ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.

ತಗಡೇಗೌಡನದೊಡ್ಡಿ ಗ್ರಾಮದ ವಧು ಮತ್ತು ವರನಿಗೆ ಸಂಗಮದ ಮಡಿವಾಳದ ಶಿವನಕಾರೇಶ್ವರ ದೇವಾಲಯದಲ್ಲಿ ಭಾನುವಾರ ವಿವಾಹ ನಿಶ್ಚಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಎರಡು ಖಾಸಗಿ ಬಸ್‌ಗಳಲ್ಲಿ ಗ್ರಾಮಸ್ಥರು ಮದುವೆಗೆ ಹೊರಟಿದ್ದರು.

ದೊಡ್ಡಆಲಹಳ್ಳಿ ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್ ಸಂಗಮದ ಹೆಗ್ಗನೂರುದೊಡ್ಡಿ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 55 ಪ್ರಯಾಣಿಕರು ಇದ್ದರು. 10ಕ್ಕೂ ಹೆಚ್ಚು ಮಂದಿಗೆ ಕೈಕಾಲು, ಸೊಂಟ ಮತ್ತು ಬೆನ್ನಿನ ಮೂಳೆಗಳು ಮುರಿದಿವೆ ಎನ್ನಲಾಗಿದೆ.

ಬಸ್ಸು ಹಳ್ಳಕ್ಕೆ ಬೀಳದಂತೆ ತಡೆಗೋಡೆ ನೆರವಾಗಿದೆ. ಇದರಿಂದ ಆಗಬೇಕಿದ್ದ ಬಾರಿ ಅನಾಹುತ ತಪ್ಪಿದಂತಾಗಿದ್ದು ತಿರುವಿನಲ್ಲಿ ತಡೆಗೋಡೆ ಇಲ್ಲದಿದ್ದರೆ ಬಸ್ಸು ಪಲ್ಟಿ ಹೊಡೆದು ಹಳ್ಳಕ್ಕೆ ಬಿದ್ದಿದ್ದರೆ ದೊಡ್ಡ ಅನಾಹುತವೆ ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ಚೀರಾಟ ಕೇಳಿದ ಸಂಗಮ ವನ್ಯಜೀವಿ ವಲಯದ ಡಿಆರ್‌ಎಫ್‌ಒ ಮಂಜುನಾಥ್ ಮತ್ತು ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಿದರು.

ಕೋಡಿಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್‌ಹಾಗೂ ಸಾತನೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್‌ವಿ.ಹರೀಶ್ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

ಪ್ರಥಮ ಚಿಕಿತ್ಸೆ ನೀಡಿದ ಬಳಿಕ ತೀವ್ರವಾಗಿ ಗಾಯಗೊಂಡಿದ್ದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಯಾನಂದ ಸಾಗರ್‌ಆಸ್ಪತ್ರೆ, ಬೆಂಗಳೂರಿನ ಸಂಜಯ್ ಗಾಂಧಿ ಹಾಗೂ ನಿಮ್ಹಾನ್ಸ್ ಆಸ್ಪತ್ರೆಗಳಿಗೆ ರವಾನಿಸಲಾ ಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಖಾಸಗಿ ಬಸ್ಸಿನಲ್ಲಿ 50ಕ್ಕು ಹೆಚ್ಚು ಪ್ರಯಾಣಿಕರಿದ್ದು 15 ರಿಂದ 20 ಪ್ರಯಾಣಿಕರಿಗೆ ಗಾಯಗಳಾಗಿವೆ. ಗಂಭೀರ ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಉಳಿದವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿಯೇ ಸುತ್ತಮುತ್ತಲಿನ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಕರೆಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‌ ಪ್ರತಿಕ್ರಿಯೆ ನೀಡಿದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]