ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ

ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಭಾಗವಹಿಸಿದರು.

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ

ನಂತರ ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ದೂರು ಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್‌ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕಾಂಗ್ರೆಸ್‌ಗೆ ಮುಸ್ಲಿಮರ ಓಟು ಬೇಕೆಂದು ಹೀಗೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು, ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಹೀಗೆ ಮಾಡಿದ್ದಾರೆ. ರೈತರ ವಿರುದ್ಧದ ಪ್ರಕರಣ ವಾಪಸ್‌ ಪಡೆಯಲು ಸಿ.ಟಿ.ರವಿ ಮನವಿ ಮಾಡಿದ್ದರೂ ಅದಕ್ಕೆ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.

ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿದಾಗಲೂ ಇದೇ ರೀತಿ ಮಾಡಿದ್ದಾರೆ. ಇವರ‍್ಯಾರೂ ಸ್ವಾತಂತ್ರ್ಯ ಹೋರಾಟಗಾರರಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದಿಂದ ತಪ್ಪಿಸಿಕೊಳ್ಳಲು ಈ ತಂತ್ರ ಮಾಡಿರಬಹುದು. ಆದರೆ ಬಿಜೆಪಿಯಿಂದ ಈ ಎರಡೂ ಹಗರಣಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂಬ ಸುಳ್ಳು ಹಬ್ಬಿಸುತ್ತಿದ್ದಾರೆ.

ಮೆಟ್ರೊ, ಜಲಜೀವನ್‌ ಮಿಷನ್‌, ಉಪನಗರ ರೈಲು ಮೊದಲಾದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಅನುದಾನ ನೀಡಿದ್ದಾರೆ. ಅಷ್ಟು ಆರೋಪ ಮಾಡುವುದಾದರೆ ಶ್ವೇತಪತ್ರ ಬಿಡುಗಡೆಗೊಳಿಸಿ ಎಷ್ಟು ಅನುದಾನ ನೀಡಲಾಗಿದೆ ಎಂದು ತಿಳಿಸಲಿ ಎಂದು ಸವಾಲೆಸೆದರು.

224 ಶಾಸಕರಿಗೆ ಎಷ್ಟು ಅನುದಾನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಪಟ್ಟಿ ನೀಡಲಿ. ಪ್ರತಿ ಜಿಲ್ಲೆಗೆ ತೆರಿಗೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಿ. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಹೆಚ್ಚಿದ್ದು, ವಾಹನಗಳ ಸರಾಸರಿ ವೇಗ 17 ಕಿ.ಮೀ. ನಿಂದ 12 ಕಿ.ಮೀ. ಗೆ ಇಳಿದಿದೆ. ರಾಜ್ಯದ ಜನರಿಗೆ ಕಾಂಗ್ರೆಸ್‌ ಎಷ್ಟು ತಾರತಮ್ಯ ಮಾಡಿದೆ ಎಂದು ತಿಳಿಸಲಿ ಎಂದರು.

ಯಾರು ಯಾವಾಗ ಜೈಲಿಗೆ ಹೋಗುತ್ತಾರೆ, ಯಾವಾಗ ಮರಳಿ ಚುನಾವಣೆ ಬರಲಿದೆ ಎಂದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲ. ಅದಕ್ಕಾಗಿ ಮತ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ. ಈ ಸರ್ಕಾರ ಉಳಿಯುವುದಿಲ್ಲ ಎಂದು ಅವರಿಗೂ ಗೊತ್ತಿದೆ. ಅವರ ಶಾಸಕರೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಮಾನ ಮರ್ಯಾದೆ ಇದ್ದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್‌ ಮುಂದಾಗಿದೆ. ಒಂದು ಕಡೆ ಸಿದ್ದರಾಮಯ್ಯ ಸೈಟು ವಾಪಸ್‌ ಕೊಟ್ಟರೆ, ಮತ್ತೊಂದೆಡೆ ಮಲ್ಲಿಕಾರ್ಜುನ ಖರ್ಗೆ ಸೈಟು ವಾಪಸ್‌ ನೀಡಿದ್ದಾರೆ. ಇನ್ನೊಂದೆಡೆ ಸರ್ಕಾರ ಪ್ರಕರಣ ವಾಪಸ್‌ ಪಡೆದಿದೆ. ಹಿಂದೂಗಳನ್ನು ಟಾರ್ಗೆಟ್‌ ಮಾಡುವ ಜೊತೆಗೆ ಕ್ರಿಮಿನಲ್‌ಗಳ ಪ್ರಕರಣ ವಾಪಸ್‌ ಪಡೆದಿದ್ದಾರೆ.

ಕನ್ನಡ ಹೋರಾಟಗಾರ ನಾರಾಯಣಗೌಡರನ್ನು ಜೈಲಿಗೆ ಹಾಕಿದ್ದರು. ಆದರೆ ಭಯೋತ್ಪಾದಕರಿಗೆ ಮಾತ್ರ ಪರೋಕ್ಷವಾಗಿ ಬೆಂಬಲ ನೀಡಲಾಗುತ್ತಿದೆ. ಡಿಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾದವರು ಕಾಂಗ್ರೆಸ್‌ನ ಪದಾಧಿಕಾರಿಗಳಾಗಿದ್ದಾರೆ. ರಾಮೇಶ್ವರಂ ಕೆಫೆಯ ಬಾಂಬ್‌ ಸ್ಪೋಟ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಈ ಸರ್ಕಾರ ಟಿಪ್ಪು ಆಡಳಿತ ನೀಡುತ್ತಿದೆ. ಸಿದ್ದರಾಮಯ್ಯನವರು ಟಿಪ್ಪುವನ್ನೇ ಮನೆ ದೇವರಾಗಿ ಮಾಡಿಕೊಂಡಿದ್ದಾರೆ. ಎಂದಿಗೂ ಕುಂಕುಮ ಇಡದ ಸಿದ್ದರಾಮಯ್ಯ ಈಗ ದೇವಸ್ಥಾನಕ್ಕೆ ಹೋಗಿ ಬೊಟ್ಟು ಇಡುತ್ತಿದ್ದಾರೆ. ಕುರ್ಚಿಯಿಂದ ಕೆಳಕ್ಕಿಳಿಯುವುದು ಖಾತರಿಯಾಗಿರುವುದರಿಂದ ದೇವರ ಮೊರೆ ಹೋಗಿದ್ದಾರೆ ಎಂದರು.

ಹಿಂದೂಗಳು ಈಗ ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲವಾದರೆ ಮುಸಲ್ಮಾನರೇ ಕಾಂಗ್ರೆಸ್‌ಗೆ ಬಿಗ್‌ಬಾಸ್‌ ಆಗಿ, ಅವರು ಹೇಳಿದಂತೆಯೇ ಸರ್ಕಾರ ನಡೆದುಕೊಳ್ಳಲಿದೆ ಎಂದರು.

ರಾಜ್ಯಪಾಲರಿಗೆ ಮನವಿ

ಪ್ರಕರಣ ಹಿಂಪಡೆದ ಕುರಿತು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಪತ್ರ ಸಲ್ಲಿಸಲಾಗಿದೆ. ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಬಗ್ಗೆ ಸರ್ಕಾರದ ಬಳಿ ಸ್ಪಷ್ಟನೆ ಕೇಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದ ವಿರುದ್ಧ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!