ನಿರಂತರ ಮಳೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 16.10.2024 ಮತ್ತು 17.10.2024 ರಂದು ಹವಾಮಾನ ಇಲಾಖೆಯು ನೀಡಿರುವ ಆರೆಂಜ್‍ ಅಲರ್ಟ್‍ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಿನಾಂಕ 16.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.

ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದ್ದು, ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಲು ಅವರು ಸೂಚಿಸಿರುತ್ತಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!