ಆಹಾರ ಗುಣಮಟ್ಟದಲ್ಲಿ ಪಾರದರ್ಶಕತೆ ತರಲು ಸ್ಪಾಟ್ ಟೆಸ್ಟ್ ಕಿಯಾಸ್ಕ್ ಸಹಕಾರಿ: ದಿನೇಶ್ ಗುಂಡೂರಾವ್

ಬೆಂಗಳೂರು: ಮಾರುಕಟ್ಟೆಯಲ್ಲಿ ಖರೀದಿಸುವ ವಿವಿಧ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಅಳವಡಿಸಿಕೊಳ್ಳಲು ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕಿಯಾಸ್ಕ್ ಗಳು ಸಹಕಾರಿಯಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯಪಟ್ಟರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿನುತನ ಪ್ರಯತ್ನವಾಗಿ ಬೆಂಗಳೂರು ನಗರದ ಫೀನಿಕ್ಸ್ ಮಾಲ್ ಆಫ್ ಏಷಿಯಾದಲ್ಲಿ ಆಹಾರ ಪದಾರ್ಥಗಳ ತ್ವರಿತ ಪರೀಕ್ಷೆಗಾಗಿ ಪ್ರಾಯೋಗಿಕವಾಗಿ ನಿರ್ಮಿಸಿರುವ ‘ಮ್ಯಾಜಿಕ್ ಬಾಕ್ಸ್’ ಆಹಾರ ಪರೀಕ್ಷಾ ಕೇಂದ್ರವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮನೆಯಲ್ಲಿ ಅಡುಗೆ ಮಾಡುವಾಗ ನಾವು ಎಚ್ಚರಿಕೆವಹಿಸಿ ನೈಸರ್ಗಿಕ ಹಾಗೂ ಒಳ್ಳೆಯ ಗುಣಮಟ್ಟದ ಕಲಬೆರಕೆ ಇಲ್ಲದ ಉತ್ತಮ ಆಹಾರ ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ ಹೊರಗೆ ತಿನ್ನುವ ಆಹಾರಗಳಲ್ಲಿ ನೋಡಲು ಆಕರ್ಷಕವಾಗಿರುವಂತೆ ರಾಸಾಯನಿಕ ಬಣ್ಣಗಳನ್ನು ಮತ್ತು ರುಚಿಯನ್ನು ಹೆಚ್ಚಿಸುವ ಟೇಸ್ಟ್ ಮೇಕರ್ ಗಳನ್ನು ಬಳಸಲಾಗುತ್ತದೆ. ಆರ್ಥಿಕವಾಗಿ ಲಾಭದಾಯಕ ಮಾಡಿಕೊಳ್ಳಲು ಕಲಬೆರಕೆ ವಸ್ತುಗಳನ್ನು ಇಲ್ಲಿ ಬಳಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಬದಲಾದ ಜೀವನಶೈಲಿ, ಆಹಾರ ಪದ್ಧತಿಗಳು ಮತ್ತು ಮಲಿನಗೊಂಡ ಪರಿಸರದಲ್ಲಿ ಬದುಕುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಹೃದಯಘಾತ ಮತ್ತು ಮಾರಕ ಕ್ಯಾನ್ಸರ್ ಗಳಿಗೆ ತುತ್ತಾಗುತ್ತಿದ್ದಾರೆ. ಹಾಗಾಗಿ ನಾವು ಸೇವಿಸುವ ಆಹಾರ ಒಳ್ಳೆಯ ಗುಣಮಟ್ಟ ಹಾಗೂ ನೈಸರ್ಗಿಕ ವಸ್ತುಗಳಿಂದ ಕೂಡಿರುವುದನ್ನು ನಾವು ಖಾತರಿ ಪಡಿಸಿಕೊಳ್ಳಬೇಕು.

ಈ ನಿಟ್ಟಿನಲ್ಲಿ ಸಾರ್ವಜನಿಕರೇ ಖುದ್ದು ಪರೀಕ್ಷಿಸಿಕೊಳ್ಳಬಹುದಾದಂತಹ ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕೇಂದ್ರಗಳು ಅತ್ಯಂತ ಸಹಕಾರಿಯಾಗಲಿವೆ ಎಂದ ಅವರು ಈ ವ್ಯವಸ್ಥೆಯು ಆಹಾರ ಉತ್ಪನ್ನ ಹಾಗೂ ಮಾರುಕಟ್ಟೆದಾರರಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಜನಸಾಮಾನ್ಯರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಇಲಾಖೆಯು ನಗರದ ವಿವಿಧ ಭಾಗಗಳಲ್ಲಿ ಸತತ ಆಹಾರ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತಾ ಬಂದಿದೆ. ತೀವ್ರ ವಿವಾದಕ್ಕೆ ತುಪ್ಪದ ಸ್ಯಾಂಪಲ್ ಗಳನ್ನು ಕೂಡ ಇಲಾಖೆ ಪರೀಕ್ಷಿಸಿದೆ. ಒಟ್ಟು 230 ಸ್ಯಾಂಪಲ್ ಗಳನ್ನು ಪರೀಕ್ಷಿಸಿದಾಗ ಅವುಗಳಲ್ಲಿ 224 ಸ್ಯಾಂಪಲ್ ಗಳು ಸೇವನೆಗೆ ಸುರಕ್ಷಿತವಾಗಿದೆ ಎಂದು ಕಂಡು ಬಂದಿದೆ. ಐದು ಸ್ಯಾಂಪಲ್ ಗಳು ಅಸುರಕ್ಷಿತ ಎಂದು ಕಂಡುಬಂದಿದ್ದು ಒಂದು ಸ್ಯಾಂಪಲ್ ಮಾತ್ರ ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 113 ಕೋಟಿ ರೂ. ಒಡೆಯ ನಿಖಿಲ್ ಕುಮಾರಸ್ವಾಮಿ: ಸಾಲ ಎಷ್ಟು ಗೊತ್ತಾ..?

ರಾಜ್ಯಾದ್ಯಂತ ರೈಲ್ವೆ ನಿಲ್ದಾಣದಲ್ಲಿರುವ ಆಹಾರ ಮಳಿಗೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಖಚಿತಪಡಿಸಿಕೊಳ್ಳಲು ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ 142 ಆಹಾರ ಮಳಿಗೆಗಳನ್ನು ತಪಾಸಣೆ ಮಾಡಲಾಗಿದ್ದು, ಕಂಡು ಬಂದಿರುವ ಲೋಪಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರಮುಖ ಪ್ರವಾಸಿ, ತಾಣಗಳಲ್ಲಿ ಸ್ಥಾಪಿಸಿರುವ 35 ಹೋಟೆಲ್ ಘಟಕಗಳಲ್ಲಿ ಗ್ರಾಹಕರುಗಳಿಗೆ ಸರಬರಾಜು ‘ಮಾಡಲಾಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕುರಿ/ಮೇಕೆ ಮಾಂಸದ 184 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 179 ಮಾದರಿಗಳು ಸುರಕ್ಷಿತ ಎಂದು, 05 ಮಾದರಿಗಳು ಕಳಪೆ ಎಂದು, ಮೊಟ್ಟೆಯ 81 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 80 ಮಾದರಿಗಳು ಸುರಕ್ಷಿತ ಎಂದು, 01 ಮಾದರಿಯು ಕಳಪೆ ಎಂದು ಹಾಗೂ ಕೋಳಿ ಮಾಂಸದ 246 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 236 ಮಾದರಿಗಳು ಸುರಕ್ಷಿತ ಎಂದು, 10 ಮಾದರಿಗಳು ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿರುತ್ತದೆ ಎಂದವರು ತಿಳಿಸಿದರು.

10 ಮಾಲ್ ಗಳಲ್ಲಿ ಕೇಂದ್ರಗಳ ಸ್ಥಾಪನೆ

ಇಲಾಖೆಯ ಆಯುಕ್ತರಾದ ಕೆ ಶ್ರೀನಿವಾಸ್ ಅವರು ಮಾತನಾಡಿ, ಬೆಂಗಳೂರು ನಗರಾದ್ಯಂತ ಒಟ್ಟು 10 ಮಾಲ್ ಗಳಲ್ಲಿ ಈ ಆಹಾರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ತುಮಕೂರು ರಸ್ತೆಯ ವೈಷ್ಣವಿ ಸಫಾಯರ್ ಮಾಲ್, ಥಣಿಸಂದ್ರದ ಎಲಿಮೆಂಟ್ಸ್ ಮಾಲ್, ಬನ್ನೇರುಘಟ್ಟ ರಸ್ತೆಯ ಮೀನಾಕ್ಷಿ ಮಾಲ್, ಚರ್ಚ್ ಸ್ಟ್ರೀಟ್ ಒನ್ ಶೋಭಾ ಮಾಲ್, ಬೆಳ್ಳಂದೂರಿನಲ್ಲಿರುವ ಸೆಂಟ್ರಲ್ ಮಾಲ್, ಬೆನ್ನಿಗಾನಹಳ್ಳಿಯಲ್ಲಿರುವ ಗೋಪಾಲನ್ ಸಿಗ್ನೇಚರ್ ಮಾಲ್, ಕೋರಮಂಗಲದಲ್ಲಿರುವ ನೆಕ್ಸಸ್ ಫೋರಮ್ ಮಾಲ್.

ಥಣಿಸಂದ್ರ ದಲ್ಲಿರುವ ಭಾರತೀಯ ಮಾಲ್ ಆಫ್ ಬೆಂಗಳೂರು ಹಾಗೂ ಮಾಗಡಿ ರಸ್ತೆಯಲ್ಲಿರುವ ಜಿ ಟಿ ವರ್ಲ್ಡ್ ಮಾಲ್ ಗಳಲ್ಲಿ ಈ ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರಲ್ಲಿ ಆಹಾರ ಗುಣಮಟ್ಟ ಆಹಾರ ಕಲಬೆರಿಕೆ ಬಗ್ಗೆ ಅರಿವು ಮೂಡಿಸುವುದೇ ಈ ಪ್ರಯತ್ನದ ಉದ್ದೇಶ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಾಲ್ ಆಫ್ ಏಷ್ಯಾದ ಜನರಲ್ ಮ್ಯಾನೇಜರ್ ರಾದ ಸತೀಶ್ ಸೇರಿದಂತೆ ಅಹಾರ ಸುರಕ್ಷತೆ ಮತ್ತು ಗುಣಮಟ್ಟಿಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]