ಮೈಸೂರು: ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.
ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ.
ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ.
ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ತಿಳಿಸಿದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						