JDS ಕಾರ್ಯಕರ್ತರಿಂದಲೇ ಸುಧಾಕರ್‌ ಗೆ ಗೆಲುವು.. BJPಯವರು ಧಿಕ್ಕಾರ ಕೂಗಿದ್ದಾರೆ..!; ಹರೀಶ್ ಗೌಡ ಕಿಡಿ

ದೊಡ್ಡಬಳ್ಳಾಪುರ; ಒಪ್ಪಂದದಂತೆ JDS ಪಕ್ಷಕ್ಕೆ ದೊರಕಬೇಕಿದ್ದ ನಗರಸಭೆ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಪಕ್ಷದೊಳಗೆ ಕುದಿಯುತ್ತಿದ್ದ ಅಸಮಾಧಾನ ಏಕಾಏಕಿ ಸ್ಪೋಟಗೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 90 ಸಾವಿರ ಮತ ಬಂದಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯದ್ದು 89 ಓಟ್ ಇತ್ತು. 39 ಸಾವಿರ ಜೆಡಿಎಸ್ ಗೆ ಬಂದ ಓಟ್ ಇತ್ತು.. ಎರಡು ಸೇರಿ ಲಕ್ಷಕ್ಕೂ ಹೆಚ್ಚು ಬರಬೇಕಿತ್ತು. ಏಕೆ ಬರಲಿಲ್ಲ? ಎಂದು ಪ್ರಶ್ನಿಸಿದ್ದಾರೆ

ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯವರು ಸುಧಾಕರ್ ಪರ ಕೆಲಸ ಮಾಡಿಲ್ಲ. ಈ ಮಾತಿಗೆ ಬಿಜೆಪಿ ಕಾರ್ಯಕರ್ತರು ಬೇಜಾರ್ ಮಾಡಿಕೊಂಡರು ಪರವಾಗಿಲ್ಲ. ಬಿಜೆಪಿ-ಜೆಡಿಎಸ್ ವರಿಷ್ಠರ ಸೂಚನೆಯಂತೆ ನಮ್ಮ ಪಕ್ಷದ ಗೌರವ ನಾವು (JDS) ಪಕ್ಷದವರು ಉಳಿಸಿದ್ದೇವೆ‌. ಆದರೆ ಬಿಜೆಪಿಯವರು ಧಿಕ್ಕಾರ ಕೂಗಿದರು.

ಡಾ.ಕೆ.ಸುಧಾಕರ್ ಅವರು ಸಂಸದರಾಗಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರೇ ಪ್ರಮುಖ ಕಾರಣ. ಅವರ ಶ್ರಮವನ್ನು ಸುಧಾಕರ್ ಅವರು ಪರಿಗಣನೆಗೆ ತಗೆದುಕೊಳ್ಳಬೇಕು ಎಂದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬಿಜೆಪಿ ಶಾಸಕ ಇಲ್ಲದಾಗಲೇ ಕಮಲ-ದಳ ಮೈತ್ರಿ ಮೂಲಕ ನಗರಸಭೆ ಅಧಿಕಾರ ನಡೆಸಿದ್ದೇವೆ. ಅಂದು ನೀಡಿದ ಮಾತಿನಂತೆ ಜೆಡಿಎಸ್ ಪಕ್ಷಕ್ಕೆ ಅಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ ಪಕ್ಷದಲ್ಲಿ ಇಬ್ಬರಿದ್ದಾರೆ.. ಲುಕ್ಕಿಂಗ್ ಲಂಡನ್, ಟಾಕಿಂಗ್ ಟೋಕಿಯೋದವರು ಅಂತವರಿಂದ ಅಧಿಕಾರ ಕೈತಪ್ಪಿದೆ. ಅವರಿಗೆ ವಿಶ್ರಾಂತಿ ನೀಡುವವರೆಗೆ ಅವರು ನಮ್ಮ ಪಕ್ಷವನ್ನು ಉದ್ಧಾರ ಆಗಲು ಬಿಡಲ್ಲ ಎಂದು ಕುಟುಕಿದರು.

ಅವರಿಗೆ ಜೆಡಿಎಸ್ ಪಕ್ಷವನ್ನು ಕಟ್ಟಬೇಕು, ಕಾರ್ಯಕರ್ತರಿಗೆ ಅಧಿಕಾರ ದೊರಕಿಸಬೇಕು ಎಂಬ ಉದ್ದೇಶ ಇಲ್ಲವಾಗಿದೆ. ಒಂದು ದಿನದ ಮಟ್ಟಿಗೆ ನಡೆಯಬೇಕಷ್ಟೆ ಆ ಮೇಲ್ ಕಣ್ಮರೆ ಆಗ್ಬಿಡ್ತಾರೆ. ಅವರು ಯಾರೆಂದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ‌ ಎಂದು.. ಬಿಜೆಪಿ ಮುಖಂಡರ ಜೊತೆ ರೆಸಾರ್ಟ್ ಸೇರಿದ್ದ ಸ್ವಪಕ್ಷೀಯ ಮುಖಂಡರ ವರ್ತನೆ ವಿರುದ್ಧ ಹರೀಶ್ ಗೌಡ ಬೇಸರ ವ್ಯಕ್ತಪಡಿಸಿದರು.

ಟಿ.ವೆಂಕಟರಮಣಯ್ಯ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನಂತರ ಕುಮಾರಸ್ವಾಮಿ ಅವರು ನೀಡಿದ ಅನುದಾನ ತಾಲೂಕಿಗೆ ಅನುಕೂಲವಾಗಿದೆ. ಆದರೆ ಕಳೆದ ಬಿಜೆಪಿ ಸರ್ಕಾರ ಕಾಂಗ್ರೆಸ್ ಶಾಸಕ ಎಂದು ಮಾಡಿದ ದ್ವೇಷ ರಾಜಕಾರಣದಿಂದ ದೊಡ್ಡಬಳ್ಳಾಪುರ ಅಭಿವೃದ್ಧಿಯಿಂದ ಹಿಂದುಳಿದಿದೆ. ಅಂತೆಯೇ ಈಗ ಬಿಜೆಪಿ ಶಾಸಕ ಎಂದು ಕಾಂಗ್ರೆಸ್ ಮಾಡ್ತಾ ಇದೆ ಅಷ್ಟೇ ಎಂದರು.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರಿಗೆ ತಾಲೂಕಿನ ಅಭಿವೃದ್ಧಿ ಕುರಿತು ಕಾಳಜಿ ಇಲ್ಲ, ಇಎಸ್‌ಐ ಆಸ್ಪತ್ರೆ ಉದ್ಘಾಟನೆ ವಿಳಂಬ ಕುರಿತು ಪ್ರತಿಕ್ರಿಯೆ ನೀಡಿದ ಹರೀಶ್ ಗೌಡ, ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಮಾಡಿದ್ದನ್ನೇ ಕಾಂಗ್ರೆಸ್ ಈಗ ಮಾಡ್ತಾ ಇದೆ ಎಂದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ.8 ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121780"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]