ಬೆಂಗಳೂರು: ಪ್ರಾಧ್ಯಾಪಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಿಲಕ್ ನಗರದ ಖಾಸಗಿ ಪಿಯು ಕಾಲೇಜಿನಲ್ಲಿ ಸೋಮವಾರ ನಡೆದಿದೆ.
ಇಂಗ್ಲಿಷ್ ಪ್ರಾಧ್ಯಾಪಕಿ ಶಬಾನ (44 ವರ್ಷ) ಕ್ಲಾಸ್ ರೂಮ್ನಲ್ಲಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸೋಮವಾರ ಕಾಲೇಜಿಗೆ ಬಂದಿದ್ದ ಶಬಾನ ಬೆಳಗ್ಗೆ ಪ್ರಾಂಶುಪಾಲರ ಕೊಠಡಿಗೆ ತೆರಳಿ ಮಾತನಾಡಿ ಹೊರಬಂದಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಸಮೀಪದ ಖಾಸಗಿ ಆಸತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ತಿಲಕ್ ನಗರ ಠಾಣಾ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಯಿಂದ ದೊರೆತ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆಯ ಹೇಳಿಕೆ ಪಡೆದುಕೊಳ್ಳಲಾಗುತ್ತಿದೆ ಎಂದು ಆಗ್ನೆಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದರು.