ಎರಡು ಭಾರಿ ನನ್ನ ಸೋಲಿಗೆ ಕಾಂಗ್ರೆಸ್ ಕಾರಣ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಇಂದು ವಿರುಪಾಕ್ಷಿಪುರ, ಮುಂಗಾಡಹಳ್ಳಿ, ಶ್ರೀನಿವಾಸಪುರ, ಬಲ್ಲಾಪಟ್ಟಣ, ಕಲರಹಳ್ಳಿ, ಅಂಚೀಪುರ ಗ್ರಾಮದಲ್ಲಿ ಬಿರುಸಿನ ಪ್ರಚಾರ ನಡೆಸಿದರು.ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಪಟಾಕಿ ಸಿಡಿಸಿ, ಹೂವಿನ ಸುರಿಮಳೆ ಸುರಿಸಿ ಅದ್ದೂರಿ ಸ್ವಾಗತಕೋರಿದರು

ಬೆಳಗ್ಗೆಯಿಂದಲೇ ಪ್ರಚಾರದಲ್ಲಿ ತೊಡಗಿದ ಅವರು; ಚನ್ನಪಟ್ಟಣದ ಕ್ಷೇತ್ರದ ವಿರುಪಾಕ್ಷಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪ್ರಚಾರ ಮಾಡಿದರು.ಶ್ರೀನಿವಾಸಪುರ ಗ್ರಾಮದಲ್ಲಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪರಿಹಾರ ಕೊಡಿಸುತ್ತೇನೆಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಅವರು, ಬಿಜೆಪಿ-ಜೆಡಿಎಸ್ ಮೊದಲನೇ ಬಾರಿ ಸಮ್ಮಿಶ್ರ ಸರ್ಕಾರ ಮಾಡಿತ್ತು. ಆಗ ಸಾರಾಯಿ, ಲಾಟರಿ ನಿಷೇಧ ಮಾಡಿದ್ರು. ಮಹಿಳೆಯರ ಗೌರವ ಉಳಿಸುವ ಕೆಲಸ ಮಾಡಿದ್ದರು ಈಗ ಆನ್ಲೈನ್ ಗೇಮಿಂಗ್ ಗೆ ಯುವಕರು ಬಲಿ ಆಗ್ತಿದ್ದಾರೆ.
ಅದರ ಮೇಲೆ ಹಾಕಿರೋ ಹಣ ವಾಪಸ್ಸ್ ಬರದಿದ್ದಾಗ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಇದನ್ನ ನಿಲ್ಲಿಸುತ್ತೇನೆ. ನನಗೆ ಒಂದು ಅವಕಾಶ ಕೊಡಿ ಇದಕ್ಕೆ ಕಡಿವಾಣ ಹಾಕ್ತೇನೆ ಎಂದು ಮಹಿಳೆಯರರಿಗೆ ನಿಖಿಲ್ ಅವರು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಒಬ್ಬರಿಗೆ ಕೊಟ್ಟು ಇನ್ನೊಬ್ಬರ ಬಳಿ ಕಿತ್ತುಕೊಳ್ಳುತ್ತಿದೆ. ಸರ್ಕಾರ ಮಹಿಳೆಯರಿಗೆ ಎರಡು ಸಾವಿರ ಕೊಟ್ಟು, ಮದ್ಯದ ದರ ಏರಿಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಅನಿರೀಕ್ಷಿತ. ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ ನಿಮ್ಮ ಆಶೀರ್ವಾದ ಬೆಂಬಲ ಇರಲಿ ಎಂದರು.

ಪ್ರತಿ ಹಳ್ಳಿಯಲ್ಲೂ ಒಳ್ಳೆಯ ರೆಸ್ಪಾನ್ಸ್ ಸಿಗ್ತಿದೆ

ಈಗಾಗಲೇ 110 ಹಳ್ಖಿಗಳಿಗೆ ಭೇಟಿ ನೀಡಿದ್ದೇನೆ.ಎಲ್ಲಾ ಕಡೆ ಒಳ್ಳೆಯ ರೆಸ್ಪಾನ್ಸ್ ಸಿಗ್ತಿದೆ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಕೆಲಸ ಮಾಡ್ತವ್ರೆ. ಮಂಡ್ಯ ಮತ್ತು ರಾಮನಗರದ ಮಧ್ಯ ಭಾಗದಲ್ಲಿ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆ ಮಾಡ್ತಿದ್ದೇವೆ. ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರ ಸಂಪರ್ಕ ಮಾಡಿ ಚರ್ಚೆ ಮಾಡಿದ್ದಾರೆ. ನಿರುದ್ಯೋಗ ಸಮಸ್ಯೆಗೆ ಪರಿಹಾರ ಕೊಡುವ ಕೆಲಸ ಆಗುತ್ತೆ ಎಂದು ನಿಖಿಲ್ ಅವರು ಭರವಸೆ ನೀಡಿದರು.

ಪ್ರಚಾರ ಇಲ್ಲದೆ ಕೆಲಸ ಮಾಡಿದ್ದೇವೆ

ಚನ್ನಪಟ್ಟಣಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ ಇದೆ ಎಂದು ತಿಳಿಸಿದರು. ಕಳೆದ 40 ವರ್ಷದಿಂದ ಈ ಭಾಗದಲ್ಲಿ ದೇವೇಗೌಡರು ಜನರ ಸಂಪರ್ಕ ಹೊಂದಿದ್ದಾರೆ.ನೀರಾವರಿ ಯೋಜನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈಗ ಬಂದು ಪಾಪ ಯಾರೋ ನಾನು ಭಗೀರಥ ಅಂತ ಹೇಳ್ಕೊಂಡು ಓಡಾಡ್ತವ್ರೆ. ನಾವು ಪ್ರಚಾರ ತೆಗೆದುಕೊಳ್ಳದೇ ಆತ್ಮಸಾಕ್ಷಿಗೆ ಕೆಲಸ ಮಾಡಿದ್ದೇವೆ ಎಂದು ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.

ಕೂಪನ್ ಕಾರ್ಡ್ ಹಂಚಿ ಸೋಲಿಸಿದ್ರು

ರಾಮನಗರದಲ್ಲಿ ಕೂಪನ್ ಕಾರ್ಡ್ ಹಂಚಿ ನನ್ನ ಸೋಲಿಸಿದ್ರು. ರಾತ್ರೋರಾತ್ರಿ ಎಲ್ಲರ ಮನೆಮನೆಗೆ ಹಂಚಿದ್ರು. ಆದರೆ ಕೂಪನ್ ಗೆ ಬೆಲೆ ಇಲ್ಲ, ಯಾರಿಗೂ ಅನುಕೂಲ ಆಗಲಿಲ್ಲ. ಹಾಗಾಗಿ ಇದರ ಬಗ್ಗೆ ಜನ ಎಚ್ಚರಿಕೆ ವಹಿಸಬೇಕು.

ಎರಡು ಬಾರಿ ಪೆಟ್ಟು ತಿಂದಿದ್ದೇನೆ, ನನ್ನ ಸೋಲಿಗೆ ಕಾಂಗ್ರೆಸ್ ಕಾರಣ. ಇಲ್ಲಿ ಕರೆತಂದು ಕುತ್ತಿಗೆ ಕೂಯ್ದರು.
2019ರಲ್ಲಿ ಅವರಿಗೆ ಯಾವರೀತಿ ನಾವು ಬೆಂಬಲ ಕೊಟ್ಟಿದ್ದೆವು ನೆನಸಿಕೊಳ್ಳಿ ಎಂದು ಡಿಕೆ ಸುರೇಶ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..

ಕುಮಾರಸ್ವಾಮಿಯವರು ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ದೇವೇಗೌಡರು ಇಗ್ಗಲೂರು ಜಲಾಶಯ ನಿರ್ಮಾಣ ಮಾಡಿದ್ದಾರೆ. ತಾಲೂಕಿನ ನೀರಾವರಿ ಯೋಜನೆಗೆ ಅವರ ಕೊಡುಗೆ ಶಾಶ್ವತವಾಗಿದೆ. ನೀರಾ ಚಳುವಳಿ ವೇಳೆ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿದ್ದರು ಎಂದರು ಅವರು.

ಮಂಡ್ಯ ಹಾಗೂ ರಾಮನಗರದಲ್ಲಿ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಒಬ್ಬ ಯುವಕನಾಗಿ, ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಅದಕ್ಕೆ ಕ್ಷೇತ್ರದ ಜನ ಅವಕಾಶ ಮಾಡಿಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಶಾಸಕ ಎಸ್ ಆರ್ ವಿಶ್ವನಾಥ್, ಮಾಜಿ ಶಾಸಕ, ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಜಯಮುತ್ತು, ಇಂಡವಾಳು ಸಚ್ಚಿದಾನಂದ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಟಿ ಶ್ರೀಕಂಠೇಗೌಡ ಸೇರಿದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಆನಂದ್ ಸ್ವಾಮಿ ಸೇರಿದಂತೆ ಅನೇಕ ನಾಯಕರು ನಿಖಿಲ್ ಅವರ ಜತೆಯಲ್ಲಿ ಇದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!