ಹಾಸನಾಂಬ ದೇವಿ ದರ್ಶನ ಪಡೆದ ವಿ.ಸೋಮಣ್ಣ

ಹಾಸನ: ಕೇಂದ್ರ ರಾಜ್ಯ ರೈಲ್ವೆ ಹಾಗೂ ಜಲ ಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಇಂದು ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.

ನಂತರ ಮಾತನಾಡಿದ ಸಚಿವರು ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು.

ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ಮಂಗಳೂರಿಗೆ ಹೆಚ್ಚುವರಿ ರೈಲು ಜೊತೆಗೆ ಚಿಕ್ಕಮಗಳೂರು- ಬೇಲೂರು-ಆಲೂರಿಗೆ 585 ಎಕರೆ ಜಾಗವನ್ನು ಭೂಸ್ವಾಧಿನಕ್ಕೆ ಜಿಲ್ಲಾಧಿಕಾರಿ 11 ನೋಟಿಫಿಕೇಷನ್ೈ ಮಾಡಿದ್ದಾರೆ. ಶೀಘ್ರದಲ್ಲೇ ನಮಗೆ ಹಸ್ತಾಂತರ ಮಾಡಲಿದ್ದು, ಮೂರು ವರ್ಷದಲ್ಲಿ ಈ ಯೋಜನೆ ಮುಗಿಯಲಿದೆ ಎಂದು ತಿಳಿಸಿದರು.

ನಾನು ಸಚಿವನಾದ ಮೇಲೆ ಕರ್ನಾಟಕ ರಾಜ್ಯದಲ್ಲಿ 11 ಯೋಜನೆಗಳು, 1800 ಹೊಸ ಲೈನ್‌ಗಳನ್ನು ಹಾಕಲು ಚಾಲನೆ ಕೊಟ್ಟಿದ್ದೇವೆ. ಈಗಾಗಲೇ ತುಮಕೂರು, ರಾಯದುರ್ಗ, ದಾವಣಗೆರೆ, ಗದಗ ಹತ್ತು ಹಲವಾರು ಕಡೆ ಕೆಲಸ ನಡೆಯುತ್ತಿದೆ. ಅಲ್ಲದೆ ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ 43 ಸಾವಿರ ಕೋಟಿ ರೂಪಾಯಿಗಳ‌ ನಾನಾ ರೈಲ್ವೆ ಯೋಜನೆಗಳನ್ನು ಕೈಗೆತ್ತೆಕೊಳ್ಳಲಾಗಿದೆ ಎಂದು ತಿಳಿಸಿದರು.

44 ಸಾವಿರ ಡಬಲ್ ಲೈನ್‌ ರೈಲು ಮಾರ್ಗ , ಶೇ.98 ರಷ್ಟು ಎಲೆಕ್ಟ್ರಿಫಿಕೇಷನ್ ನೊಂದಿಗೆ ಹೊಸಲೈನ್‌ಗಳನ್ನ ತ್ವರಿತಗತಿಯಲ್ಲಿ ಮಾಡಲು ಕ್ರಮ ತೆಗೆದುಕೊಂಡಿದ್ದೇವೆ.

104 ವಂದೇಭಾರತ್ ರೈಲುಗಳು ಇಡೀ ದೇಶದ 24 ರಾಜ್ಯಗಳಲ್ಲಿ 294 ಜಿಲ್ಲಾ ಕೇಂದ್ರಗಳಲ್ಲಿ ಸುತ್ತಾಡುತ್ತಿವೆ.

ಕರ್ನಾಟಕ ರಾಜ್ಯದಲ್ಲೆ 10 ರೈಲುಗಳು ಓಡಾಡುತ್ತಿವೆ.

ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಕೆ ಪ್ರಾರಂಭವಾಗಿದ್ದು, ಒಂದೊಂದು ಪ್ಯಾಸೆಂಜರ್ ರೈಲುಗಳಿಗೆ ಮೂರು, ನಾಲ್ಕು ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದರು.

ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ಟ್ರೈನ್ ಮಾಡಿದ್ದೇವೆ. ಅದೇ ರೈಲು ಹಾಸನದಿಂದ ಬೆಂಗಳೂರಿಗೆ ಸಂಚರಿಸಲು ಕೇಂದ್ರದ ಶೇ. 60 ದರಲ್ಲಿ ಓಡಾಡಲು ವ್ಯವಸ್ಥೆ ಮಾಡಲು ಚಿಂತನೆ ಮಾಡುತ್ತಿದ್ದೇವೆ .

ಭಾರತದಲ್ಲಿ ರೈಲ್ವೆ ಇಲಾಖೆ ಇಡೀ ವಿಶ್ವದ ಭೂಪಟದಲ್ಲಿ ಐದನೇ ಸ್ಥಾನದಲ್ಲಿತ್ತು. ಅದನ್ನು ಮೂರನೇ ಸ್ಥಾನಕ್ಕೆ ತರಲು ತೀರ್ಮಾನ ಆಗಿದೆ. ನ.1-2 ರಂದು ಪ್ರಧಾನಮಂತ್ರಿಗಳು ಇಲಾಖೆ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.

ಪತ್ರಕರ್ತರಿಗೆ, ಹಿರಿಯ ನಾಗರೀಕರಿಗೆ ನೀಡುತ್ತಿದ್ದ ರೈಲ್ವೆ ಪಾಸ್ ನಿಂತಿದೆ. ಶ್ರೀಮಂತರು ಇದರ ಲಾಭ ಪಡೆಯತ್ತಿದ್ದರು ಆದ್ದರಿಂದ ಅರ್ಹರಿಗೆ ಮಾತ್ರ ಪಾಸ್ ನ ಸೌಲಭ್ಯ ದೊರೆಯಬೇಕು ಎಂಬುದು ನಮ್ಮ ಆಶಯವಾಗಿದೆ ಆದ್ದರಿಂದ ಮತ್ತೆ ರೈಲ್ವೆ ಪಾಸ್ ನ ಅವಕಾಶ ಕೊಡಲು ನನ್ನದೂ ಒತ್ತಾಯವಿದೆ. ಪ್ರಧಾನಮಂತ್ರಿ ಅವರು ಆ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರಾದ ಹೆಚ್.ಕೆ.ಸುರೇಶ್, ಮಂಜುನಾಥ್ ಎಸ್ (ಸಿಮೆಂಟ್ ಮಂಜು) ಮತ್ತಿತರರು ಹಾಜರಿದ್ದರು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]