Doddaballapura: ಶ್ರೀ ಸೂರ್‍ಯ ಪಿಯು ವಿಶ್ವ ಪಾರ್ಶ್ವವಾಯು ದಿನಾಚರಣೆ

ದೊಡ್ಡಬಳ್ಳಾಪುರ: ಹೃದಯ ಸಂಬಂಧಿಸಿದ ರೋಗಗಳ ನಂತರ ಅತಿ ಹೆಚ್ಚು ನರಳುತ್ತಿರುವ ಹಾಗೂ ಸಾವಿಗೀಡಾಗುತ್ತಿರುವ ರೋಗಗಳಲ್ಲಿ ಪಾರ್ಶ್ವವಾಯು ಇರುವುದು ಆತಂಕಕಾರಿ. ಪಾರ್ಶ್ವವಾಯು ಲಕ್ಷಣಗಳು ಗೋಚರಿಸಿದ ಕ್ಷಣ ಸಕಾಲದಲ್ಲಿ ಚಿಕಿತ್ಸೆ ನೀಡಿದರೆ ರೋಗವನ್ನು ಗುಣಪಡಿಸಬಹುದಾಗಿದೆ ಎಂದು ಜಿ ಮಾನಸಿಕ ಆರೋಗ್ಯಕಾರ್ಯಕ್ರಮಾಧಿಕಾರಿ ಡಾ.ಡಿ.ಪಿ.ಗಿರೀಶ್ ಕುಮಾರ್ ತಿಳಿಸಿದರು.

ನಗರದ ಶ್ರೀರಾಮ ನರ್ಸಿಂಗ್ ಕಾಲೇಜು ಮತ್ತು ಶ್ರೀ ಸೂರ್‍ಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿಯಲ್ಲಿ ಆಯೋಜಿಸಿದ ವಿಶ್ವ ಪಾರ್ಶ್ವವಾಯು ದಿನಾಚರಣೆ ಕಾರ್‍ಯಕ್ರಮದಲ್ಲಿ ಅವರು ಮಾತನಾಡಿದರು.

ಪಾರ್ಶ್ವವಾಯುನಲ್ಲಿ ಹಲವಾರು ವಿಧಾನಗಳಿವೆ. ಮುಖ್ಯವಾಗಿ ಕೈ ಕಾಲು ಬಲಹೀನವಾಗುವುದು, ಮಾತು ತೊದಲುವುದು, ಆಹಾರ ಸೇವನೆಗೆ ತೊಡಕು, ದೃಷ್ಟಿ ದೋಷ, ಬಾಯಿ ಸೊಟ್ಟಗಾಗುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ.

ರಕ್ತದೊತ್ತಡ, ಮಧುಮೇಹ, ಅಕ ಕೊಬ್ಬಿನಂಶ, ಸ್ಥೂಲಕಾಯ, ಇವುಳು ನಿಯಂತ್ರಣದಲ್ಲಿಲ್ಲದೇ ಇರುವುದು, ಮುಖ್ಯವಾಗಿ ಅಧಿಕ ರಕ್ತದೊತ್ತಡ, ಪಾರ್ಶ್ವವಾಯುಗೆ ಪ್ರಮುಖ ಕಾರಣ. ಇದಲ್ಲದೇ ಧೂಮಪಾನ, ಮದ್ಯಪಾನದಂತಹ ಚಟಗಳು ಸಹ ಕಾರಣವಾಗಿವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆದು ಇವುಗಳನ್ನು ನಿಯಂತ್ರಿಸದಿದ್ದರೆ ಅದು ಪಾರ್ಶ್ವವಾಯುಗೆ ತಿರುಗುವ ಲಕ್ಷಣಗಳಿವೆ.

ಅನಿಯಮಿತ ಹಾಗೂ ದೇಹಕ್ಕೆ ಪೂರಕವಲ್ಲದ ಆಹಾರ ಸೇವನೆ, ಅತಿಯಾದ ಉಪ್ಪು ಸೇವನೆಗಳಿಂದ ದೂರ ಇರಬೇಕು. ಪುಡಿ ಉಪ್ಪಿಗಿಂತ ಕಲ್ಲು ಉಪ್ಪು ಬಳಕೆ ಉತ್ತಮ. ಪಾರ್ಶ್ವವಾಯು ನರಮಂಡಲದ ಮೇಲೆ ಪ್ರಬಾವ ಬೀರುವ ರೋಗವಾಗಿದ್ದು, ಇದು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.

ಅತಿಯಾದ ಒತ್ತಡದ ಜೀವನ ಹಾಗೂ ಮಾನಸಿಕ ಸ್ಥಿಮಿತ ಕಳೆದುಕೊಳ್ಳುವಿಕೆ ಸಹ ಪಾರ್ಶ್ವವಾಯು ಲಕ್ಷಣಗಳಲ್ಲಿ ಒಂದಾಗಿದ್ದು, ಇದಕ್ಕೆ ತಜ್ಞರೊಂದಿಗೆ ಸೂಕ್ತ ಸಮಾಲೋಚನೆ ನಡೆಸಬೇಕಾಗುತ್ತದೆ ಎಂದರು.

ಕಾರ್‍ಯಕ್ರಮ ಉದ್ಘಾಟಿಸಿದ ಜಿ ಮಾನಸಿಕ ಆರೋಗ್ಯಕಾರ್ಯಕ್ರಮಾಧಿಕಾರಿ ಡಾ.ಬಿ.ಎನ್.ಶಾಂತಲಾ ಮಾತನಾಡಿ, ವಿಶ್ವ ಪಾರ್ಶ್ವವಾಯು ಸಂಸ್ಥೆ ಪ್ರತಿ ವರ್ಷ ಅ.29ರಂದು ಪಾರ್ಶ್ವವಾಯು ದಿನಾಚರಣೆ ಆಚರಿಸುತ್ತಿದ್ದು, ಪಾರ್ಶ್ವವಾಯು ರೋಗದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದ್ದು, ಆರೋಗ್ಯ ಇಲಾಖೆಯಿಂದ ಪಾರ್ಶ್ವವಾಯು ಹಾಗೂ ಮಾನಸಿಕ ಆರೋಗ್ಯ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಯೋಗ ಗುರು ರಾಮಕೃಷ್ಣ ಮಾತನಾಡಿ, ಯೋಗದಿಂದ ಹಲವಾರು ಕಾಯಿಲೆಗಳನ್ನು ಗುಣಪಡಿಸಬಹುದಾಗಿದ್ದು,ಪಾರ್ಶ್ವವಾಯು ಪೀಡಿತರು ಯೋಗ ಥೆರಫಿಯಿಂದ ಗುಣವಾಗಿರುವ ನಿದರ್ಶನಗಳಿವೆ ಎಂದು ಯೋಗದ ಮಹತ್ವ ಕುರಿತು ಮಾಹಿತಿ ನೀಡಿದರು.

ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣ, ನಿಯಮಿತ ವ್ಯಾಯಮ, ಆರೋಗ್ಯಕರ ಆಹಾರ ಪದ್ದತಿಗಳಿಂದ ಪಾರ್ಶ್ವವಾಯು ಬರದಂತೆ ತಡೆಗಟ್ಟಬಹುದು. ಪಾರ್ಶ್ವವಾಯು ಪೀಡಿತರಿಗೆ ಕಾಳಜಿ ಹಾಗೂ ಸಕಾರಾತ್ಮಕ ಸ್ಪಂಧನೆ ದೊರೆತರೆ ಬಹುಬೇಗ ಗುಣಮುರಾಗುತ್ತಾರೆ ಎಂದರು.

ಕಾರ್‍ಯಕ್ರಮದಲ್ಲಿ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಬ್ರೈನ್ ಹೆಲ್ತ ಸಂಯೋಜಕರಾದ ಅನುಷಾ, ಮೋನಿಕಾ, ಧೃತಿ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ರಾಂಪುರ MPCSಗೆ ಅವಿರೋಧ ಆಯ್ಕೆ.‌.!

ದೊಡ್ಡಬಳ್ಳಾಪುರ: ರಾಂಪುರ MPCSಗೆ ಅವಿರೋಧ ಆಯ್ಕೆ.‌.!

ದೊಡ್ಡಬಳ್ಳಾಪುರ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.

[ccc_my_favorite_select_button post_id="119927"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!