ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಈ ಬಾರಿ ಅವಕಾಶ – ವಿ.ಸೋಮಣ್ಣ

ಮೈಸೂರು; ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು.

ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ.

ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುಧಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು

ದೇಶಕ್ಕೆ ತನ್ನದೇ ಅದ ಪರಂಪರೆ ಇದೆ ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ಕಳೆದ 10 ವರ್ಷಗಳಲ್ಲಿ ಮಾನ್ಯ ಪ್ರಧಾನ ಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047 ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ.

ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!