ದೊಡ್ಡಬಳ್ಳಾಪುರಕ್ಕೆ ಸರ್ ಮಿರ್ಜಾ ಇಸ್ಮಾಯಿಲ್ ಕೊಡುಗೆ ಅಪಾರ: ವಿ.ಎಸ್.ಹೆಗಡೆ

ದೊಡ್ಡಬಳ್ಳಾಪುರ: ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯ ನಿವೃತ್ತ  ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ   ಶ್ರೀಲಕ್ಷ್ಮಿ ಲಲಿತ ನಾಟ್ಯ ಕಲಾ ಕೇಂದ್ರದಲ್ಲಿ   ನಡೆದ  ಸರ್ ಮಿರ್ಜಾ ಇಸ್ಮಾಯಿಲ್  ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದ ಕಾಲದಲ್ಲೇ ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ,ಮುನಿಪಲ್ ಹೈಸ್ಕೂಲ್, ಹೆರಿಗೆ ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಕಾರಗೊಳಿದರು ಎಂದರು.

ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್‌ ಅವರು ದೂರದೃಷ್ಟಿಯ ಆಡಳಿತಗಾರರು, ತಮ್ಮ ಅಧಿಕಾರದ ಅವಧಿಯಲ್ಲಿ ಮೈಸೂರು ರಾಜ್ಯದಲ್ಲಿ ಕೈಗಾರಿಕೆ, ನೀರಾವರಿ, ಶಿಕ್ಷಣ, ವಸತಿ ನಿಲಯಗಳು, ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ ರಸ್ತೆಗಳ ನಿರ್ಮಾಣ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದರು. ಮೈಸೂರು ಕೃಷ್ಣರಾಜಸಾಗರದಲ್ಲಿ ಉದ್ಯಾನವನವನ್ನು ನಿರ್ಮಿಸಿ ವಿಶ್ವಖ್ಯಾತಿಗೊಳಿಸಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ,
ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಅಭಿವೃದ್ಧಿಗೆ ಸರ್ ಮಿರ್ಜಾ ಇಸ್ಮಾಯಿಲ್‍ರವರ ಕೊಡುಗೆ ಅಪಾರವಾಗಿದೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ನವರಿಂದ ಸ್ಥಾಪಿಸಲ್ಪಟ್ಟಂತಹ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡದ ನಿವೇಶನವನ್ನು ನೀಡಿ ಬೃಹತ್ ಮಂದಿರವನ್ನು ನಿರ್ಮಾಣ ಮಾಡಲು ಸರ್ ಮಿರ್ಜಾ ಇಸ್ಮಾಯಿಲ್ ಸಂಪೂರ್ಣ ಸಹಕಾರ ನೀಡಿದರು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್, ದೇವಾಂಗ ಮಂಡಳಿ ನಿರ್ದೇಶಕ ಕೆ.ಎಸ್.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ್ತ ಆಯುಕ್ತ ವೆಂಕಟರಾಜು, ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ಅಧ್ಯಕ್ಷ ಗುರುಪ್ರಸಾದ್, ಕಾರ್ಯದರ್ಶಿ ಕವಿತಾ, ನೃತ್ಯ ತರಬೇತಿಗಾರ್ತಿ ತೇಜಸ್ವಿನಿ, ಪತ್ರಕರ್ತ ಕೃಷ್ಣಪ್ರಸಾದ್, ಲಕ್ಷ್ಮೀನಾರಾಯಣ ಮತ್ತು ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]