ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಹೊರ ಬರಲೇಬೇಕು; ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ

ದೊಡ್ಡಬಳ್ಳಾಪುರ: ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಗಳ ಬಗ್ಗೆ ದೃಢವಾದ ತಿಳುವಳಿಕೆ ಇದ್ದಾಗ ಮಾತ್ರ ನಮ್ಮನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಒಂದಲ್ಲ ಒಂದು ದಿನ ಹೊರ ಬರಲೇಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಹಿಸಿ ಅವರು ಆಶೀರ್ವಚನ ನೀಡಿದರು.

ಇಂದು ಸಮಾಜದಲ್ಲಿ ನಡೆಯುತ್ತಿರುವ ಹಲವು ಅಕ್ರಮಗಳು,ವೈರುಧ್ಯಗಳ ನಡುವೆಯೂ ಧರ್ಮ ತನ್ನದೇ ಆದ ಅಸ್ತಿತ್ವ ಹೊಂದಿದೆ ಎನ್ನುವುದಕ್ಕೆ ಆಸ್ತಿಕ ಸಮಾಜದ ಈ ಸಮಾಗಮ ನಿದರ್ಶನವಾಗಿದೆ. ಆದಿಗುರು ಶಂಕರಾಚಾರ್ಯರು ಪ್ರತಿಪಾದಿಸಿದ ಧರ್ಮ ಸಿದ್ದಾಂತಗಳು ಆಳವಾಗಿ ಬೇರೂರಿವೆ. ಭಗವಂತ ಒಬ್ಬನೇ ಆಗಿದ್ದು, ಆತ ಬೇರೆ ಬೇರೆ ರೂಪಗಳನ್ನು ಅವತರಿಸಿ, ಭಕ್ತನನ್ನು ಕಾಪಾಡುತ್ತಿದ್ದಾನೆ ಎನ್ನುವುದನ್ನು ಶಂಕರಾಚಾರ್ಯರು ನಿರೂಪಿಸಿದ್ದಾರೆ.

ಪ್ರಾಣಿಗಳಿಗಿಂತ ಭಿನ್ನವಾಗಿ ಬದುಕುವ ಮನುಷ್ಯ ಅವುಗಳಿಂದ ಹೊರತಾಗಿ ಬದುಕದಿದ್ದರೆ, ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇರುವುದಿಲ್ಲ. ಈ ದಿಸೆಯಲ್ಲಿ ಧರ್ಮಾಚರಣೆ ಪ್ರಮುಖ ಪಾತ್ರ ವಹಿಸುತ್ತದೆ.

ಮಾನವನ ಆಯುಷ್ಯ 100 ವರ್ಷಗಳು ಎಂದಿಟ್ಟುಕೊಂಡರೆ ಆತ ಮೋಕ್ಷ ಪಡೆಯಲು ಹಲವಾರು ಜನ್ಮಗಳನ್ನು ತಾಳಿ ಬರಬೇಕಿದೆ. ಪ್ರತಿ ಜನ್ಮದಲ್ಲಿಯೂ ಧರ್ಮಾಚರಣೆ ಹಾಗೂ ಪರೋಪಕಾರಗಳನ್ನು ಮಾಡಿದಾಗ ಮಾತ್ರ, ಜನ್ಮ ಸಾರ್ಥಕತೆ ಪಡೆಯುತ್ತದೆ. ಇಲ್ಲವಾದಲ್ಲಿ ಮಾನವ ಜನ್ಮಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಬದುಕಿನಲ್ಲಿ ಸಂಪಾದನೆಯೊಂದೇ ಮುಖ್ಯವಲ್ಲ. ಅದರೊಂದಿಗೆ ನಮ್ಮ ಬದುಕಿನ ಸ್ವರೂಪ ಮುಖ್ಯವಾಗುತ್ತದೆ. ದುಃಖ, ಕಷ್ಟಗಳು ಬರಬಾರದು ಎಂದರೆ ನಾವು ಕಷ್ಟಪಡಬೇಕು. ಅದಕ್ಕಾಗಿ ಪ್ರಯತ್ನ ಪಡಬೇಕು. ಸಾಧನೆ ಮಾಡಬೇಕು. ಹಲವು ಜನ್ಮಗಳ ಆಚರಣೆಯೇ ಕೊನೆಗೆ ಮೋಕ್ಷ ರೂಪ ಪಡೆಯುತ್ತದೆ.

ಭಗವಂತ ನಾನಾ ಅವತಾರಗಳನ್ನು ಎತ್ತಿರುವುದು ಸಹ ಅಧರ್ಮವನ್ನು ಅಳಿಸಿ, ಧರ್ಮವನ್ನು ಉಳಿಸಬೇಕು ಎನ್ನುವ ಉದ್ದೇಶಕ್ಕಾಗಿಯೇ. ಶಂಕರಾಚಾರ್ಯರು ಆತ್ಮ ಮತ್ತು ಪರಮಾತ್ಮ ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು. ಪರಮಾತ್ಮನೇ ಆತ್ಮನು ಎಂದು ಅದ್ವೈತ ಸಿಧ್ಧಾಂತದ ಮೂಲ ಸಾರವನ್ನು ಸಾರಿದರು. ನಮ್ಮ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಧರ್ಮಾಚರಣೆ ಮಾಡುವ ಮೂಲಕ ನಮ್ಮ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ನಮ್ಮ ಧರ್ಮ ಪರಂಪರೆಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ದರ್ಮದರ್ಶಿ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]