ಟಿ.ಡಿ ಜತೆ ಮಾತುಕತೆ ನಡೆಸುವರೆಂದು ಹೇಳಲಾಗಿದೆ.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!