
ಚಿತ್ರದುರ್ಗ: ಯುವಕನ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆಗೆ (Suicide) ಶರಣಾಗಿದ್ದಾಳೆ.
ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.
ಚಿತ್ರದುರ್ಗ ನಗರದ ಚಿತ್ರಾ ಡಾನ್‌ಬೋಸ್ಕೋ ಕಾಲೇಜಲ್ಲಿ ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ಚಿತ್ರದುರ್ಗದ ಮೆದೇಹಳ್ಳಿ ನಿವಾಸಿ ಆಗಿದ್ದ ಪ್ರೇಮಾ, ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಪಿಎಸ್‌ಐ ರಘು ಭೇಟಿನೀಡಿ ಪರಿಶೀಲಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರೇಮಾಳಿಗೆ ತರುಣ್ ಎಂಬ ಯುವಕ ಪ್ರೀತಿ ಮಾಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವಾಟ್ಸ್ ಆ್ಯಪ್‌ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತನ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಕುರಿತು ತರುಣ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ .