ಬಯಲಾಯ್ತು ಬ್ರ್ಯಾಂಡ್ ಬೆಂಗಳೂರಿನ ಮುಖವಾಡ: ಆರ್.ಅಶೋಕ ಲೇವಡಿ

ಬೆಂಗಳೂರು; ಬಯಲಾಯ್ತು ಬ್ರ್ಯಾಂಡ್ ಬೆಂಗಳೂರಿನ ಮುಖವಾಡ, ಬೀದಿಗೆ ಬಂತು ಕಾಂಗ್ರೆಸ್ ಸರ್ಕಾರದ ಬಂಡವಾಳ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಸಲಿಯತ್ತು ಏನು ಎಂಬುದನ್ನ ಬಟಾ ಬಯಲು ಮಾಡಿದೆ.

40% ಕಮಿಷನ್ ಸರ್ಕಾರ ಅಂತ ಸುಳ್ಳು, ಅಪಪ್ರಚಾರದ ಮೂಲಕ ಕನ್ನಡಿಗರಿಗೆ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ತನ್ನ ಭ್ರಷ್ಟಾಚಾರದ ಹಸಿವು, ದಾಹ ನೀಗಿಸಿಕೊಳ್ಳಲು ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರವನ್ನ ಬಲಿ ಕೊಡುತ್ತಿದೆ.

ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರೇ, ರಾಜಧಾನಿಯ ರಸ್ತೆಗಳು ಕೆರೆಗಳಾಗಿವೆ, ಬಡಾವಣೆಗಳು ಜಲಾವೃತವಾಗಿವೆ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ಹೊಡೆದು, ಸಿಲಿಕಾನ್ ಸಿಟಿ ಜನರನ್ನು ಮಳೆ ನೀರಲ್ಲಿ ಮುಳುಗಿಸಿ, ಬೆಂಗಳೂರಿನ ಮರ್ಯಾದೆ ಹರಾಜು ಹಾಕಿದ್ದೀರಲ್ಲ, ಇದೇನಾ ತಾವುಗಳು ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುವ ಪರಿ? ಎಂದು ಪ್ರಶ್ನಿಸಿದ್ದಾರೆ.

ಒಂದೇ ಒಂದು ರಸ್ತೆಗುಂಡಿ ಮುಚ್ಚಲು ಕೈಲಾಗದಷ್ಟು ಅಸಮರ್ಥ ಆಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಬ್ರ್ಯಾಂಡ್‌ ಬೆಂಗಳೂರು ಹೋಗಿ “ಗುಂಡಿ ಬೆಂಗಳೂರು” ಆಗಿ ಪರಿವರ್ತನೆಗೊಂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಡದೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ರಸ್ತೆಗಳ ಗುಂಡಿ ಮಚ್ಚಲು ಹೆಣಗಾಡುತ್ತಿದೆ.

ಸ್ಕೈ ಡೆಕ್ ನಿರ್ಮಿಸುತ್ತೇನೆ, ಟನಲ್ ರಸ್ತೆ ನಿರ್ಮಿಸುತ್ತೇನೆ ಎಂದು ಅಂಗೈಯಲ್ಲೇ ಅರಮನೆ ತೋರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಲ್ಲೊಂದು ಇಲ್ಲೊಂದು ಗುಂಡಿ ಮುಚ್ಚಿ ಬಿಟ್ಟಿ ಪ್ರಚಾರಕ್ಕೆ ಪೋಸ್ ಕೊಡುವುದು ಬಿಟ್ಟರೆ ಕಳೆದ 15 ತಿಂಗಳಿಂದ ಸಾಧಿಸಿದ್ದು ದೊಡ್ಡ ಶೂನ್ಯ ಎಂದು ಆರೋಪಿಸಿದ್ದಾರೆ .

ರಾಜಧಾನಿಯ ಯಾವುದೇ ರಸ್ತೆಗಳಿಗೂ ಹೋದರೂ ನೂರಾರು ಗುಂಡಿಗಳು ಕಾಣುತ್ತಿವೆ. ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ದುಸ್ಥಿತಿಯನ್ನ ಕಾಂಗ್ರೆಸ್ ಸರ್ಕಾರ ತಂದಿಟ್ಟಿದೆ ಎಂದು ಕಿಡಿಕಾರಿದೆ.

ಜನಸಾಮಾನ್ಯರು, ವಾಹನ ಸವಾರರು ದಿನನಿತ್ಯ ಛೀ ಥೂ ಎಂದು ಸರ್ಕಾರಕ್ಕೆ ಉಗಿಯುತ್ತಿದ್ದರೂ ದಪ್ಪ ಚರ್ಮದ ಸರ್ಕಾರ ಮಾತ್ರ ತನ್ನ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿರುವುದು ರಾಜ್ಯದ ದುರಂತ.

ರಸ್ತೆ ಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಭ್ರಷ್ಟ ಕಾಂಗ್ರೆಸ್ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಅಧಿಕಾರದಲ್ಲಿದೆ?

ಗಾರ್ಡನ್‌ ಸಿಟಿ, ಗ್ರೀನ್‌, ಸಿಟಿ, ಐಟಿ ಸಿಟಿ, ಸ್ಟಾರ್ಟಪ್‌ ಸಿಟಿ, ಸಿಲಿಕಾನ್‌ ಸಿಟಿ ಎಂದು ಖ್ಯಾತಿ ಹೊಂದಿದ್ದ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು, ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿಯಿಂದ ರಸ್ತೆ ಗುಂಡಿಗಳ ನಗರ, ವಾಟರ್ ಫಾಲ್ಸ್ ನಗರ ಎಂದು ನಗೆಪಾಟಲಿಗೆ ಈಡಾಗಿದೆ.

ಬೆಂಗಳೂರಿಗೆ ಈ ಕುಖ್ಯಾತಿ ತಂದುಕೊಡಲು ಸನ್ಮಾನ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಳೆದೊಂದು ವರ್ಷದಿಂದ ಅವಿರತವಾಗಿ ಶ್ರಮಿಸಿದ್ದಾರೆ.

ಇಷ್ಟಕ್ಕೂ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ ? ಕಾಂಗ್ರೆಸ್ ಸರ್ಕಾರ ಕಳೆದ 15 ತಿಂಗಳ ಆಡಳಿತದಲ್ಲಿ ಬೆಂಗಳೂರಿಗೆ ಬಿಡಿಗಾಸು ಅನುದಾನ ಸಹ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನ ಜನತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವ ಮುನ್ನ, ರಸ್ತೆ ಗುಂಡಿಗಳಿಂದ ಇನ್ನಷ್ಟು ಅಪಘಾತಗಳು, ಸಾವು ನೋವುಗಳು ಸಂಭವಿಸುವ ಮುನ್ನ ಸಮರೋಪಾದಿಯಲ್ಲಿ ರಸ್ತೆಗಳ ದುರಸ್ತಿ ಮಾಡಬೇಕು. ಬೆಂಗಳೂರು ನಗರಕ್ಕೆ 25,000 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿ, ರಸ್ತೆಗಳು, ರಾಜಕಾಲುವೆಗಳನ್ನ ಸರಿಪಡಿಸುವ ಕೆಲಸ ಮಾಡಬೇಕು ಎಂದು ಆರ್.ಅಶೋಕ ಒತ್ತಾಯಿಸಿದ್ದಾರೆ‌.

ರಾಜಕೀಯ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್ ಗಾಂಧಿ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್

ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತೇನೆ, ಮೋದಿ ಮೇಲೆ ಟ್ರಂಪ್ ಒತ್ತಡವಿದ್ದು, ಇವರು ಒಪ್ಪಂದವನ್ನು ರದ್ದು ಮಾಡಲು ಸಾಧ್ಯವಿಲ್ಲ. ಎಫ್ಸ್ಟೀನ್ ಫೈಲ್ ದಮ್ಕಿ ಮಾಡುತ್ತಿದ್ದಾರೆ. ಅಲ್ಲದೆ ಅದಾನಿಯ ಕ್ರಿಮಿನಲ್ ಕೇಸ್ ಇವರ ತಲೆಯ ಮೇಲೆ ಕುಳಿತಿದೆ: ರಾಹುಲ್

[ccc_my_favorite_select_button post_id="119731"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!