ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ

ಚೆನೈ: 44ನೇ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬ್ರೈನೋಬ್ರೈನ್ ದೊಡ್ಡಬಳ್ಳಾಪುರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಅತಿ ಹೆಚ್ಚು ಪದಕವನ್ನು ಪಡೆದು, ದೇಶಾದ್ಯಂತ ದೊಡ್ಡಬಳ್ಳಾಪುರ ತಾಲೂಕಿನ ಕೀರ್ತಿ ಪಸರಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಸಂಸ್ಥೆ ಮುಖ್ಯ ವ್ಯವಸ್ಥಾಪಕ ಆನಂದ್ ಸುಬ್ರಮಣ್ಯಂ ಅವರು ಉದ್ಘಾಟಿಸಿದರು.

ತಮಿನಾಡಿನ ಚೆನೈ ಟ್ರೇಡ್ ಸೆಂಟರ್ ನಲ್ಲಿ ಆಯೋಜಿಸಿದ್ದ ಬ್ರೈನೋಬ್ರೈನ್ ಫೆಸ್ಟ್ 2024, 44ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ, ಕರ್ನಾಟಕ, ದೆಹಲಿ, ಪಶ್ವಿಮ ಬಂಗಾಳ, ಮಹಾರಾಷ್ಟ್ರ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ 8200 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂರು ನಿಮಿಷಗಳಲ್ಲಿ 60 ವಿವಿಧ ರೀತಿ ಮನೋ ಗಣಿತ ಲೆಕ್ಕಗಳನ್ನು ಮಾಡುವ ಮೂಲಕ ದೊಡ್ಡಬಳ್ಳಾಪುರ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಪೋಷಕರು.

ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಅಬಾಕಸ್ ಕೇಂದ್ರದ ತರಬೇತುದಾರರಾದ ವಿ.ಎ.ಪುಷ್ಪ ನೇತೃತ್ವದಲ್ಲಿ 35 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅತಿ ಕಡಿಮೆ ಸಮಯದಲ್ಲಿ ಹೆಚ್ಚು ವಿವಿಧ ರೀತಿಯ ಲೆಕ್ಕಗಳನ್ನು ಮಾಡುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ, 09 ವಿದ್ಯಾರ್ಥಿಗಳು ಚಿನ್ನ, 11 ವಿದ್ಯಾರ್ಥಿಗಳು ಬೆಳ್ಳಿ ಪದಕದವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಚಾಂಪಿಯನ್ಸ್: ರಜತ್‌ ಪಿ, ಯಶಸ್.ಎಸ್., ರುಚಿತ.ಯು, ಪ್ರಜ್ವಲ್ ಆರ್.ಗೌಡ, ವೈಭವಿ ವಿ, ವಿಪುಲ್ ವಿ, ದಿಗಂತ್ ಎಂ, ಸಂಪ್ರೀತ್ ರಾಜ್ ಕೆ ಎಸ್, ಸಂಕೀರ್ತನ ಕೆ ಎನ್ ರೆಡ್ಡಿ, ಯೋಗ ಪ್ರಿಯ ಕೆಎಸ್., ರುತ್ವಿಕ ಎಂ, ದೃವನ್ ಎಂ ಗೌಡ, ಮನ್ವಿತ್, ಪುರ್ನಿತಾ ಪಿ, ದೃವನ್ ಎಂ.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಪೋಷಕರು.

ಚಿನ್ನದ ಪದಕ: ಚಿನ್ಮಯ್ ಜಿಎನ್, ಪ್ರಣಿತ ಎಂ, ಅಬ್ದುಲ್ ಅಹದ್ ಎ, ಪ್ರೀತ ಆರ್ ಗೌಡ, ಹರ್ಷಲ್ ಎಂ ಗೌಡ, ಸಂಹಿತ ರಾಕ್ ಕೆಎಸ್, ಹರ್ಷವರ್ಧನ್, ಅಭಿನವ್ ಎಸ್ ಹೀರೇಮಠ, ಮೋಹಿತ್ ಎಂ.

ಬೆಳ್ಳಿ ಪದಕ: ತರುಣ್ ಗೌಡ ಕೆಎಸ್, ನೇಹ ಮಹೀನ್ ಸನ, ಪೂರ್ವಿತ ಎಸ್, ಸೋನಮ್ ಕೆಎಂ, ಧೀರಜ್ ಕುಮಾರ್ ಜಿಎಂ, ಐಶ್ವರ್ಯ ಆರ್, ಸುಪ್ರೀಯ ಕುಮಾರಿ, ಅಮಿತ್ ಕೃಷ್ಣ ಗೌಡ ಎಸ್‌ಎನ್, ಪೂರ್ವಿಕ ಗೌಡ ವಿ, ಅಬ್ದುಲ್ ಕಹ್ಲಿಕ್, ಇಶಾಂತ್ ಆರ್.

ವಿಜೇತರಿಗೆ ಬ್ರೈನೋ ಬ್ರೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಳ್ ಸುಬ್ರಹ್ಮಣ್ಯಂ ಟ್ರೋಫಿ, ಪದಕಗಳನ್ನು ವಿತರಿಸಿದರು‌.

ಇದೇ ವೇಳೆ ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರಕ್ಕೆ ಸತತ ಮೂರನೇ ಬಾರಿಗೆ ಬೆಸ್ಟ್ ಫ್ಯಾಕಲ್ಟಿ ಅವಾರ್ಡ್, ಬೆಸ್ಟ್ ಫ್ರಾಂಚೈಸಿ ಅವಾರ್ಡ್ ಅನ್ನು ನೀಡಲಾಗಿದ್ದು, ಮುಖ್ಯಸ್ಥರಾದ ವಿ.ಎ.ಪುಷ್ಪ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬ್ರೈನೋ ಬ್ರೈನ್ ಸಂಸ್ಥೆಯ ತಾಂತ್ರಿಕ ವ್ಯವಸ್ಥಾಪಕ ಅರುಳ್ ಸುಬ್ರಮಣ್ಯಂ, ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಲ್ ಸೇರಿದಂತೆ ವಿವಿಧ ರಾಜ್ಯಗಳ ತರಬೇತಿ ಕೇಂದ್ರದ ಮುಖ್ಯಸ್ಥರು ಭಾಗವಹಿಸಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!