ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಸಾಧ್ಯವಿಲ್ಲ: ಹೆಚ್‌ಡಿಕೆ ಗರಂ.. ಸಭೆಯಲ್ಲಿ ಗದ್ದಲ

ಬೆಂಗಳೂರು: ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಿತ್ರಪಕ್ಷ ಬಿಜೆಪಿ ಮುಖಂಡರಿಗೆ ನೇರ ಮಾತುಗಳಲ್ಲಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದರು ಕೇಂದ್ರ ಸಚಿವರು.

ನನಗೆ ಭಯವೇ ಇಲ್ಲ: ಈ ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ, ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ..? ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು.

ನಿಮ್ಮಂತ ಕಾರ್ಯಕರ್ತರು ಜೊತೆಯಲ್ಲಿ ಇರಬೇಕಾದರೆ ನಾವು ಹೆದುರುತ್ತೇವೆಯೇ? ನೆಲದವರಿಗೆ ಬಗ್ಗಿದ್ದೇನೆ, ಜೆಡಿಎಸ್ ಮುಗಿಸಲು ಅನೇಕರು ನಮ್ಮಿಂದಲೇ ಬೆಳೆದವರು ಎಂತೆತ ಮಾತಾಡಿದ್ದಾರೆ

ಮೋದಿ, ಶಾ ಸಂಬಂಧ ಹಾಳು ಮಾಡಿಕೊಳ್ಳಲಾರೆ: ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲಾ. ವೈಯಕ್ತಿಕವಾಗಿ ನಾನು ಮಾಡದಿರುವ ತಪ್ಪಿಗೆ ತಲೆಕೊಟ್ಟಿದ್ದೇನೆ. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೋತ್ಪಾಟನೆ ಮಾಡಬೇಕು ಎನ್ನುವ ಪ್ರಧಾನಿ ಮೋದಿ ಸಂಕಲ್ಪಕ್ಕೆ ಹೆಗಲಾಗಿ ನಿಂತಿದ್ದೇನೆ ಎಂದು ಅವರು ಹೇಳಿದರು.

ನಾಲ್ಕು ತಿಂಗಳಾಯಿತು ನಾನು ಮಂತ್ರಿಯಾಗಿ. ಆರೋಗ್ಯ ಹಾಳು ಮಾಡಿಕೊಂಡು ಏತಕ್ಕಾಗಿ ಇಷ್ಟೆಲ್ಲಾ ಮಾಡಬೇಕು. ನನ್ನಿಂದ ಜನರಿಗೆ ಅಲ್ಪಸ್ವಲ್ಪವಾದರೂ ಸಹಾಯ ಆಗುತ್ತದೆಯೇ ಎಂದು ಒಡ್ಡಾಡುತ್ತಿದ್ದೇನೆ.

ಎನ್ ಡಿಎ ಮೈತ್ರಿ ಭದ್ರವಾಗಿದೆ. ಪ್ರಧಾನಿ ಮೋದಿ ಅವರು ದೇವೇಗೌಡರಿಗೆ ಕೊಡುವ ಗೌರವವನ್ನು ಯಾರಿಗೂ ಕೊಡಲ್ಲ. ಅವರಿಬ್ಬರ ನಡುವಿನ ಗೌರವಭಾವ ಎಂತದ್ದು ಎನ್ನುವುದನ್ನು ನಾನು ನೋಡಿದ್ದೇನೆ. ಆ ಸಂಬಂಧಕ್ಕೆ ಚ್ಯುತಿ ಬರಬಾರದು. ಅದಕ್ಕಾಗಿ ಬಗ್ಗಿದ್ದೇನೆ, ಇನ್ನೂ ಬಗ್ಗಿ ಎಂದರೆ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್ ನಿಂದಲೇ ಟಿಕೆಟ್ ಕೊಡಿ ಎಂದಿದ್ದರು ನಡ್ಡಾ: ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅವರಿಗೆ (ಯೋಗೇಶ್ವರ್) ರಾಜೀನಾಮೆ ಕೊಟ್ಟು ಜೆಡಿಎಸ್ ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್ ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಮಾಡಿಕೊಳ್ಳಬೇಕಾ? ಎಂದು ಅವರು ಕಿಡಿಕಾರಿದರು.

ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ,‌ ಇನ್ನು ಮೂರು ದಿನ‌ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.

ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ. ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು. ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ. ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ. ಧೈರ್ಯವಾಗಿ ಚುನಾವಣೆ ಎದುರಿಸೋಣ. ಇದೊಂದು ಅಗ್ನಿಪರೀಕ್ಷೆ ನಿಜ, ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ಕೇಂದ್ರ ಸಚಿವರು.

ಕಾರ್ಯಕರ್ತರ ಆಗ್ರಹಕ್ಕೆ ಮಣಿದು ಭಾಷಣ ಮೊಟಕುಗೊಳಿಸಿದ HDK: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು, ಯಾವುದೇ ಕಾರಣಕ್ಕೂ ಯೋಗೇಶ್ವರ್ ಅವರಿಗೆ ಕೊಡಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಗದ್ದಲ ಎಬ್ಬಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ಭಾಷಣ ಮಾಡುವಾಗಲೂ ಪದೇಪದೆ ಅಡ್ಡಿಪಡಿಸಿ, ನಿಖಿಲ್ ಅವರ ಹೆಸರನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.

ನಮ್ಮನ್ನು ಯೋಗೇಶ್ವರ್ ಹಿಂಸಿಸಿದ್ದಾರೆ. ನೀವು ಶಾಸಕರಾಗಿದ್ದಾಗಲೇ ನಮಗೆ ಕೊಡಬಾರದ ಕಾಟ ಕೊಟ್ಟರು. ಆ ವ್ಯಕ್ತಿಯೇ ಶಾಸಕರಾಗಿದ್ದಾಗ ಜೆಡಿಎಸ್ ಕಾರ್ಯಕರ್ತರು ಪ್ರತಿದಿನವೂ ಪೊಲೀಸ್ ಠಾಣೆಗೆ ಅಲೆಯಬೇಕಾಗಿತ್ತು. ಒಂದು ವೇಳೆ ನೀವು ನಿಖಿಲ್ ಅವರನ್ನು ಬಿಟ್ಟು ಯೋಗೇಶ್ವರ್ ಗೆ ಮಣೆ ಹಾಕಿದರೆ ನಮ್ಮ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಹಠ ಹಿಡಿದರು ಕಾರ್ಯಕರ್ತರು.

ಕಾರ್ಯಕರ್ತರ ಕೂಗಾಟ, ಆಕ್ರೋಶದ ಕಾರಣದಿಂದ ಕುಮಾರಸ್ವಾಮಿ ಅವರು ಭಾಷಣ ಮುಂದುವರಿಸಲು ಆಗಲಿಲ್ಲ. ಮೊದಲು ನಿಖಿಲ್ ಅವರ ಹೆಸರು ಘೋಷಣೆ ಮಾಡಿ, ಆಮೇಲೆ ಬೇಕಾದರೆ ನಿಮ್ಮ ಭಾಷಣ ಕೇಳುತ್ತೇವೆ ಎಂದರು. ಕೊನೆಗೆ, ನನ್ನ ಆರೋಗ್ಯ ಸರಿ ಇಲ್ಲ. ಮಾತನಾಡಲು ಅವಕಾಶ ಕೊಡಿ ಎಂದರೂ ಕಾರ್ಯಕರ್ತರು ಕೇಳಲಿಲ್ಲ. ಕೊನೆಗೂ ಗದ್ದಲದಲ್ಲಿಯೇ ಕೇಂದ್ರ ಸಚಿವರು ಭಾಷಣ ಮೊಟಕು ಮಾಡಿದರು.

ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ.ಸುರೇಶ್ ಬಾಬು, ಮಾಜಿ ಸಚಿವರಾದ ಸಾ ರಾ ಮಹೇಶ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಹಾಪಕಾಮ್ಸ್ ದೇವರಾಜು, ಹಿರಿಯ ಮುಖಂಡ ಪ್ರಸನ್ನ, ಜಯರಾಂ ಮುಂತಾದವರು ವೇದಿಕೆಯ ಮೇಲಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!