HDK ವಿರುದ್ಧ ವರ್ಣಬೇಧ ಹೇಳಿಕೆ; ಸಚಿವ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಮೈಬಣ್ಣವನ್ನು ನಿಂದಿಸಿ ಕೀಳಾಗಿ ವರ್ತಿಸಿದ್ದ ಸಚಿವ ಸಚಿವ ಜಮೀರ್‌ ಅಹಮದ್ ವಿರುದ್ಧ ಜೆಡಿಎಸ್ ಉಗ್ರ ಪತಿಭಟನೆ ನಡೆಸಿತು.

ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಜಮೀರ್ ಭೂತ ದಹನ ಮಾಡಿದರಲ್ಲದೆ, ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯ ಮಾಡಿದರು.

ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿ ಜಮೀರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಅಲ್ಲದೇ ಘೋಷಣೆಗಳ ಫಲಕಗಳನ್ನು ಪ್ರದರ್ಶಿಸಿ ಉಗ್ರ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಜನರ ಹೃದಯದಲ್ಲಿ ನನಗೆ ಸ್ಥಾನ ಸಿಗುವ ವಿಶ್ವಾಸ ಇದೆ: ನಿಖಿಲ್ ಕುಮಾರಸ್ವಾಮಿ

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡರು; ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಭಾಷೆ ಬಳಿಸಿರುವುದು ಅಕ್ಷಮ್ಯ. ಅವರ ಮಾತುಗಳು ಅವರ ಕೊಳಕು ಮನಸ್ಥಿತಿಯನ್ನು ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.

ಸರ್ಕಾರಕ್ಕೆ ನೈತಿಕತೆ ಇದ್ದರೆ ಕ್ರಮ ಕೈಗೊಳ್ಳಿ

ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ನೈತಿಕತೆ ಇದ್ದರೆ ಈ ಕ್ರಮ ಕೈಗೊಳ್ಳಬೇಕು ಎಂದರು ಅವರು.

ಕ್ರಮ ಜರುಗಿಸದಿದ್ದರೆ ರಾಜ್ಯಪಾಲರಿಗೆ ದೂರು
ಜಮೀರ್ ವರ್ಣಬೇಧ ನೀತಿ ಮೂಲಕ ಜನಾಂಗೀಯ ನಿಂದನೆ ಮಾಡಿದ್ದಾರೆ. ಒಕ್ಕಲಿಗ ಸಮುದಾಯವನ್ನು ಅಪಮಾನಿಸಿದ್ದಾರೆ. ಇನ್ನು ಮುಂದೆ ಇದೇ ರೀತಿ ನಾಲಿಗೆ ಹರಿಯಬಿಟ್ಟರೆ, ನಾಡಿನ ಜನರು ತಕ್ಕ ಶಾಸ್ತಿ ಮಾಡುತ್ತಾರೆ. ಒಂದು ವೇಳೆ ಸಂಪುಟದಿಂದ ವಜಾ ಮಾಡದಿದ್ದರೆ, ಜಮೀರ್ ಹೇಳಿಕೆ ವಿರೋಧಿಸಿ ಕಪ್ಪುಬಾವುಟ ಪ್ರದರ್ಶಿಸುತ್ತೇವೆ. ರಾಜ್ಯಪಾಲರು, ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡುತ್ತೇವೆ ಎಂದು ಅವರು ಹೇಳಿದರು.

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ಬಳಿಕ ಜಮೀರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿ ರಸ್ತೆಗೆ ಇಳಿದಾಗ ಮುಂಜಾಗ್ರತಾ ಕ್ರಮವಾಗಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಜಮೀರ್ ಅಹ್ಮದ್ ಹೇಳಿಕೆ ಅವರು ಶೋಭೆ ತರುವುದಿಲ್ಲ. ಅವರು ಇಂಥ ಕೆಟ್ಟ ಈ ರೀತಿ‌ ಹೇಳಿಕೆ ನೀಡಿದ್ದು‌ ಇದೇ ಮೊದಲಲ್ಲ, ಎಲ್ಲದಕ್ಕೂ ಒಂದು ತಾಳ್ಮೆ ಇರುತ್ತದೆ. ಕುಮಾರಣ್ಣ, ದೇವೇಗೌಡರ ಕುಟುಂಬದ ಖರೀದಿ ಮಾಡಲು ಜಮೀರ್ ಇನ್ನೊಂದು ಜನ್ಮ ಎತ್ತಿ ಬರಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷದ ಪರಮೋಚ್ಚ ನಾಯಕ ದೇವೇಗೌಡರು ಒಂದು ಸಮುದಾಯದ ನಾಯಕರಲ್ಲ. ರಾಜ್ಯದ ಏಳೂವರೆ ಕೋಟಿ ಜನರ ನಾಯಕ ದೇವೇಗೌಡರು. ಜಮೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ರಾಜ್ಯ ಸರ್ಕಾರ ಕೂಡಲೇ ಜಮೀರ್ ಅವರನ್ನ ವಜಾ‌ಗೊಳಿಸಬೇಕು ಎಂದು ಆಗ್ರಹಿಸಿದರು.

ಶೈಲಜಾ ರಾವ್, ನಾರಾಯಣ ಸ್ವಾಮಿ, ರಮೇಶ್ ರಾವ್, ಮಂಗಳಮ್ಮ, ಹರಿಬಾಬು, ಮುನಿಸ್ವಾಮಿ, ಸಯ್ಯದ್ ಸೇರಿದಂತೆ ಪಕ್ಷದ ಬೆಂಗಳೂರಿನ ಅನೇಕ ಮುಖಂಡರು ಭಾಗಿಯಾಗಿದ್ದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!